ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಗೆ 40 ಸೀಟು ಪಕ್ಕಾ: ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೊಸ ಲೆಕ್ಕ!

ಮೇ 10 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಸುಮಾರು 40 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಮೇ 10 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಸುಮಾರು 40 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಶುಕ್ರವಾರ ಮಾಜಿ ಶಾಸಕರಾದ ರಘು ಆಚಾರ್, ದೊಡ್ಡಪ್ಪಗೌಡ ಪಾಟೀಲ, ಗುರುಲಿಂಗಪ್ಪಗೌಡ, ಗುರು ಪಾಟೀಲ ಸೇರಿದಂತೆ ನೂರಾರು ಕಾರ್ಯಕರ್ತರನ್ನು ಪಕ್ಷಕ್ಕೆ ಸ್ವಾಗತಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಕೂಡ ಜೆಡಿಎಸ್‌ಗೆ ಸೇರ್ಪಡೆಯಾದರು.

ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ದುರ್ಬಲವಾಗಿದೆ ಎಂದು ಜೆಡಿಎಸ್ ವಿರುದ್ಧ ಯೋಜಿತ ಅಪಪ್ರಚಾರ ನಡೆಯುತ್ತಿದೆ ಎಂದು  ಕುಮಾರಸ್ವಾಮಿ ಆರೋಪಿಸಿದರು. ಉತ್ತರ ಕರ್ನಾಟಕ ಭಾಗದಲ್ಲಿಯೂ 25-30 ಸೀಟು ಗೆಲ್ಲಬಹುದು ಎಂದು ಈ ಹಿಂದೆ ಅಂದಾಜಿಸಲಾಗಿತ್ತು. ಆದರೆ ಈಗ ಅಲ್ಲಿ 40 ಸೀಟು ದಾಟಬಹುದು ಎಂದು ಹೇಳಿದ ಅವರು, ಶೀಘ್ರದಲ್ಲೇ ಬೇರೆ ಪಕ್ಷಗಳ ನಾಯಕರು ಜೆಡಿಎಸ್ ಸೇರಲಿದ್ದಾರೆ ಎಂದರು.

ಇನ್ನೆರಡು ದಿನಗಳಲ್ಲಿ ಬೆಳಗಾವಿ ಜಿಲ್ಲೆಯಿಂದ ಬೇರೆ ಪಕ್ಷಗಳ ದೊಡ್ಡ ನಾಯಕರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಜಿಲ್ಲೆಯಲ್ಲಿ ಪಕ್ಷ 7-8 ಸ್ಥಾನ ಗೆಲ್ಲುವ ಸಾಧ್ಯತೆ ಇದೆ ಎಂದರು. ಕಲಬುರಗಿ, ಕಾರವಾರ, ಮಂಗಳೂರು, ಚಿತ್ರದುರ್ಗ, ತುಮಕೂರಿನ ಮುಖಂಡರು ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಈಗ ಜೆಡಿಎಸ್‌ನ ಬಲವನ್ನು ಇತರ ಪಕ್ಷಗಳು ಅರಿತುಕೊಳ್ಳುತ್ತಿವೆ, ನಾಯಕರು ಪಕ್ಷ ಸೇರುವುದು ಮುಂಬರುವ ಚುನಾವಣೆಗೆ ದಿಕ್ಸೂಚಿ ಎಂದು ಕುಮಾರಸ್ವಾಮಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com