ವರುಣಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಫಿಕ್ಸ್: ಕೋಲಾರಕ್ಕೆ ಡಿಕೆಶಿ ಶಿಷ್ಯ ಕೊತ್ತೂರು ಮಂಜುನಾಥ್

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದ ಜೊತೆಗೆ ಕೋಲಾರದಿಂದ ಸ್ಪರ್ಧಿಸುವ ಯೋಚನೆಯಲ್ಲಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಪ್ಲಾನ್ ಕೈಬಿಟ್ಟಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ಮತ್ತು ಕೊತ್ತೂರು ಮಂಜುನಾಥ್
ಸಿದ್ದರಾಮಯ್ಯ ಮತ್ತು ಕೊತ್ತೂರು ಮಂಜುನಾಥ್
Updated on

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದ ಜೊತೆಗೆ ಕೋಲಾರದಿಂದ ಸ್ಪರ್ಧಿಸುವ ಯೋಚನೆಯಲ್ಲಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಪ್ಲಾನ್ ಕೈಬಿಟ್ಟಿದ್ದಾರೆ ಎನ್ನಲಾಗಿದೆ.

ತಮ್ಮ ಆಪ್ತರಾಜ ಕೆ.ಜೆ.ಜಾರ್ಜ್, ಬೈರತಿ ಸುರೇಶ್ ಸೇರಿದಂತೆ ಹಿತೈಷಿಗಳ ಜೊತೆ ಚರ್ಚಿಸಿರುವ ಸಿದ್ದರಾಮಯ್ಯ  ವರುಣಾ ಕ್ಷೇತ್ರ ಸುರಕ್ಷಿತ ಕ್ಷೇತ್ರವಾಗಿದೆ ಕೋಲಾರದಿಂದ ಸ್ಪರ್ಧಿಸುವ ಅಗತ್ಯವಿಲ್ಲ ಎಂದು ಅವರು ಸಲಹೆ ನೀಡಿದ ಬಳಿಕ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಸಿದ್ದರಾಮಯ್ಯ ಆಪ್ತ ಮೂಲಗಳು ತಿಳಿಸಿವೆ. ಎರಡು ಸ್ಥಾನಗಳಲ್ಲಿ ಸ್ಪರ್ಧಿಸುವುದು ವ್ಯತಿರಿರಕ್ತವಾಗಿದ್ದು ಮತದಾರರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ವರುಣಾದಿಂದ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಬಿಜೆಪಿ ಕಣಕ್ಕಿಳಿಸಿರುವ ಹಿನ್ನೆಲೆಯಲ್ಲಿ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರೊಂದಿಗೆ ಗೌಪ್ಯ ಸಭೆ ನಡೆಸಿ ವರುಣಾ ದಲ್ಲೆ ಹೆಚ್ಚಿನ ಪ್ರಚಾರ ನಡೆಸಿ ಕೋಲಾರದಿಂದ ಸ್ಪರ್ಧಿಸುವ ಯೋಚನೆ ಕೈಬಿಡಬೇಕು ಎಂದು ತೀರ್ಮಾನಿಸಿದ್ದಾರೆ.

ಕೆ.ಜೆ.ಜಾರ್ಜ್, ಬೈರತಿ ಸುರೇಶ್ ಸೇರಿದಂತೆ ಅವರ ಹಿತೈಷಿಗಳು ವರುಣಾ ಸುರಕ್ಷಿತ ಕ್ಷೇತ್ರವಾಗಿದ್ದು, ಕೋಲಾರದಿಂದ ಸ್ಪರ್ಧಿಸುವ ಅಗತ್ಯವಿಲ್ಲ ಎಂದು ಸಲಹೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ಟಿಎನ್‌ಐಇಗೆ ತಿಳಿಸಿವೆ. ಎರಡು ಸ್ಥಾನಗಳಿಂದ ಸ್ಪರ್ಧಿಸುವುದರಿಂದ ಎರಡು ಕ್ಷೇತ್ರಗಳ ಮತದಾರರಿಗೆ ತಪ್ಪು ಸಂದೇಶ ರವಾನೆಯಾಗಬಹುದು ಎಂಬ ಕಾರಣವನ್ನು ಮುಂದಿಡಲಾಗಿದೆ. ಅದೂ ಅಲ್ಲದೆ, ಸಿದ್ದರಾಮಯ್ಯನವರಿಗೆ ರಾಜ್ಯದೆಲ್ಲೆಡೆ ಸಂಚರಿಸಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಪ್ರಚಾರ ನಡೆಸುವುದು ಕಷ್ಟವಾಗಲಿದೆ.

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧಿಸುವ ಸಾಧ್ಯತೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ , ಪಕ್ಷದ ಮೂರನೇ ಪಟ್ಟಿಯು ಯಾವುದೇ ಸಮಯದಲ್ಲಿ ರಿಲೀಸ್ ಆಗಲಿದ್ದು ಎಲ್ಲಾ ಊಹಾಪೋಹಗಳಿಗೆ ಅಂತ್ಯ ಹಾಡಲಿದೆ ಎಂದಿದ್ದಾರೆ.

ಮೂಲಗಳ ಪ್ರಕಾರ ಕೋಲಾರಕ್ಕೆ ಕೊತ್ತೂರು ಮಂಜುನಾಥ್ ಅವರ ಹೆಸರನ್ನು ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ. ನಕಲಿ ಎಸ್‌ಸಿ ಪ್ರಮಾಣಪತ್ರದ ಕುರಿತು ನ್ಯಾಯಾಲಯದ ಮೊಕದ್ದಮೆ ಎದುರಿಸುತ್ತಿರುವ ಕಾರಣ ಮತ್ತು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅವಧಿ ಮುಗಿಯುವ ಮೊದಲು ತೀರ್ಪು ಬರುವ ಸಾಧ್ಯತೆಯಿಲ್ಲ ಹೀಗಾಗಿ ಅವರು ಎಸ್‌ಸಿ ವರ್ಗಕ್ಕೆ ಮೀಸಲಾದ ಮುಳಬಾಗಲು ವಿಧಾನಸಭಾ ಸ್ಥಾನದಿಂದ ಹೊರಗುಳಿಯಬಹುದು.

ವಾಸ್ತವವಾಗಿ, ಕೊತ್ತೂರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಆಪ್ತ ಶಿಷ್ಯ ಹೀಗಾಗಿ ಕೊತ್ತೂರು ಸಲುವಾಗಿ ಕೋಲಾರ ಮತ್ತು ಮುಳಬಾಗಲು ಎರಡೂ ಸ್ಥಾನಗಳನ್ನು ಖಾಲಿ ಇರಿಸಿದ್ದಾರೆ.  ರಾಮನಗರದಿಂದ ಬಂದಿರುವ ಕೊತ್ತೂರು ಸಂಬಂಧಿ ಮಂಜುಶ್ರೀ ಅವರಿಗೆ ಮುಳಬಾಗಲು  ಕ್ಷೇತ್ರಗಳ ಟಿಕೆಟ್ ನೀಡುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ, ಏಕೆಂದರೆ ಅವರು ನಿಜವಾದ ಎಸ್‌ಸಿ ಜಾತಿ ಪ್ರಮಾಣಪತ್ರವನ್ನು ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com