ರಾಹುಲ್ ಗಾಂಧಿ ನಾಳೆ ರಾಜ್ಯಕ್ಕೆ ಆಗಮನ: ಕೋಲಾರದಲ್ಲಿ ರ್‍ಯಾಲಿಯನ್ನುದ್ದೇಶಿಸಿ ಭಾಷಣ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಕೋಲಾರದಲ್ಲಿ ರ್‍ಯಾಲಿಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾನನಷ್ಟ ಪ್ರಕರಣದಲ್ಲಿ ಸಂಸತ್ತಿನಿಂದ ಅರ್ನಹಗೊಂಡಿರುವ ರಾಹುಲ್ ಗಾಂಧಿ ಕೋಲಾರದಲ್ಲಿಯೇ ಮೋದಿ ಉಪನಾಮ ಕುರಿತು ಟೀಕೆ ಮಾಡಿದ್ದರು.
Published: 15th April 2023 08:35 PM | Last Updated: 15th April 2023 08:49 PM | A+A A-

ರಾಹುಲ್ ಗಾಂಧಿ
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಕೋಲಾರದಲ್ಲಿ ರ್‍ಯಾಲಿಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾನನಷ್ಟ ಪ್ರಕರಣದಲ್ಲಿ ಸಂಸತ್ತಿನಿಂದ ಅರ್ನಹಗೊಂಡಿರುವ ರಾಹುಲ್ ಗಾಂಧಿ ಕೋಲಾರದಲ್ಲಿಯೇ ಮೋದಿ ಉಪನಾಮ ಕುರಿತು ಟೀಕೆ ಮಾಡಿದ್ದರು.
ಮೊದಲು ಬೆಂಗಳೂರಿಗೆ ಆಗಮಿಸಲಿರುವ ರಾಹುಲ್ ನಂತರ ನೆರೆಯ ಕೋಲಾರಕ್ಕೆ ತೆರಳಿ ಜೈಭಾರತ್ ಸಮಾವೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮೊದಲಿಗೆ ಏಪ್ರಿಲ್ 5, 9 ರಂದು ರ್‍ಯಾಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಅಂತಿಮವಾಗಿ
16ಕ್ಕೆ ನಿಗದಿಪಡಿಸಲಾಯಿತು.
ಕಾಂಗ್ರೆಸ್ ಪಕ್ಷವು ಕರುನಾಡನ್ನು ಹೊಸ ಎತ್ತರಕ್ಕೇರಿಸುವ ದಿನಗಳು ಸಮೀಪದಲ್ಲಿದೆ. ಶ್ರೀ @RahulGandhi ಅವರು ಚಿನ್ನದನಾಡು ಕೋಲಾರದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಇದನ್ನು ಪುಷ್ಠೀಕರಿಸಲಿದ್ದಾರೆ. ನಾಳೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾರ್ವಜನಿಕ ಅನುಕೂಲಕ್ಕಾಗಿ ಸಕಲ ಸಿದ್ಧತೆಗಳು ನಡೆದಿದ್ದು, ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದೆ. pic.twitter.com/13od1TzoFt
— DK Shivakumar (@DKShivakumar) April 15, 2023
ನಂತರ ಬೆಂಗಳೂರಿನ ಕಾಂಗ್ರೆಸ್ ಪ್ರಧಾನ ಕಛೇರಿ ಬಳಿ 'ಇಂದಿರಾ ಗಾಂಧಿ ಭವನ'ವನ್ನು ರಾಹುಲ್ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಪಾಲ್ಗೊಳ್ಳುವ ನಿರೀಕ್ಷೆಯಿದೆ.
2019ರ ಲೋಕಸಭೆ ಚುನಾವಣೆಯ ರ್‍ಯಾಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಪರ ಮತ ಯಾಚಿಸಿ ಮಾತನಾಡಿದ ರಾಹುಲ್ ಗಾಂಧಿ, ಏಕೆ ಎಲ್ಲಾ ಕಳ್ಳರೂ ಮೋದಿ ಹೆಸರು ಹೊಂದಿದ್ದಾರೆ ಎಂದು ಆರೋಪಿಸಿದ್ದರು.