ಸಕ್ರಿಯ ರಾಜಕಾರಣಕ್ಕೆ ಕಾಂಗ್ರೆಸ್ ಹಿರಿಯ ನಾಯಕ ವಿಆರ್ ಸುದರ್ಶನ್ ನಿವೃತ್ತಿ ಘೋಷಣೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.
Published: 15th April 2023 03:40 PM | Last Updated: 15th April 2023 04:06 PM | A+A A-

ಕಾಂಗ್ರೆಸ್ ಹಿರಿಯ ನಾಯಕ ವಿಆರ್ ಸುದರ್ಶನ್
ಕೋಲಾರ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಕೋಲಾರ ನಗರದಲ್ಲಿ ಇಂದು ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಮಾಡಿ ಮಾತನಾಡಿದ ಸುದರ್ಶನ್, 'ಕಳೆದ ಹಲವು ದಶಕಗಳಿಂದ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದು, ಇದೀಗ ಕಾರಣಾಂತರಗಳಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ. ಏಪ್ರಿಲ್ 25-26 ರ ನಂತರ ತಮ್ಮ ನಿರ್ಧಾರದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡುವುದಾಗಿ ಅವರು ಹೇಳಿದರು.
ಇದೇ ವೇಳೆ ಅವರು ರಾಜಕೀಯದಿಂದ ನಿವೃತ್ತಿಯಾದ ನಂತರವೂ ಸಾಮಾಜಿಕ ಮತ್ತು ಅಭಿವೃದ್ಧಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತೇನೆ ಎಂದಿದ್ದಾರೆ.
ಸುದರ್ಶನ್ ಅವರು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.