ರಾಜ್ಯದಲ್ಲಿ ಯಾರು ಬೇಕಾದರೂ ಸಿಎಂ ಆಗಲಿ, ಆ ಹುದ್ದೆ ನನಗೆ ಬೇಡ: ಮಲ್ಲಿಕಾರ್ಜುನ ಖರ್ಗೆ

ಮುಖ್ಯಮಂತ್ರಿ ಹುದ್ದೆಗಾಗಿ ಗಲಾಟೆ ಮಾಡುವುದನ್ನು ಮೊದಲು ನಿಲ್ಲಿಸಿ. ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ. ಆ ಪಟ್ಟ ನನಗೆ ಬೇಡ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಅಷ್ಟೆ ಎಂದು ಎಐಸಿಸಿ ಅಧ್ಯಕ್ಷ...
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ಕೋಲಾರ: ಮುಖ್ಯಮಂತ್ರಿ ಹುದ್ದೆಗಾಗಿ ಗಲಾಟೆ ಮಾಡುವುದನ್ನು ಮೊದಲು ನಿಲ್ಲಿಸಿ. ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ. ಆ ಪಟ್ಟ ನನಗೆ ಬೇಡ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಅಷ್ಟೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಹೇಳಿದ್ದಾರೆ.

ಇಂದು ಕೋಲಾರದಲ್ಲಿ ನಡೆದ ಕಾಂಗ್ರೆಸ್ ನ ‘ಜೈ ಭಾರತ’ ಸಮಾವೇಶದಲ್ಲಿ ಮಾತನಾಡಿದ ಖರ್ಗೆ, ಸಿಎಂ ಯಾರಾಗಬೇಕೆಂದು ಕಾಂಗ್ರೆಸ್ ನಾಯಕರು ತಲೆ ಕೆಡಿಸಿಕೊಳ್ಳಬೇಡಿ. ರಾಜ್ಯದ ಜನರ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳಿ. ಪಕ್ಷಕ್ಕೆ ಬಹುಮತ ಬಂದಾಗ ಸಿಎಂ ಬಗ್ಗೆ ಶಾಸಕರು ನಿರ್ಧರಿಸುತ್ತಾರೆ ಎಂದರು.

ರಾಜ್ಯ ಕಾಂಗ್ರೆಸ್​ನ ಎಲ್ಲಾ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ಚುನಾವಣೆಯಲ್ಲಿ 130 ರಿಂದ 140 ಸೀಟು ಗೆಲ್ಲಬೇಕು ಎಂದು ಕೋಲಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಖಡಕ್ ಸಂದೇಶ ನೀಡಿದ್ದಾರೆ.

ಇದೇ ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ, ಡಬಲ್​ ಇಂಜಿನ್​ ಸರ್ಕಾರ ಅಂತಾರೆ, ಹೊಸ ಯೋಜನೆ ತಂದಿಲ್ಲ. ಹಳೇ ಡಬ್ಬಿಗೆ ಹೊಸ ಇಂಜಿನ್​ ಕಲರ್​ ಹಚ್ಚುತ್ತಿದ್ದಾರೆ. ಈ ಬಿಜೆಪಿ ಸರ್ಕಾರ ತೆಗೆಯದಿದ್ದರೆ ಯಾವುದೇ ಅಭಿವೃದ್ಧಿ ಆಗಲ್ಲ ಎಂದರು.

ಮೋದಿ ಸರ್ಕಾರದ ಬಗ್ಗೆ ಜನತೆ ಬೇಸತ್ತಿದ್ದಾರೆ. ಅದಕ್ಕಿಂತ ಹೆಚ್ಚಾಗಿ 40 ಪರ್ಸೆಂಟ್ ಬಿಜೆಪಿ ಸರ್ಕಾರದ ಮೇಲೆ ಬೇಸತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇಲ್ಲಿಗೆ ಏನು ಕೊಟ್ಟಿದೆ ಎಂದು ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com