ಕರ್ನಾಟಕದಲ್ಲಿ ಬಿಜೆಪಿ 'ಇಸ್ಪೀಟ್ ಎಲೆ'ಯಂತೆ ಬೀಳುತ್ತಿದೆ: ಕಾಂಗ್ರೆಸ್

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷ ಸೇರಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಇಸ್ಪೀಟ್ ಎಲೆಯಂತೆ ಬೀಳುತ್ತಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. 
ಖರ್ಗೆ, ಶೆಟ್ಟರ್, ಕೆ.ಸಿ. ವೇಣುಗೋಪಾಲ್
ಖರ್ಗೆ, ಶೆಟ್ಟರ್, ಕೆ.ಸಿ. ವೇಣುಗೋಪಾಲ್

ಬೆಂಗಳೂರು: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷ ಸೇರಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಇಸ್ಪೀಟ್ ಎಲೆಯಂತೆ ಬೀಳುತ್ತಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. 

ಶೆಟ್ಟರ್ ಪಕ್ಷ ಸೇರ್ಪಡೆ ಕುರಿತು  ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಕರ್ನಾಟಕ ರಾಜಕೀಯದಲ್ಲಿ ಭಾರಿ ಬದಲಾವಣೆ! ಮಾಜಿ ಸಿಎಂ ಮತ್ತು ರಾಜ್ಯಾದ್ಯಂತ  ಗೌರವಾನ್ವಿತ ನಾಯಕರಾದ ಜಗದೀಶ್ ಶೆಟ್ಟರ್ ಅವರಿಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವ ಹಾದಿಯಲ್ಲಿದೆ. ಬಿಜೆಪಿ ಇಸ್ಪೀಟ್ ಎಲೆಯಂತೆ ಬೀಳುತ್ತಿದೆ ಎಂದು ಜೈರಾಮ್ ರಮೇಶ್ ಟೀಕಿಸಿದ್ದಾರೆ. 

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ (ಕೇಂದ್ರ) ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದರು. ಆರು ಬಾರಿ ಶಾಸಕರಾಗಿರುವ 67 ವರ್ಷ ವಯಸ್ಸಿನ  ಶೆಟ್ಟರ್ ಅವರು ಕೊನೆಯ ಬಾರಿಗೆ ಸ್ಪರ್ಧಿಸಲು ಬಯಸಿದ್ದರು. ಬಿಜೆಪಿಯಿಂದ ಟಿಕೆಟ್ ನಿರಾಕರಿಸುವ ಮೂಲಕ ಅವಮಾನ ಮಾಡಲಾಗಿದೆ. ಪಕ್ಷದ ಇಂದು ಕೆಲವೇ ಜನರ ಹಿಡಿತದಲ್ಲಿದೆ ಎಂದು ಶೆಟ್ಟರ್ ಕಾಂಗ್ರೆಸ್ ಸೇರಿದ ನಂತರ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com