ಜಗದೀಶ್ ಶೆಟ್ಟರ್ ಗೆ ನಾವು ಯಾವ ಆಫರ್ ಕೊಟ್ಟಿಲ್ಲ, ಸ್ವಾಭಿಮಾನಕ್ಕಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ: ಡಿ ಕೆ ಶಿವಕುಮಾರ್

ಜಗದೀಶ್ ಶೆಟ್ಟರ್ ಅವರಿಗೆ ನಾವು ಯಾವುದೇ ಆಫರ್ ಕೊಟ್ಟಿಲ್ಲ, ಅವರು ಕೂಡ ಏನೂ ಬೇಡಿಕೆಯಿಟ್ಟಿಲ್ಲ, ಬಿಜೆಪಿಯಲ್ಲಿ ಅವಮಾನವಾಗಿ ನೊಂದು ಅವರು ಪಕ್ಷ ತ್ಯಜಿಸಿದ್ದಾರೆ, ಇಂದು ಮಲ್ಲಿಕಾರ್ಜುನ ಖರ್ಗೆಯವರ ಸಮ್ಮುಖದಲ್ಲಿ ಮಾತನಾಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಬೆಂಗಳೂರು: ಜಗದೀಶ್ ಶೆಟ್ಟರ್ ಅವರಿಗೆ ನಾವು ಯಾವುದೇ ಆಫರ್ ಕೊಟ್ಟಿಲ್ಲ, ಅವರು ಕೂಡ ಏನೂ ಬೇಡಿಕೆಯಿಟ್ಟಿಲ್ಲ, ಬಿಜೆಪಿಯಲ್ಲಿ ಅವಮಾನವಾಗಿ ನೊಂದು ಅವರು ಪಕ್ಷ ತ್ಯಜಿಸಿದ್ದಾರೆ, ಇಂದು ಮಲ್ಲಿಕಾರ್ಜುನ ಖರ್ಗೆಯವರ ಸಮ್ಮುಖದಲ್ಲಿ ಮಾತನಾಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಇನ್ನು ಕೆಲವೇ ಕ್ಷಣಗಳಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಸಮ್ಮುಖದಲ್ಲಿ ಸುದ್ದಿಗೋಷ್ಠಿ ನಡೆಯಲಿದ್ದು ಅದರಲ್ಲಿ ಜಗದೀಶ್ ಶೆಟ್ಟರ್ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ಕಾಂಗ್ರೆಸ್ ನಾಯಕರು ಕೆಪಿಸಿಸಿ ಕಚೇರಿಗೆ ಆಗಮಿಸಿದ್ದಾರೆ. ಅವರ ಜೊತೆಗೆ ಜಗದೀಶ್ ಶೆಟ್ಟರ್ ಅವರು ಕೂಡ ಇದ್ದಾರೆ.

ಆತ್ಮಗೌರವಕ್ಕಾಗಿ, ಸ್ವಾಭಿಮಾನಕ್ಕಾಗಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಬಿಜೆಪಿಯಲ್ಲಿ ಅವರಿಗೆ ಅವಮಾನವಾಗಿದೆ. ಅವರ ಜೊತೆ ಅನೇಕ ಲಿಂಗಾಯತ ನಾಯಕರು ಮುಖಂಡರು ಕೂಡ ಬಿಜೆಪಿ ತೊರೆಯಲಿದ್ದಾರೆ, ಬಹಳಷ್ಟು ಜನ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದರು. 

ಇನ್ನು ಸಿದ್ದರಾಮಯ್ಯ ಅವರು ಜಗದೀಶ್ ಶೆಟ್ಟರ್ ಪಕ್ಷ ಸೇರ್ಪಡೆಯಾಗಲಿ, ಆಮೇಲೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು. ಇನ್ನು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಂದೀಪ್ ಸುರ್ಜೆವಾಲಾ, ಇನ್ನು ಸ್ವಲ್ಪ ಹೊತ್ತು ಕಾಯಿರಿ ಎಲ್ಲವೂ ಗೊತ್ತಾಗಲಿದೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com