2024ರ ಲೋಕಸಭೆ ಮೇಲೆ ಕಣ್ಣು: ವಿರೋಧ ಪಕ್ಷಗಳ ನಾಯಕರಿಂದ ಕರ್ನಾಟಕದಲ್ಲಿ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಪ್ರಯತ್ನ

ಮೇ 10 ರಂದು ನಡೆಯಲಿರುವ ಕರ್ನಾಟಕ ಚುನಾವಣೆಗಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಡಿಎಂಕೆ ನಾಯಕಿ ಕನ್ನಿಮೋಳಿ ಪ್ರಚಾರ ಮಾಡುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಇಂತಹ ಪ್ರಯತ್ನ ಮಾಡುತ್ತಿದೆ. 
ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್
ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ಚುನಾವಣೆಗಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಡಿಎಂಕೆ ನಾಯಕಿ ಕನ್ನಿಮೋಳಿ ಪ್ರಚಾರ ಮಾಡುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಇಂತಹ ಪ್ರಯತ್ನ ಮಾಡುತ್ತಿದೆ. 

ತಮಿಳುನಾಡು ಗಡಿಯಲ್ಲಿರುವ ಕರ್ನಾಟಕದಲ್ಲಿ ಶೇ.5 ರಷ್ಟು ತಮಿಳು ಜನರು ವಾಸಿಸುತ್ತಿದ್ದು, ಬೆಂಗಳೂರು, ಮೈಸೂರು, ಕೋಲಾರ, ಚಾಮರಾಜನಗರ, ಹುಬ್ಬಳ್ಳಿ ಮತ್ತು ಶಿವಮೊಗ್ಗದಲ್ಲಿ ಹೆಚ್ಚಿನ ಸಂಖ್ಯೆಯ ತಮಿಳು ಮತದಾರರಿದ್ದಾರೆ. ದ್ರಾವಿಡನ್ ಮತಗಳ ಮೇಲೆ ಕಣ್ಣೀಟ್ಟಿರುವ ಕಾಂಗ್ರೆಸ್, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಡಿಎಂಕೆ ನಾಯಕಿ ಕನ್ನಿಮೋಳಿ ಅವರು ಪ್ರಚಾರ ಮಾಡಿದರೆ ರಾಜ್ಯದಲ್ಲಿ ತಮಿಳು ಮತದಾರರಿಂದ ಪಕ್ಷಕ್ಕೆ ನೆರವಾಗಲಿದೆ ಎಂದು ಭಾವಿಸಿದೆ. 

ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ನಡೆಸಲು ಅನೇಕ ವಿಪಕ್ಷಗಳ ಮುಖಂಡರೊಂದಿಗೆ ಕಾಂಗ್ರೆಸ್ ಮಾತುಕತೆ ನಡೆಸುತ್ತಿದೆ ಎಂದು ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com