ಲಿಂಗಾಯತ ಮತದಾರರು ಬಿಜೆಪಿಯ ಕೈ ಬಿಡುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಲಿಂಗಾಯತ ಮತದಾರರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದರು. 
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಲಿಂಗಾಯತ ಮತದಾರರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದರು. 

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಾಂಗ್ರೆಸ್ ಕೆಲವು ಬಿಜೆಪಿ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡಿರಬಹುದು. ಆದರೆ, ಅದು ನಮ್ಮ ಮತದಾರರನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ' ಎಂದರು.

ಬಿಎಸ್ ಯಡಿಯೂರಪ್ಪ ಬಿಜೆಪಿ ಜೊತೆ ಇರುವವರೆಗೂ ಲಿಂಗಾಯತ ಮತಗಳು ಪಕ್ಷದಲ್ಲೇ ಇರುತ್ತವೆ ಎಂದ ಅವರು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರುವುದರಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿಗಳಾದ ವೀರೇಂದ್ರ ಪಾಟೀಲ್, ಡಿ ದೇವರಾಜ್ ಅರಸ್ ಮತ್ತು ಎಸ್ ಬಂಗಾರಪ್ಪ ಅವರನ್ನು ಉಚ್ಚಾಟಿಸಿದ ಪಕ್ಷಕ್ಕೆ ಶೆಟ್ಟರ್ ಸೇರಿಕೊಂಡಿದ್ದಾರೆ. ಕಾಂಗ್ರೆಸ್ ಈಗ ಶೆಟ್ಟರ್ ಅವರನ್ನು ಸ್ವಾಗತಿಸಿದೆ. ಆದರೆ, ವಿಧಾನಸಭೆ ಚುನಾವಣೆ ಮುಗಿದ ನಂತರ ಅವರಿಗೆ ಮುಖಭಂಗವಾಗುತ್ತದೆ ಎಂದು ತಿಳಿಸಿದರು.

ಬಿಜೆಪಿ ನಾಯಕತ್ವ ತನ್ನನ್ನು ಬದಿಗೊತ್ತಿದೆ ಎಂಬ ಶೆಟ್ಟರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಯಾರಾದರೂ ಪಕ್ಷ ತೊರೆಯುವಾಗ ಕೆಲವು ಕಾರಣಗಳನ್ನು ನೀಡಬೇಕಾಗುತ್ತದೆ. ಶೆಟ್ಟರ್ ಅವರಿಗೆ ಇದೊಂದು ಕಾರಣ. ಆದರೆ, ಇದು ಸ್ವೀಕಾರಾರ್ಹವಲ್ಲ. ಕಳೆದ 25 ವರ್ಷಗಳಲ್ಲಿ ಪಕ್ಷ ಅವರಿಗೆ ಪ್ರಮುಖ ಸ್ಥಾನ, ಹುದ್ದೆಗಳನ್ನು ನೀಡಿ ಸಿಎಂ ಕೂಡ ಮಾಡಿದೆ. ಶೆಟ್ಟರ್ ಅವರನ್ನು ಪಕ್ಷದಿಂದ ಕಡೆಗಣಿಸಿರುವ ಪ್ರಶ್ನೆಯೇ ಇಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com