ಬೆಂಗಳೂರು: ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿರುವ ಆಮ್ ಆದ್ಮಿ ಪಕ್ಷ ಈ ಬಾರಿಯ ಚುನಾವಣೆ ಮೂಲಕ ಕರ್ನಾಟಕ ವಿಧಾನಸಭೆ ಪ್ರವೇಶಿಸುವ ಕನಸು ಕಂಡಿದೆ. ಈ ನಿಟ್ಟಿನಲ್ಲಿ ಪಕ್ಷದ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ನಾಲ್ಕನೇ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದೆ.
ಈ ಮಧ್ಯೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ರೋಣದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ತೆರೆದ ವಾಹನದಲ್ಲಿ ತೆರಳಿದ ಮಾನ್, ಎಎಪಿ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ ಪರ ಮತ ಯಾಚಿಸಿದ್ದಾರೆ. ಈ ರೋಡ್ ಶೋಗೆ ಜನಸಾಗರವೇ ಹರಿದು ಬಂದಿದ್ದು, ಹೂಮಳೆ ಸುರಿದು ಹರ್ಷೋದ್ಘಾರ ಮಾಡಿದ್ದಾರೆ.
ಇದೇ ವೇಳೆ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಡೋಲು ಬಾರಿಸಿ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ ಅವರ ಪರ ಪ್ರಚಾರ ನಡೆಸಿದ್ದಾರೆ. ಕರ್ನಾಟಕ ರಾಜ್ಯ ಸಮಸ್ಯೆಗಳಿಗೆ ಪೊರಕೆಯೊಂದೇ ಪರಿಹಾರ ಎಂದು ಹೇಳುವ ಮೂಲಕ ಮತದಾರರಲ್ಲಿ ಮತಯಾಚಿಸಲಾಗುತ್ತಿದೆ.
Advertisement