ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ, ಪುಲಿಕೇಶಿ ನಗರದಿಂದ ಎಸಿ ಶ್ರೀನಿವಾಸ್ ಕಣಕ್ಕೆ

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರತಿಪಕ್ಷ ಕಾಂಗ್ರೆಸ್ ಬುಧವಾರ ತನ್ನ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದ್ದು, ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ಹಾಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬದಲಿಗೆ...
ಕಾಂಗ್ರೆಸ್
ಕಾಂಗ್ರೆಸ್

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರತಿಪಕ್ಷ ಕಾಂಗ್ರೆಸ್ ಬುಧವಾರ ತನ್ನ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದ್ದು, ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ಹಾಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬದಲಿಗೆ ಎ.ಸಿ. ಶ್ರೀನಿವಾಸ್ ಅವರಿಗೆ ಟಿಕೆಟ್ ನೀಡಲಾಗಿದೆ.

ಎಐಸಿಸಿ ಇಂದು ಮೂವರು ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಪ್ರಕಟಿಸಿದ್ದು, ಪುಲಿಕೇಶಿ ನಗರದಿಂದ ಎಸಿ ಶ್ರೀನಿವಾಸ್, ಕೆಆರ್ ಪುರಂ ವಿಧಾನಸಭಾ ಕ್ಷೇತ್ರದಿಂದ ಡಿಕೆ ಮೋಹನ್ ಬಾಬು ಹಾಗೂ ಮುಳಬಾಗಿಲು ಕ್ಷೇತ್ರದಿಂದ ಡಾ. ಬಿಸಿ. ಮುದ್ದು ಗಂಗಾಧರ ಅವರನ್ನು ಕಣಕ್ಕಿಳಿಸಿದೆ.

ಒಟ್ಟು 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಈಗಾಗಲೇ 219 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇನ್ನು 5 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಬಾಕಿ ಉಳಿಸಿಕೊಂಡಿದೆ.

ಸಿ.ವಿ.ರಾಮನ್​ನಗರ, ಹಾಸನ ಜಿಲ್ಲೆ ಅರಕಲಗೂಡು, ರಾಯಚೂರು ನಗರ ಕ್ಷೇತ್ರ, ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಕ್ಷೇತ್ರ, ಮಂಗಳೂರು ಉತ್ತರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯನ್ನು ಕಾಂಗ್ರೆಸ್ ಬಾಕಿ ಉಳಿಸಿಕೊಂಡಿದೆ.

ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದೆ. ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com