ವಿಧಾನಸಭೆ ಚುನಾವಣೆ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ, ನಾಳೆಯೇ ನಾಮಪತ್ರ ಸಲ್ಲಿಸುವೆ; ಆಯನೂರು ಮಂಜುನಾಥ್

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷಾಂತರ ಪರ್ವ, ರಾಜೀನಾಮೆ ಪ್ರಹಸನ ಜೋರಾಗಿಯೇ ನಡೆಯುತ್ತಿದ್ದು, ರಾಜ್ಯ ಬಿಜೆಪಿಗೆ ಇದೀಗ ಮತ್ತೊಂದು ಹಿನ್ನಡೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಆಯನೂರು ಮಂಜುನಾಥ್ ಎಂಎಲ್‌ಸಿ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಬುಧವಾರ ಘೋಷಿಸಿದ್ದಾರೆ.
ಆಯನೂರು ಮಂಜುನಾಥ್
ಆಯನೂರು ಮಂಜುನಾಥ್
Updated on

ಶಿವಮೊಗ್ಗ: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷಾಂತರ ಪರ್ವ, ರಾಜೀನಾಮೆ ಪ್ರಹಸನ ಜೋರಾಗಿಯೇ ನಡೆಯುತ್ತಿದ್ದು, ರಾಜ್ಯ ಬಿಜೆಪಿಗೆ ಇದೀಗ ಮತ್ತೊಂದು ಹಿನ್ನಡೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಆಯನೂರು ಮಂಜುನಾಥ್ ಎಂಎಲ್‌ಸಿ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಬುಧವಾರ ಘೋಷಿಸಿದ್ದಾರೆ.

ಸದ್ಯ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಪ್ರತಿನಿಧಿಸುತ್ತಿರುವ ಶಿವಮೊಗ್ಗ ನಗರದಿಂದ ಮಂಜುನಾಥ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಪ್ರಸ್ತುತ ಭಜರಂಗದಳದ ಕಾರ್ಯಕರ್ತ ಹರ್ಷ ಎಂಬಾತನ ಬರ್ಬರ ಹತ್ಯೆ ಹಾಗೂ ಗೊಂದಲದ ಹಿಂಸಾಚಾರದ ಘಟನೆಗಳಿಗೆ ಸಾಕ್ಷಿಯಾದ ನಂತರ ಕ್ಷೇತ್ರಕ್ಕೆ ಇನ್ನೂ ಬಿಜೆಪಿ ಟಿಕೆಟ್ ಘೋಷಿಸಿಲ್ಲ.

ಮಂಜುನಾಥ್ ಅವರನ್ನು ಶಿವಮೊಗ್ಗದಿಂದ ಕಣಕ್ಕಿಳಿಸುವುದಿಲ್ಲ ಎಂದು ಪಕ್ಷ ದೃಢಪಡಿಸಿದ ಬಳಿಕ ಅವರ ರಾಜೀನಾಮೆ ಘೋಷಣೆ ಹೊರಬಿದ್ದಿದೆ ಎಂದು ಮೂಲಗಳು ತಿಳಿಸಿವೆ. 'ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಇಂದು ಹುಬ್ಬಳ್ಳಿಗೆ ತೆರಳಿ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸುತ್ತೇನೆ' ಎಂದಿದ್ದಾರೆ.

'ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸುತ್ತೇನೆ. ನಾಳೆ (ಗುರುವಾರ) ಶಿವಮೊಗ್ಗ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದೇನೆ. ನಾನು ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೆ ಎಂಬುದನ್ನು ಮಧ್ಯಾಹ್ನದೊಳಗೆ ಪ್ರಕಟಿಸುತ್ತೇನೆ' ಎಂದು ಆಯನೂರು ಮಂಜುನಾಥ್ ಹೇಳಿದ್ದಾರೆ.

'ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ, ಟಿಕೆಟ್‌ ನಿರಾಕರಣೆಯಿಂದ ಪಕ್ಷ ಬಿಡುತ್ತಿಲ್ಲ. ನಗರದ ಬೆಳವಣಿಗೆಗೆ ಕೊಡುಗೆ ನೀಡಲು ಈ ನಿರ್ಧಾರ ಕೈಗೊಂಡಿದ್ದೇನೆ. ಚುನಾವಣೆಯ ಸಂದರ್ಭದಲ್ಲಿ ಹಲವು ಪ್ರಶ್ನೆಗಳಿಗೆ ಉತ್ತರಿಸಬೇಕಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಬಲಿಸಿ ಹೇಳಿಕೆ ನೀಡಿದ ಏಕೈಕ ವ್ಯಕ್ತಿ ನಾನೇ' ಎಂದು ಪ್ರತಿಪಾದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com