ಮತದಾರರ ಓಲೈಸಲು 'ಲೋಕಲೈಟ್ ಕಾರ್ಡ್' ಬಳಸಿದ ಸಿದ್ದರಾಮಯ್ಯ

ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಾವಿರಾರು ಜನರ ಮೂಲಕ ಶಕ್ತಿ ಪ್ರದರ್ಶಿಸಿದ್ದು, ವರುಣಾ ಕ್ಷೇತ್ರದಿಂದ ಬುಧವಾರ ನಾಮಪತ್ರ ಸಲ್ಲಿಸಿದರು.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು: ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಾವಿರಾರು ಜನರ ಮೂಲಕ ಶಕ್ತಿ ಪ್ರದರ್ಶಿಸಿದ್ದು, ವರುಣಾ ಕ್ಷೇತ್ರದಿಂದ ಬುಧವಾರ ನಾಮಪತ್ರ ಸಲ್ಲಿಸಿದರು.

ಈ ವೇಳೆ ನಾನು ಸ್ಥಳೀಯ ನಾಯಕನಾಗಿದ್ದು, ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವಂತೆ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.

ರಾಜ್ಯದ ಜನರು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕೆಂದು ಬಯಸಿದ್ದಾರೆ. ಆದ್ದರಿಂದ ರಾಜ್ಯಾದ್ಯಂತ ಜನರು ನಿಮ್ಮ ಸಿದ್ದರಾಮಯ್ಯ ಅವರ ಮೇಲೆ ಹೆಚ್ಚಿನ ಪ್ರೀತಿ ವಿಶ್ವಾಸವನ್ನು ತೋರುತ್ತಿದ್ದಾರೆ. ಆದ್ದರಿಂದ ಬಿಜೆಪಿಯವರಿಗೆ ಭಯ ಶುರುವಾಗಿದೆ. ಆದ್ದರಿಂದಲೇ ನನ್ನನ್ನು ಸೋಲಿಸಲೇಬೇಕೆಂದು ನಿರ್ಧರಿಸಿ ಬೆಂಗಲೂರಿನ ನಿವಾಸಿ ಸೋಮಣ್ಣ ಅವರನ್ನು ಕರೆ ತಂದು ನಿಲ್ಲಿಸಿದ್ದಾರೆ. ಅವರು ಎಷ್ಟೇ ಕುತಂತ್ರ, ಹುನ್ನಾರ ಮಾಡಲಿ. ಹಣದ ಹೊಳೆಯನ್ನೇ ಹರಿಸಲಿ ವರುಣ ಕ್ಷೇತ್ರದ ಜನರು ಸ್ವಾಭಿಮಾನಿಗಳಾಗಿದ್ದಾರೆ. ಯಾವುದೇ ಆಮಿಷಕ್ಕೆ ಒಳಗಾಗುವುದಿಲ್ಲ. ಮೇಲಾಗಿ ವರುಣ ನಾನು ಹುಟ್ಟಿ ಬೆಳೆದಿರುವ ಹೋಬಳಿ, ಈ ಕ್ಷೇತ್ರ ನನ್ನ ಸ್ವಂತ ಕ್ಷೇತ್ರ. ನಾನು ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಚುನಾವಣಾ ರಾಜಕೀಯದಿಂದ ನಿವೃತ್ಥಿಯಾಗಲು ಬಯಸಿದ್ದೇನೆ. ಜನರು ಬಿಜೆಪಿ, ಜೆಡಿಎಸ್'ನ ಎಲ್ಲಾ ಕುತಂತ್ರಗಳನ್ನು ಅರ್ಥ ಮಾಡಿಕೊಂಡು ಅವರನ್ನು ಕಾಲಕಸದಂತೆ ಕಂಡು ನನ್ನನ್ನು ಒಂದು ಲಕ್ಷ ಮತಗಳಿಂದ ಗೆಲ್ಲಿಸಿಕೊಡಲಿದ್ದಾರೆಂಬ ವಿಶ್ವಾಸ ನನಗಿದೆ ಎಂದು ಹೇಳಿದರು.

ನಾನು ಪ್ರಚಾರಕ್ಕೆ ಎರಡು ದಿನ ಮಾತ್ರ ಬರುತ್ತೇನೆ. ನನ್ನ ಪರ ಯತೀಂದ್ರ ಮತಯಾಚನೆ ಮಾಡಲಿದ್ದಾರೆ. 2013ರಲ್ಲಿ 31 ಸಾವಿರ ಮತದಿಂದ ಗೆಲ್ಲಿಸಿದ್ದೀರಿ. ಕಳೆದ ಬಾರಿ ಯತೀಂದ್ರ ಅವರನ್ನು 59 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದ್ದೀರಿ. ಈ ಬಾರಿ ನನ್ನನ್ನು ಒಂದು ಲಕ್ಷ ಮತದ ಅಂತರದಿಂದ ಗೆಲ್ಲಿಸಿ ಶಕ್ತಿ ತುಂಬಿ ವಿಧಾನಸಭೆಗೆ ಕಳುಹಿಸಿಕೊಡಿ ಎಂದು ತಿಳಿಸಿದರು.

ಜನರ ನಾಡಿಮಿಡಿತದಿಂದ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲಲಿದೆ. ಆದರೆ, ಪರಿಸ್ಥಿತಿಯ ಲಾಭ ಪಡೆಯಲು ಜೆಡಿಎಸ್ ಅತಂತ್ರ ನಿರ್ಮಾಣವಾಗಬೇಕೆಬ ನಿರೀಕ್ಷೆಯಲ್ಲಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com