ಸಿದ್ದರಾಮಯ್ಯ ಸಂದರ್ಶನ: ರಾಜ್ಯದಲ್ಲಿ ಮೋದಿ ಅಲೆ ಇಲ್ಲ, ಮುಸ್ಲಿಮರ ಬೆಂಬಲ ಕಾಂಗ್ರೆಸ್‌ಗೆ

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅಲೆ ಕೆಲಸ ಮಾಡುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅಲೆ ಕೆಲಸ ಮಾಡುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಮುಸ್ಲಿಮರು ನಮ್ಮ ಪಕ್ಷವನ್ನು ಗಟ್ಟಿಯಾಗಿ ಬೆಂಬಲಿಸುವ ನಿರೀಕ್ಷೆಯಿದೆ. ಮುಖ್ಯವಾಗಿ ನಾವು ಸ್ಥಳೀಯ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾಜಿ ಮುಖ್ಯಮಂತ್ರಿ ತಿಳಿಸಿದ್ದಾರೆ.

ದಕ್ಷಿಣ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು 2024ರ ಲೋಕಸಭೆ ಚುನಾವಣೆಗೆ ರಾಷ್ಟ್ರೀಯ ರಾಜಕೀಯದ ಮೆಟ್ಟಿಲು ಆಗಲಿದೆ ಎಂದು ಪ್ರತಿಪಕ್ಷ ನಾಯಕ ಹೇಳಿದ್ದಾರೆ.

ಇದು ತಮ್ಮ ಕೊನೆಯ ಚುನಾವಣೆ ಎಂದು ಪುನರುಚ್ಚರಿಸಿದ 75 ವರ್ಷದ ವಿರೋಧ ಪಕ್ಷದ ನಾಯಕ, ಈ ಬಾರಿ ಶೇ. 90 ರಷ್ಟು ಮುಸ್ಲಿಂ ಮತದಾರರು ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆಡಳಿತಾರೂಢ ಬಿಜೆಪಿ ಪ್ರಬಲ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ರಾಜ್ಯದಲ್ಲಿ ಮೋದಿ ಫ್ಯಾಕ್ಟರ್ ಯಾವುದೇ ಪರಿಣಾಮ ಬೀರುವುದಿಲ್ಲ. ಮೋದಿಯ ರಾಜ್ಯ ಭೇಟಿ ಮತದಾರರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಏಕೆಂದರೆ ಇದು ರಾಜ್ಯ ಚುನಾವಣೆ, ಇದು ರಾಷ್ಟ್ರೀಯ ಚುನಾವಣೆಯಲ್ಲ ಎಂದರು.

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೊಂದಿಗಿನ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಯಾರೂ ಬೇಕಾದರೂ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಮುಸ್ಲಿಮರ ಜನಸಂಖ್ಯೆಯ ಶೇ. 10-12 ರಷ್ಟು ಇದ್ದು, ಅವರು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಬೆಂಬಲಿಸಿದಂತೆ ಕಾಂಗ್ರೆಸ್ ಅನ್ನು ಬೆಂಬಲಿಸುತ್ತಾರೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿಎಂ, ಕರ್ನಾಟಕದಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಮುಸ್ಲಿಮರು ನಿರ್ಧರಿಸಿದಂತೆ ಕಾಣುತ್ತಿದೆ ಮತ್ತು ಅವರಿಗೆ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕತ್ವದ ಮೇಲೆ ನಂಬಿಕೆಯಿದೆ ಎಂದರು.

ರಾಜ್ಯದಲ್ಲಿ ಅಲ್ಪಸಂಖ್ಯಾತರ ಹಿತಾಸಕ್ತಿ ಕಾಪಾಡುತ್ತಿರುವ ಏಕೈಕ ಪಕ್ಷ ಕಾಂಗ್ರೆಸ್. ಶೇ. 90ಕ್ಕಿಂತ ಹೆಚ್ಚು ನಾವು ಮುಸ್ಲಿಂ ಸಮುದಾಯ ಮತ್ತು ಕ್ರಿಶ್ಚಿಯನ್ ಸಮುದಾಯದಿಂದಲೂ ಬೆಂಬಲ ನಿರೀಕ್ಷಿಸುತ್ತಿದ್ದೇವೆ. ಖಂಡಿತಾ ಅವರು ಕಾಂಗ್ರೆಸ್‌ಗೆ ಮಾತ್ರ ಮತ ಹಾಕುತ್ತಾರೆ. ಅದನ್ನೇ ನಾನು ಆಶಿಸುತ್ತೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com