ನಿನ್ನೆ ಕಾಂಗ್ರೆಸ್ ಸೇರಿದ್ದ ಸಚಿವ ಆನಂದ್ ಸಿಂಗ್ ಸಹೋದರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ

ನಿನ್ನೆಯಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರ ಸಹೋದರಿ ರಾಣಿ ಸಂಯುಕ್ತಾ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಕಾಂಗ್ರೆಸ್ ಸೇರಿದ ರಾಣಿ ಸಂಯುಕ್ತಾ
ಕಾಂಗ್ರೆಸ್ ಸೇರಿದ ರಾಣಿ ಸಂಯುಕ್ತಾ
Updated on

ಬೆಂಗಳೂರು: ನಿನ್ನೆಯಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರ ಸಹೋದರಿ ರಾಣಿ ಸಂಯುಕ್ತಾ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಣಿ ಸಂಯುಕ್ತಾ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಣಿ ಸಂಯುಕ್ತಾ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಸಚಿವ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ ಸಿಂಗ್ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇದರಿಂದ ತೀವ್ರ ಅಸಮಾಧಾನಗೊಂಡಿದ್ದ ಸಂಯುಕ್ತಾ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ರಾಣಿ ಸಂಯುಕ್ತ ಸಿಂಗ್ ಬಿಜೆಪಿಯ ಮಹಿಳಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆಯಾಗಿದ್ದರು.

ಕೇಸರಿ ಪಕ್ಷದ ನಡೆಯಿಂದ ತೀವ್ರ ಬೇಸರಗೊಂಡಿದ್ದ ಸಂಯುಕ್ತ ಅವರು ಶನಿವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಮಲ ಬಿಟ್ಟು ಕೈ ಹಿಡಿದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com