
ಸಾಂದರ್ಭಿಕ ಚಿತ್ರ
ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಕಣದಿಂದ ತಮಿಳುನಾಡಿನ ಎಡಪ್ಪಾಡಿ ಕೆ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಹಿಂದೆ ಸರಿದಿದೆ.
ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ ಪುಲಿಕೇಶಿನಗರದಿಂದ ಏಕೈಕ ಎಐಎಡಿಎಂಕೆ ಅಭ್ಯರ್ಥಿಯಾಗಿ ಡಿ ಅನ್ಬರಸನ್ ನಾಮಪತ್ರ ಸಲ್ಲಿಸಿದ್ದರು. ಆದರೆ, ಬಿಜೆಪಿಯ ಮನವಿ ಮೇರೆಗೆ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ ಎಂದು ಪಕ್ಷ ಹೇಳಿದೆ.
ಇದನ್ನೂ ಓದಿ: ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರ: ಬಿಎಸ್ ಪಿ ಟಿಕೆಟ್ ನಿಂದ ಅಖಂಡ ಶ್ರೀನಿವಾಸಮೂರ್ತಿ ಸ್ಪರ್ಧೆ
ದೆಹಲಿಯ ಹಿರಿಯ ಬಿಜೆಪಿ ನಾಯಕರು ಪಳನಿಸ್ವಾಮಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಡಿ ಅನ್ಬರಸನ್ ನಾಮಪತ್ರ ಹಿಂಪಡೆಯುವಂತೆ ಮನವಿ ಮಾಡಿರುವುದಾಗಿ ಎಐಎಡಿಎಂಕೆ ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ.
ಬಿಜೆಪಿ ಮನವಿಗೆ ಮಣಿದ ಅನ್ಬರಸನ್ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ತಮಿಳುನಾಡಿನಲ್ಲಿ ಎಐಎಡಿಎಂಕೆ ಹಾಗೂ ಬಿಜೆಪಿ ಮಿತ್ರ ಪಕ್ಷಗಳಾಗಿವೆ.