150 ಸ್ಥಾನಗಳಲ್ಲಿ ಗೆದ್ದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ: ರಾಹುಲ್ ಗಾಂಧಿ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಕುಸಿದಿದ್ದರೂ ಕೇಂದ್ರದ ಬಿಜೆಪಿ ಸರ್ಕಾರ ಮಾತ್ರ ಇಂಧನ ಬೆಲೆ ಇಳಿಸುತ್ತಿಲ್ಲ. ಆದರೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಇಂಧನ ಬೆಲೆ ಇಳಿಸುವುದಾಗಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಜನರಿಗೆ ಭರವಸೆ ನೀಡಿದರು.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಬೆಳಗಾವಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಕುಸಿದಿದ್ದರೂ ಕೇಂದ್ರದ ಬಿಜೆಪಿ ಸರ್ಕಾರ ಮಾತ್ರ ಇಂಧನ ಬೆಲೆ ಇಳಿಸುತ್ತಿಲ್ಲ. ಆದರೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಇಂಧನ ಬೆಲೆ ಇಳಿಸುವುದಾಗಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಜನರಿಗೆ ಭರವಸೆ ನೀಡಿದರು. 

ರೈತರೊಂದಿಗೆ ಸಂವಾದದ ನಂತರ ಬೆಳಗಾವಿ ಸಮೀಪದ ರಾಮದುರ್ಗದಲ್ಲಿ ಕಾಂಗ್ರೆಸ್ ಪಕ್ಷದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, 40 ಪರ್ಸೆಂಟ್ ಬಿಜೆಪಿ ಸರ್ಕಾರವು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 40ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲದಂತೆ ಜನರು ಮತ್ತು ರೈತರು ಮಾಡಬೇಕು ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಚುನಾಯಿಸಿ ಇಲ್ಲಿ ಸಮರ್ಥ ಹಾಗೂ ಪರಿಣಾಮಕಾರಿ ಸರಕಾರ ರಚನೆ ಮಾಡುವಂತೆ ಮನವಿ ಮಾಡಿದರು.

ರಾಜ್ಯದಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಗಾಂಧಿ, ತಮ್ಮ ಪಕ್ಷದ ಸರ್ಕಾರವು ರಾಜ್ಯದಲ್ಲಿ ಸಾಮಾನ್ಯ ಜನರು, ಬಡವರು ಮತ್ತು ರೈತರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ತಕ್ಷಣ ರೈತರ ಉತ್ಪನ್ನಗಳಿಗೆ ಸೂಕ್ತ ಬೆಲೆ ನಿಗದಿ ಮಾಡುವ ಕುರಿತು ಚರ್ಚೆ ನಡೆಸುವುದಲ್ಲದೆ, ರೈತರಿಗೆ ಮತ್ತು ಕೃಷಿ ಕ್ಷೇತ್ರಕ್ಕೆ ನೆರವಾಗುವ ಪರಿಣಾಮಕಾರಿ ಕೃಷಿ ಕಾರ್ಯಕ್ರಮಗಳ ಕುರಿತು ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: 'ಕರ್ನಾಟಕ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಇದೆ, ಸಿದ್ದರಾಮಯ್ಯ ಹೇಳಿದ್ದು ಬೊಮ್ಮಾಯಿ ಭ್ರಷ್ಟ ಎಂದು': ಜಗದೀಶ್ ಶೆಟ್ಟರ್
     
ಛತ್ತೀಸ್‌ಗಢದ ಕಾಂಗ್ರೆಸ್ ಸರ್ಕಾರವು ಚುನಾವಣೆಗೆ ಮೊದಲು ಆ ರಾಜ್ಯದಲ್ಲಿ ಪಕ್ಷವು ಜನರಿಗೆ ನೀಡಿದ ಭರವಸೆಯಂತೆ ಕಾರ್ಯನಿರ್ವಹಿಸುತ್ತಿದೆ. ಪಕ್ಷವು ಸರ್ಕಾರ ರಚನೆಯಾದ ನಂತರ ಕರ್ನಾಟಕದಲ್ಲಿಯೂ ಜನರ ಅಗತ್ಯಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸುತ್ತದೆ ಎಂದು ಹೇಳಿದರು.
     
ಕೃಷಿ ಉತ್ಪನ್ನಗಳ ಮೇಲೆ ವಿಧಿಸಲಾದ ತೆರಿಗೆಗಳು ಸೇರಿದಂತೆ, ಸಾಮಾನ್ಯ ಜನರ ಜೀವನದ ಮೇಲೆ ಪರಿಣಾಮ ಬೀರುವ ಐದು ವಿಭಿನ್ನ ರೀತಿಯ ಜಿಎಸ್‌ಟಿಗಳನ್ನು ಕೇಂದ್ರವು ವಿಧಿಸಿದೆ. ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಏಕರೂಪ ತೆರಿಗೆ ನೀತಿ ಜಾರಿಗೆ ತರಲಿದೆ ಎಂದು ಭರವಸೆ ನೀಡಿದರು.
    
ಕೈಗಾರಿಕೋದ್ಯಮಿಗಳು ಪಡೆದಿರುವ ಸಾಲ ಮನ್ನಾ ವಿಚಾರವಾಗಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಬಿಜೆಪಿ ಸರ್ಕಾರ ರೈತರ ಸಾಲ ಮನ್ನಾ ಮಾಡಲು ಹಿಂದೇಟು ಹಾಕುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುವುದಲ್ಲದೆ ಸಣ್ಣ ಉದ್ದಿಮೆ ಹಾಗೂ ಕೈಗಾರಿಕೆ ಸ್ಥಾಪನೆಗೆ ಆದ್ಯತೆ ನೀಡಲಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com