ರಮೇಶ್ ಜಾರಕಿಹೊಳಿಗೆ ಧೈರ್ಯವಿದ್ದರೆ ಅಥಣಿಯಲ್ಲಿ ನನ್ನನ್ನು ಸೋಲಿಸಲಿ: ಲಕ್ಷ್ಮಣ್ ಸವದಿ ಸವಾಲು

ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಮ್ಮ ಬಹುಕಾಲದ ರಾಜಕೀಯ ಪ್ರತಿಸ್ಪರ್ಧಿ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಅಥಣಿ ಕ್ಷೇತ್ರದಲ್ಲಿ ಸೋಲಿಸಿ ಎಂದು ಸವಾಲು ಹಾಕಿದ್ದಾರೆ. 
ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ

ಬೆಳಗಾವಿ: ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಮ್ಮ ಬಹುಕಾಲದ ರಾಜಕೀಯ ಪ್ರತಿಸ್ಪರ್ಧಿ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಅಥಣಿ ಕ್ಷೇತ್ರದಲ್ಲಿ ಸೋಲಿಸಿ ಎಂದು ಸವಾಲು ಹಾಕಿದ್ದಾರೆ. 

`ಮೇ 10ರ ಚುನಾವಣೆಗೆ ಮುನ್ನ ರಮೇಶ್ ಜಾರಕಿಹೊಳಿ ಅಥಣಿಯಲ್ಲೇ ಉಳಿಯಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಅಥಣಿಯಲ್ಲಿರುವ ನನ್ನ ಮನೆಯ ಅರ್ಧದಷ್ಟು ಅವರಿಗೆ ಬಿಟ್ಟುಕೊಡುತ್ತೇನೆ, ಧೈರ್ಯವಿದ್ದರೆ ಅಲ್ಲಿ ನನ್ನನ್ನು ಸೋಲಿಸಸಿ ಎಂದು ಸವಾಲು ಹಾಕುತ್ತೇನೆ,'' ಎಂದು ಸವದಿ ಹೇಳಿದ್ದಾರೆ.

ಅಥಣಿಯಿಂದ ಎರಡು ಬಾರಿ ಶಾಸಕರಾಗಿರುವ ಲಕ್ಷ್ಮಣ ಸವದಿ ಅವರು ಅಥಣಿ ಕ್ಷೇತ್ರದಲ್ಲಿ ಬಿಜೆಪಿಯ ಹಾಲಿ ಶಾಸಕ, ರಮೇಶ್ ಜಾರಕಿಹೊಳಿ ಅವರ ನಿಕಟವರ್ತಿ ಮಹೇಶ ಕುಮಟಳ್ಳಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಗೋಕಾಕ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಮಹಾಂತೇಶ ಕಡಾಡಿ ಅವರೊಂದಿಗಿನ ಮುಂಬರುವ ಘರ್ಷಣೆಯತ್ತ ಗಮನ ಹರಿಸದೆ, ಸವದಿ ಅವರನ್ನು ಸೋಲಿಸುವ ಏಕೈಕ ಗುರಿಯೊಂದಿಗೆ ಅಥಣಿಯಲ್ಲಿ ಉಳಿಯಲು ರಮೇಶ್ ಜಾರಕಿಹೊಳಿ ನಿರ್ಧರಿಸಿದ್ದಾರೆ.

ಗೋಕಾಕದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಸವದಿ, ಗೋಕಾಕ ಕ್ಷೇತ್ರಕ್ಕೆ ಪ್ರವೇಶಿಸಲು ಪಾಸ್‌ಪೋರ್ಟ್ ಹೊಂದಬೇಕೇ ಎಂದು ಪ್ರಶ್ನಿಸಿದರು. `ಗೋಕಾಕದಲ್ಲಿ ರಮೇಶ್ ಜಾರಕಿಹೊಳಿ ಪ್ರಶ್ನಿಸಲು ಯಾರೂ ಇಲ್ಲ ಎಂದು ತೋರುತ್ತಿದೆ ಮತ್ತು ಅದಕ್ಕಾಗಿಯೇ ಅವರು ಅಥಣಿಗೆ ಸ್ಥಳಾಂತರಗೊಂಡಿದ್ದಾರೆ. ಇದರ ಹಿಂದಿನ ರಾಜಕೀಯವನ್ನು ಮತದಾರರು ಅರ್ಥಮಾಡಿಕೊಳ್ಳಬೇಕು. ಗೋಕಾಕದಲ್ಲಿ ಬದಲಾವಣೆಯ ಅಗತ್ಯವಿದೆ. ಮತದಾರರು ಈ ಬಾರಿ ಎಚ್ಚರಿಕೆಯಿಂದ ತಮ್ಮ ಹಕ್ಕು ಚಲಾಯಿಸಿ ಕಾಂಗ್ರೆಸ್ ಪಕ್ಷವನ್ನು ಹೆಚ್ಚಿನ ಅಂತರದಿಂದ ಗೆಲ್ಲಿಸುವಂತೆ ಮತದಾರರಲ್ಲಿ ಸವದಿ ಮನವಿ ಮಾಡಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಪ್ರಸ್ತುತ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜನತೆ ನೆಮ್ಮದಿಯ ಜೀವನ ನಡೆಸುತ್ತಿಲ್ಲ. ಸಂತೃಪ್ತ ಜೀವನ ನಡೆಸಲು ಕಾಂಗ್ರೆಸ್ ಗೆಲುವಿಗೆ ಮತ ನೀಡಿ ಎಂದು ಮತದಾರರಿಗೆ ಕರೆ ನೀಡಿದರು. ಪಕ್ಷದ ಅಭ್ಯರ್ಥಿ ಮಹಾಂತೇಶ ಕಡಾಡಿ ಅವರನ್ನು ಗೆಲ್ಲಿಸಿದರೆ ಗೋಕಾಕವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಭರವಸೆ ನೀಡಿದರು. ಮತ್ತೋರ್ವ ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸಿದೆ.

ಶಾಸಕ ಸತೀಶ ಜಾರಕಿಹೊಳಿ ಅವರು ಗೋಕಾಕದ ಅಭಿವೃದ್ಧಿಗಾಗಿ ತಮ್ಮ ಹೋರಾಟವನ್ನು ಮುಂದುವರಿಸಲು ತಮಗೆ ನೀಡಿದ ಬೆಂಬಲವನ್ನು ಸ್ಮರಿಸಿದ ಪೂಜಾರಿ, ಗೋಕಾಕದ ಉತ್ತಮ ಭವಿಷ್ಯಕ್ಕಾಗಿ ಸತೀಶ್ ಜಾರಕಿಹೊಳಿ ಮತ್ತು ಹೆಬ್ಬಾಳ್ಕರ್ ಅವರ ಬೆಂಬಲಕ್ಕೆ ನಿಲ್ಲಬೇಕೆಂದು ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com