ಜಗದೀಶ್ ಶೆಟ್ಟರ್ ಸೋಲಿಸುವ ಜವಾಬ್ದಾರಿ ಪ್ರಲ್ಹಾದ್ ಜೋಶಿಗೆ ನೀಡಿದ ಅಮಿತ್ ಶಾ

ಕರ್ನಾಟಕ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಪಕ್ಷದಿಂದ ಕಾಂಗ್ರೆಸ್‌ಗೆ ಜಿಗಿದಿರುವ ಜಗದೀಶ್ ಶೆಟ್ಟರ್ ನಡೆಗೆ ಅಸಮಾಧಾನಗೊಂಡಿರುವ ಬಿಜೆಪಿ, ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿಯನ್ನು ತವರು ನೆಲದಲ್ಲಿಯೇ ಸೋಲಿಸಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ.
ಜಗದೀಶ್ ಶೆಟ್ಟರ್ ಮತ್ತು ಪ್ರಹ್ಲಾದ್ ಜೋಶಿ
ಜಗದೀಶ್ ಶೆಟ್ಟರ್ ಮತ್ತು ಪ್ರಹ್ಲಾದ್ ಜೋಶಿ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಪಕ್ಷದಿಂದ ಕಾಂಗ್ರೆಸ್‌ಗೆ ಜಿಗಿದಿರುವ ಜಗದೀಶ್ ಶೆಟ್ಟರ್ ನಡೆಗೆ ಅಸಮಾಧಾನಗೊಂಡಿರುವ ಬಿಜೆಪಿ, ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿಯನ್ನು ತವರು ನೆಲದಲ್ಲಿಯೇ ಸೋಲಿಸಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ನಿಟ್ಟಿನಲ್ಲಿ ಈ ಯೋಜನೆಯನ್ನು ಕಾರ್ಯಗತಗೊಳಿಸುವ ಬಗ್ಗೆ ವೈಯಕ್ತಿಕವಾಗಿ ಕಾರ್ಯತಂತ್ರ ರೂಪಿಸಿದ್ದಾರೆ ಮತ್ತು ಮೇಲ್ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆಗಳ ನಂತರ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಸ್ಪರ್ಧೆಯು ಅತ್ಯಂತ ಕುತೂಹಲಕಾರಿ ಮಾರ್ಪಟ್ಟಿದೆ. ಕ್ಷೇತ್ರದ ಸ್ಥಳೀಯ ಮುಖಂಡರು ಹಾಗೂ ಪದಾಧಿಕಾರಿಗಳೊಂದಿಗೆ ಶಾ ಖುದ್ದು ಮಾತನಾಡಿ, ಶೆಟ್ಟರ್ ಅವರನ್ನು ಸೋಲಿಸಲು ಶಕ್ತಿಮೀರಿ ಶ್ರಮಿಸುವಂತೆ ಕೋರಿದ್ದಾರೆ. ಇನ್ನೊಂದೆಡೆ, ಶೆಟ್ಟರ್ ಅವರನ್ನು ಶತಾಯಗತಾಯ ಸೋಲಿಸಲು ಆ ಜವಾಬ್ದಾರಿಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ನೀಡಲಾಗಿದೆ ಎನ್ನಲಾಗಿದೆ.

ಪಕ್ಷ ಎಲ್ಲ ಸ್ಥಾನಮಾನ ನೀಡಿದೆ. ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿಜದ್ದರೆ ಅದು ಬೇರೆಯದೇ ಆಗಿರುತ್ತಿತ್ತು. ಆದರೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದರಿಂದ ಅವರನ್ನು ಕ್ಷಮಿಸಬಾರದು. ಆರು ಬಾರಿ ಶಾಸಕರಾಗಿರುವ ಶೆಟ್ಟರ್ ಅವರನ್ನು ಎದುರಿಸಲು ಎಲ್ಲಾ ರೀತಿಯ  ಬೆಂಬಲ ನೀಡುವುದಾಗಿ ನಾಯಕರಿಗೆ ಭರವಸೆ ನೀಡಿದ್ದಾರೆ.

ತಮ್ಮ ರಾಜೀನಾಮೆಯನ್ನು ಹಿಂಪಡೆದು ಪಕ್ಷದ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿಗೆ ಬೆಂಬಲ ನೀಡಿದ ಮಹಾನಗರ ಪಾಲಿಕೆ ಸದಸ್ಯರಿಗೆ ಅಮಿತ್ ಶಾ ಧನ್ಯವಾದ ತಿಳಿಸಿದ್ದಾರೆ. ಇದೇ ವೇಳೆ, ಶೆಟ್ಟರ್ ವಿರುದ್ಧ ಕೆಲಸ ಮಾಡಲು, ಶೆಟ್ಟರ್ ಮತ್ತು ಕಾಂಗ್ರೆಸ್ ಮಾಡುತ್ತಿರುವ ಆರೋಪಗಳನ್ನು ಎದುರಿಸಲು ಆರ್‌ಎಸ್‌ಎಸ್‌ನ ವಿಶೇಷ ತಂಡವೊಂದು ಹುಬ್ಬಳ್ಳಿಗೆ ಬಂದಿಳಿದಿದೆ.

ಶೆಟ್ಟರ್ ಅವರ ಬೆಂಬಲಿಗರನ್ನು ಗುರುತಿಸಲು ತಂಡಗಳನ್ನು ನಿಯೋಜಿಸಲಾಗಿದೆ ಮತ್ತು ಬಿಜೆಪಿಯ ಯಾವುದೇ ಸದಸ್ಯರಿಂದ ಶೆಟ್ಟರ್ ಅವರಿಗೆ ಬೆಂಬಲ ದೊರೆಯದಂತೆ ನೋಡಿಕೊಳ್ಳಲು ಅವರ ನಿವಾಸದಲ್ಲಿನ ಚಟುವಟಿಕೆಗಳನ್ನೂ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ, ಜಗದೀಶ್ ಶೆಟ್ಟರ್ ಅವರು ನಾನು ಕಾರ್ಯಕರ್ತನಾಗಿ ಪಕ್ಷಕ್ಕೆ ಮರಳಿದ್ದು, ಉತ್ತರ ಕರ್ನಾಟಕದಲ್ಲಿ ಪಕ್ಷವನ್ನು ಕಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಶೆಟ್ಟರ್ ವಿಜಯಿಯಾಗಲಿದ್ದಾರೆ ಎಂದು ಅವರ ಆಪ್ತ ಮೂಲಗಳು ವಿಶ್ವಾಸ ವ್ಯಕ್ತಪಡಿಸಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕಾಂಗ್ರೆಸ್‌ಗೆ ಸ್ಥಾನಗಳನ್ನು ಗೆಲ್ಲುವತ್ತ ಗಮನ ಹರಿಸಿದ್ದಾರೆ. ಅವರನ್ನು ಕಾಂಗ್ರೆಸ್ ಸ್ಟಾರ್ ಪ್ರಚಾರಕರನ್ನಾಗಿ ಮಾಡಲಾಗಿದ್ದು, ಅವರ ಸೇವೆಯನ್ನು ಕಿತ್ತೂರು ಕರ್ನಾಟಕ ಪ್ರದೇಶದಲ್ಲಿ ಬಳಸಿಕೊಳ್ಳಲಾಗುವುದು ಎಂದು ಮೂಲಗಳು ಹೇಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com