ಕಾಂಗ್ರೆಸ್ ಕಾರ್ಯಕರ್ತರು ನನ್ನನ್ನು ಅಪಹರಿಸಿ, ನಾಮಪತ್ರ ಹಿಂಪಡೆಯುವಂತೆ ಒತ್ತಡ ಹಾಕಿದರು: ಜೆಡಿಎಸ್ ಅಭ್ಯರ್ಥಿ ಅಲ್ತಾಫ್

ಕೆಲವು ಕಾಂಗ್ರೆಸ್ ಕಾರ್ಯಕರ್ತರು ನನ್ನನ್ನು ಅಪಹರಿಸಿ ನಾಮಪತ್ರ ಹಿಂಪಡೆಯುವಂತೆ ಒತ್ತಡ ಹಾಕಿದರು ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಅವರು ಸೋಮವಾರ ಆರೋಪಿಸಿದ್ದಾರೆ.
ಅಲ್ತಾಫ್ ಕುಂಪಲ
ಅಲ್ತಾಫ್ ಕುಂಪಲ

ಮಂಗಳೂರು: ಕೆಲವು ಕಾಂಗ್ರೆಸ್ ಕಾರ್ಯಕರ್ತರು ನನ್ನನ್ನು ಅಪಹರಿಸಿ ನಾಮಪತ್ರ ಹಿಂಪಡೆಯುವಂತೆ ಒತ್ತಡ ಹಾಕಿದರು ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಅವರು ಸೋಮವಾರ ಆರೋಪಿಸಿದ್ದಾರೆ.

ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅಲ್ತಾಫ್, ಕಾಂಗ್ರೆಸ್ ಅಭ್ಯರ್ಥಿ ಯುಟಿ ಖಾದರ್ ಬೆಂಬಲಿಗರು ನನ್ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದರು.

"ಕಳೆದ ಶುಕ್ರವಾರ ನಮಾಜ್ ಮುಗಿಸಿ ನಾನು ಸ್ಥಳೀಯ ಮಸೀದಿಯಿಂದ ಹೊರಡುತ್ತಿದ್ದಾಗ, ಕಾಂಗ್ರೆಸ್ ಕಾರ್ಯಕರ್ತರಾದ ಮುಸ್ತಫಾ ಮತ್ತು ಉಸ್ಮಾನ್ ನನ್ನನ್ನು ಅಪಹರಿಸಿ, ಬಲವಂತವಾಗಿ ಪೇಪರ್‌ಗಳಿಗೆ ಸಹಿ ಹಾಕಿಸಿಕೊಂಡರು. ನಾನು ನನ್ನ ನಾಮಪತ್ರ ಹಿಂಪಡೆದಿಲ್ಲ. ಆದರೆ ಬಲವಂತವಾಗಿ ಹಿಂಪಡೆಯುವಂತೆ ಮಾಡಿದ್ದಾರೆ. ನನಗೆ ಮತ್ತು ನನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಮಂಗಳೂರು ಪೊಲೀಸರಿಗೆ ಮನವಿ ಮಾಡಿದ್ದೇನೆ. ನನಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಚುನಾವಣಾ ಆಯೋಗಕ್ಕೂ ಪತ್ರ ಬರೆದಿದ್ದೆ. ಆದರೆ ನನ್ನ ಅರ್ಜಿಯನ್ನು ತಿರಸ್ಕರಿಸಲಾಗಿದೆ'' ಎಂದು ಅಲ್ತಾಫ್ ಹೇಳಿದ್ದಾರೆ.

ಇದೇ ವೇಳೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರು, ಜೆಡಿಎಸ್ ಅಭ್ಯರ್ಥಿ ಆರೋಪವನ್ನು ತಳ್ಳಿಹಾಕಿದ್ದು, ಯಾವುದೇ ಕಾಂಗ್ರೆಸ್ ಕಾರ್ಯಕರ್ತರು ಅಲ್ತಾಫ್ ಅವರನ್ನು ಅಪಹರಿಸಿಲ್ಲ ಅಥವಾ ನಾಮಪತ್ರ ಹಿಂಪಡೆಯುವಂತೆ ಬೆದರಿಕೆ ಹಾಕಿಲ್ಲ ಎಂದರು.

ಖಾದರ್ ಅವರ ಹೆಸರನ್ನು ಕೆಡಿಸುವ ಪ್ರಯತ್ನ ಇದಾಗಿದೆ. ಅಲ್ತಾಫ್ ಅವರು ತನ್ನನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿರುವ ವ್ಯಕ್ತಿಗಳು ಅವರ ಬಾಲ್ಯದ ಸ್ನೇಹಿತರು. ಎರಡು ದಿನ ಸುಮ್ಮನಿದ್ದ ಅವರು ಈಗ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಕೆಲವರಿಗೆ ಟಿಕೆಟ್‌ ನಿರಾಕರಿಸಿದ್ದರಿಂದ ಜೆಡಿಎಸ್‌ನಲ್ಲಿ ಜಟಾಪಟಿ ಏರ್ಪಟ್ಟಿದ್ದು, ಒಂದು ಒಪ್ಪಂದಕ್ಕೆ ಬಂದ ನಂತರ ಅಲ್ತಾಫ್ ನಾಮಪತ್ರ ಹಿಂಪಡೆದಿದ್ದಾರೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com