ರಾಮನಗರಕ್ಕೆ ಮೋದಿಯಾದರೂ ಬರಲಿ, ಅಮೆರಿಕ ಅಧ್ಯಕ್ಷರಾದರೂ ಬರಲಿ, ನನಗೇನು ಭಯವಿಲ್ಲ: ಎಚ್‌ಡಿ ಕುಮಾರಸ್ವಾಮಿ
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಚಾರದ ಅಬ್ಬರ ಜೋರಾಗಿದ್ದು ರಾಜ್ಯ ಬಿಜೆಪಿ ಕೇಂದ್ರದ ನಾಯಕರನ್ನ ಕರೆಸಿ ರೋಡ್ ಶೋ ನಡೆಸಿ, ಮತದಾರನ್ನ ಸೆಳೆಯುತ್ತಿದೆ. ಈ ಮಧ್ಯೆ ರಾಮನಗರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಗೆ ಟಾಂಗ್ ನೀಡಿದ್ದಾರೆ.
Published: 26th April 2023 08:57 AM | Last Updated: 26th April 2023 05:06 PM | A+A A-

ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಚಾರದ ಅಬ್ಬರ ಜೋರಾಗಿದ್ದು ರಾಜ್ಯ ಬಿಜೆಪಿ ಕೇಂದ್ರದ ನಾಯಕರನ್ನ ಕರೆಸಿ ರೋಡ್ ಶೋ ನಡೆಸಿ, ಮತದಾರನ್ನ ಸೆಳೆಯುತ್ತಿದೆ. ಈ ಮಧ್ಯೆ ರಾಮನಗರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ ಅವರು, ಬಿಜೆಪಿ ಮೋದಿಯಾದರೂ ಕರೆಸಲಿ, ಅಮೆರಿಕ ಅಧ್ಯಕ್ಷರನ್ನಾದರೂ ಕರೆಸಲಿ. ನನಗೇನು ಭಯವಿಲ್ಲ, ಬಂದರೆ ಒಂದು ದಿನ ಭಾಷಣ ಮಾಡಿ ಹೋಗಬಹುದು. ಮಂಡ್ಯ, ತುಮಕೂರು, ಮೈಸೂರಿನಿಂದ ಜನರನ್ನು ಕರೆಸಬಹುದು. ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಮಾಡುತ್ತಾರೆ. ಕೇಂದ್ರ ಸಚಿವ ಅಮಿತ್ ಶಾ ರೋಡ್ ಶೋ ಕೂಡ ಗಮನಿಸಿದ್ದೇನೆ. 4 ತಿಂಗಳಿನಿಂದ ನಡೆಸಿದ ರೋಡ್ ಶೋ ಮುಂದೆ ಇದೇನು ಅಲ್ಲ. ನನ್ನ ಕಾರ್ಯುಕ್ರಮದ ವಿಶೇಷತೆಗಳೇ ಬೇರೆಯಾಗಿತ್ತು. ನನ್ನ ಕಾರ್ಯಕ್ರಮಕ್ಕೆ ಬಿಜೆಪಿ ಕಾರ್ಯಕ್ರಮ ಸರಿಸಾಟಿ ಅಲ್ಲ ಎಂದು ಹೇಳಿದರು.
ನನ್ನ ಆರೋಗ್ಯದ ಬಗ್ಗೆ ದೇವೇಗೌಡರಿಗೆ ಸ್ವಲ್ಪ ಆತಂಕ ಇದೆ. ವೈದ್ಯರು ಮೂರು ದಿನ ವಿಶ್ರಾಂತಿ ಪಡೆಯಲು ಸೂಚಿಸಿದ್ದರು. ಆದರೆ, ನಾನು ವಿಶ್ರಾಂತಿ ಪಡೆಯುವ ಸ್ಥಿತಿಯಲ್ಲಿ ಇಲ್ಲ. ಕೆ.ಆರ್ .ನಗರ, ಚಾಮರಾಜ, ವರುಣಾದಲ್ಲಿ ಪ್ರಚಾರ ಸಭೆ ಕರೆದಿದ್ದೇನೆ ಎಂದರು.