ತವರು ನೆಲದಲ್ಲಿಯೇ ಜಗದೀಶ್ ಶೆಟ್ಟರ್‌ ಸೋಲಿಸಲು ಬಿಜೆಪಿ ಸಖತ್ ತಂತ್ರ; ಚುನಾವಣೆಗೂ ಮುನ್ನವೇ 'ಆಪರೇಷನ್ ಕಮಲ'!

ಪಕ್ಷ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು ತವರು ನೆಲವಾದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿಯೇ ಸೋಲಿಸಲೇ ಬೇಕು ಎಂದು ಬಿಜೆಪಿಯು 'ಆಪರೇಷನ್ ಕಮಲ' ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಕರ್ನಾಟಕದಲ್ಲಿ ಈ ಬಾರಿಯು ಅಧಿಕಾರದ ಗದ್ದುಗೆ ಏರಲೇಬೇಕು ಎಂದು ನಿರ್ಧರಿಸಿರುವ ಬಿಜೆಪಿಯು ಸರ್ವ ಪ್ರಯತ್ನಗಳನ್ನು ಮಾಡುತ್ತಿದೆ. ಪಕ್ಷ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು ತವರು ನೆಲವಾದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿಯೇ ಸೋಲಿಸಲೇ ಬೇಕು ಎಂದು 'ಆಪರೇಷನ್ ಕಮಲ' ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕಾರ್ಯಾಚರಣೆಯ ಭಾಗವಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹುಬ್ಬಳ್ಳಿ-ಧಾರವಾಡದ ಮಾಜಿ ಮೇಯರ್ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ಪ್ರಕಾಶ ಕ್ಯಾರಕಟ್ಟಿ ಅವರನ್ನು ಬಿಜೆಪಿಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಯಾವುದೇ ಬೆಲೆ ತೆತ್ತಾದರೂ ಸರಿ ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ ಶೆಟ್ಟರ್ ಅವರನ್ನು ಸೋಲಿಸಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ.

ಶೆಟ್ಟರ್‌ಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರನ್ನು ಬಿಜೆಪಿಯಲ್ಲಿ ಉಳಿಸಿಕೊಳ್ಳುವಲ್ಲಿ ಪ್ರಹ್ಲಾದ ಜೋಶಿ ಯಶಸ್ವಿಯಾಗಿದ್ದಾರೆ ಎಂದು ವಿವರಿಸಿದರು.

ಶೆಟ್ಟರ್ ಅವರನ್ನು ಕ್ಷೇತ್ರಕ್ಕೆ ಸೀಮಿತಗೊಳಿಸುವಂತೆ ಒತ್ತಡ ಹೇರಲು ಹುಬ್ಬಳ್ಳಿ-ಧಾರವಾಡದಲ್ಲಿ ಕಾಂಗ್ರೆಸ್ ನಾಯಕರನ್ನು ಪಕ್ಷವು ಒಬ್ಬರ ಹಿಂದೆ ಒಬ್ಬರನ್ನು ಸೆಳೆಯುತ್ತಿದೆ.

ಸದ್ಯ ಶೆಟ್ಟರ್ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿ ಲಿಂಗಾಯತ ನಾಯಕತ್ವವನ್ನು ಅವಮಾನಿಸುತ್ತಿದೆ ಮತ್ತು ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳಿಗೆ ಟಿಕೆಟ್ ನೀಡುತ್ತಿದೆ ಎಂದು ಶೆಟ್ಟರ್ ಕಿಡಿಕಾರಿದ್ದಾರೆ.

ಶೆಟ್ಟರ್ ಅವರ ಬಲಗೈ ಬಂಟರಾಗಿದ್ದ ಮಹೇಶ್ ಟೆಂಗಿನಕಾಯಿ ಅವರನ್ನೇ ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಮಾಡಿದೆ.

ಕಳೆದ 10 ದಿನಗಳ ಅಂತರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಒಂಬತ್ತು ಕೇಂದ್ರ ನಾಯಕರು ಹುಬ್ಬಳ್ಳಿ ನಗರಕ್ಕೆ ಆಗಮಿಸಿ ಸರಣಿ ಸಭೆ ನಡೆಸಿ ಮಾಜಿ ಮುಖ್ಯಮಂತ್ರಿಯನ್ನು ಸೋಲಿಸಲು ಪಣತೊಡುವಂತೆ ಹೇಳಿದ್ದಾರೆ.

ನನ್ನ ರಕ್ತದಲ್ಲಿ ಬರೆದುಕೊಡ್ತೇನೆ ಯಾವುದೇ ಕಾರಣಕ್ಕೂ ಪಕ್ಷ ದ್ರೋಹಿ ಜಗದೀಶ್ ಶೆಟ್ಟರ್‌ ಚುನಾವಣೆಯಲ್ಲಿ ಗೆಲ್ಲಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com