ಚುನಾವಣೆಗೆ ಎರಡು ವಾರ ಬಾಕಿ: ಇಂದು ಉತ್ತರ ಕರ್ನಾಟಕದಲ್ಲಿ ಅಮಿತ್ ಶಾ, ರಾಹುಲ್ ಗಾಂಧಿ ಅಬ್ಬರದ ಪ್ರಚಾರ

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಉತ್ತರ ಕರ್ನಾಟಕದ ಪ್ರದೇಶದಲ್ಲಿ ರ‍್ಯಾಲಿಗಳನ್ನು ನಡೆಸಲಿದ್ದಾರೆ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ರಾಹುಲ್ ಗಾಂಧಿ - ಅಮಿತ್ ಶಾ
ರಾಹುಲ್ ಗಾಂಧಿ - ಅಮಿತ್ ಶಾ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಉತ್ತರ ಕರ್ನಾಟಕದ ಪ್ರದೇಶದಲ್ಲಿ ರ‍್ಯಾಲಿಗಳನ್ನು ನಡೆಸಲಿದ್ದಾರೆ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ನಂತರ ಬಿಜೆಪಿಯ ಭದ್ರಕೋಟೆ ಎಂದೇ ಪರಿಗಣಿಸಲಾಗಿದ್ದ ಉತ್ತರ ಕರ್ನಾಟಕ ಪ್ರದೇಶದಲ್ಲಿ ಕಾಂಗ್ರೆಸ್ ತನ್ನ ಭವಿಷ್ಯದ ಬಾಗಿಲು ತೆರೆಯಲು ಉತ್ಸುಕವಾಗಿದೆ.

ಈಗಾಗಲೇ ಉತ್ತರ ಕರ್ನಾಟಕ ಭಾಗದಲ್ಲಿ ಸರಣಿ ಸಭೆ ನಡೆಸಿರುವ ಅಮಿತ್ ಶಾ, ಶೆಟ್ಟರ್ ಸೋಲಿಸಲು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಬಿಜೆಪಿಯಿಂದ ಆದ ಅವಮಾನದಿಂದಾಗಿ ಪಕ್ಷ ತೊರೆಯಬೇಕಾಯಿತು ಎಂದು ಶೆಟ್ಟರ್ ಮತ್ತು ಸವದಿ ಹೇಳಿಕೊಳ್ಳುತ್ತಿರುವುದರಿಂದ ಲಿಂಗಾಯತ ಮತ ಬ್ಯಾಂಕ್ ಉಳಿಸಿಕೊಳ್ಳಲು ಬಿಜೆಪಿ ಚಿಂತಿಸುತ್ತಿದೆ. ಉತ್ತರ ಕರ್ನಾಟಕವನ್ನು ಲಿಂಗಾಯತ ಸಮುದಾಯದ ಭದ್ರಕೋಟೆ ಎಂದೇ ಪರಿಗಣಿಸಲಾಗಿದೆ.

ಕಲಬುರ್ಗಿ ಜಿಲ್ಲೆಯ ಜೇವರ್ಗಿಯಲ್ಲಿ ರಾಹುಲ್ ಗಾಂಧಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಬಳ್ಳಾರಿಯಲ್ಲಿ ಮೆಗಾ ರೋಡ್ ಶೋ ನಡೆಸುತ್ತಾರೆ.

ಗದಗ, ಧಾರವಾಡ, ದಾವಣಗೆರೆ, ಹಾವೇರಿ ಜಿಲ್ಲೆಗಳಿಗೆ ಶಾ ಭೇಟಿ ನೀಡಿ ಪ್ರಚಾರ ನಡೆಸಲಿದ್ದಾರೆ. ಧಾರವಾಡದ ಅಣ್ಣಿಗೇರಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗದಗ, ಹಾವೇರಿ, ದಾವಣಗೆರೆ ಜಿಲ್ಲೆಗಳಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಂಜೆಯೂ ಸರಣಿ ಸಭೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com