ವಿಧಾನಸಭಾ ಚುನಾವಣೆಯಲ್ಲಿ ಜನಾರ್ದನ ರೆಡ್ಡಿಯ ಹೊಸ ಪಕ್ಷ ಸದ್ದು ಮಾಡಬಹುದೇ?

ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯವಿರುವ ರಾಜ್ಯ ರಾಜಕೀಯ ಕ್ಷೇತ್ರದಲ್ಲಿ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಅವರ ಹೊಸ ಪಕ್ಷ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಈಗ ಅಂಬೆಗಾಲು ಇಡುತ್ತಿರಬಹುದು ಆದರೆ, 2028 ರ ವೇಳೆಗೆ  ಆಡಳಿತಕ್ಕೆ ಬರುವಷ್ಟು ದೊಡ್ಡದಾಗಿ ಬೆಳೆಯುತ್ತದೆ ಎಂಬ ವಿಶ್ವಾಸದಲ್ಲಿದ್ದಾರೆ.
ಜನಾರ್ದನ ರೆಡ್ಡಿ
ಜನಾರ್ದನ ರೆಡ್ಡಿ

ಬೆಂಗಳೂರು: ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯವಿರುವ ರಾಜ್ಯ ರಾಜಕೀಯ ಕ್ಷೇತ್ರದಲ್ಲಿ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಅವರ ಹೊಸ ಪಕ್ಷ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಈಗ ಅಂಬೆಗಾಲು ಇಡುತ್ತಿರಬಹುದು ಆದರೆ, 2028 ರ ವೇಳೆಗೆ ಆಡಳಿತಕ್ಕೆ ಬರುವಷ್ಟು ದೊಡ್ಡದಾಗಿ ಬೆಳೆಯುತ್ತದೆ ಎಂಬ ವಿಶ್ವಾಸದಲ್ಲಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೇಸರಿ ಪಕ್ಷದೊಂದಿಗಿನ ಸಂಬಂಧ ಕಡಿದುಕೊಂಡು ಕೆಆರ್‌ಪಿಪಿ ಪಕ್ಷ ಸ್ಥಾಪಿಸಿದ ಮಾಜಿ ಸಚಿವ ಜನಾರ್ದನ ರೆಡ್ಡಿ, 2023ರಲ್ಲಿ ಭದ್ರ ಬುನಾದಿ ಹಾಕಿ 2028ರ ವೇಳೆಗೆ ನಮ್ಮ ಸ್ವಂತ ಬಲದ ಮೇಲೆ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದ್ದರು. 

'ಮುಖ್ಯಮಂತ್ರಿ ಸ್ಥಾನದ ಗುರಿ ಈಗ ವಿಷಯವಲ್ಲ, 2028ರ ಚುನಾವಣೆ ನನ್ನ ಗುರಿಯಾಗಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ರಾಜ್ಯದಲ್ಲಿ ಸ್ವಂತ ಬಲದಿಂದ ಸರ್ಕಾರ ರಚಿಸುತ್ತದೆ ಎಂದು ರೆಡ್ಡಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಬೇಡಿಕೆ ಈಡೇರಿಸುತ್ತೇನೆ ಎಂಬ ವಿಶ್ವಾಸ ಜನರಿಗಿದೆ. ಈ ಹಿಂದೆ ಬಿಜೆಪಿಯಲ್ಲಿದ್ದಾಗ ಸಾಕಷ್ಟು ಜನ ಸೇವೆ ಮಾಡಿದ್ದಾನೆ. ಅದರ ಆಧಾರದ ಮೇಲೆ ಜನರು ನನ್ನಿಂದ ಸಾಕಷ್ಟು ನಿರೀಕ್ಷೆ ಹೊಂದಿದ್ದಾರೆ ಅದೇ ಕಾರಣ ಹೊಸ ಪಕ್ಷ ಸ್ಥಾಪಿಸಿದ್ದೇನೆ. ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ಕೆಆರ್‌ಪಿಪಿ 47 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಕನಿಷ್ಠ 25 ಕ್ಷೇತ್ರಗಳಲ್ಲಿ ಗೆಲ್ಲುವುದು ನಮ್ಮ ಗುರಿಯಾಗಿದೆ ಎಂದು ಅವರು ಪ್ರಚಾರದ ವೇಳೆಯಲ್ಲಿ ತಿಳಿಸಿದರು. 

ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ರೆಡ್ಡಿ, ಬಹುಮತದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಕರ್ನಾಟಕದ ಬಳ್ಳಾರಿ ಮತ್ತು ಆಂಧ್ರಪ್ರದೇಶದ ಅನಂತಪುರ ಮತ್ತು ವೈಎಸ್‌ಆರ್ ಕಡಪ ಜಿಲ್ಲೆಗಳಿಗೆ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಕೆರ್ ಪಿಪಿ ಕಿಂಗ್ ಮೇಕರ್ ಆಗಬಹುದೇ  ಮೇ 13 ರಂದು ಹೊರಬರಲಿರುವ ಫಲಿತಾಂಶದ ಮೇಲೆ ಅವಲಂಬಿತವಾಗಿರುತ್ತದೆ ಎಂದರು. 

ಒಂದು ವೇಳೆ ಅತಂತ್ರ ವಿಧಾನಸಭೆಯಾಗದ್ದಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್ ಯಾವ ಪಕ್ಷಕ್ಕೆ ಬೆಂಬಲ ನೀಡುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ರೆಡ್ಡಿ, ನನ್ನ ಪಕ್ಷದ ಕಾರ್ಯಸೂಚಿಯನ್ನು ಯಾರು ಬೆಂಬಲಿಸುತ್ತಾರೋ, ಯಾರು ಬೆಂಬಲಿಸುತ್ತಾರೋ ಅವರೊಂದಿಗೆ ಹೋಗುತ್ತೇನೆ. ಜಾತಿ ಮತ್ತು ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುವ ಪಕ್ಷಗಳಿಂದ ದೂರವಿರಲು ಬಯುತ್ತೇನೆ.  ಸಮಾನತೆ ಬಯಸುವ ಬಸವೇಶ್ವರ ಅವರ ತತ್ವಗಳಿಂದ ನಮ್ಮ ಪಕ್ಷವು ಪ್ರಭಾವಿತವಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಮಗೆ ಪ್ರತಿಸ್ಪರ್ಧಿಗಳು ಎಂದು ತಿಳಿಸಿದರು.

2008 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಾರದಿದ್ದಾಗ ಆಪರೇಷನ್ ಕಮಲ" ದಲ್ಲಿ ಪ್ರಮುಖ ಪಾತ್ರ ವಹಿಸಿದವರಲ್ಲಿ ರೆಡ್ಡಿ ಕೂಡಾ ಒಬ್ಬರು. ಇದು ಬಿ ಎಸ್ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಬಿಜೆಪಿಗೆ ಮೊದಲ ಬಾರಿಗೆ ಕರ್ನಾಟಕದಲ್ಲಿ ಸ್ವಂತವಾಗಿ ಸರ್ಕಾರ ರಚಿಸಲು ಸಹಾಯ ಮಾಡಿತು. ಗಣಿ ಹಗರಣದಲ್ಲಿ ಸಿಬಿಐನಿಂದ ಬಂಧಿಸಿದ ಸಮಯದಿಂದ ಸುಮಾರು 12 ವರ್ಷಗಳಿಂದ ರೆಡ್ಡಿ ರಾಜಕೀಯವಾಗಿ ನಿಷ್ಕ್ರಿಯರಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com