ಕಲ್ಯಾಣ ಕರ್ನಾಟಕದಲ್ಲಿ ಜನಾರ್ದನ ರೆಡ್ಡಿ ಪಕ್ಷ ಬಿಜೆಪಿ ಮೇಲೆ ಪರಿಣಾಮ ಬೀರಲ್ಲ: ಶ್ರೀರಾಮುಲು

ತಮ್ಮ ಬಹುಕಾಲದ ಗೆಳೆಯ ಮತ್ತು ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರು ಆರಂಭಿಸಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಭವಿಷ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಶುಕ್ರವಾರ ಹೇಳಿದ್ದಾರೆ.
ಶ್ರೀರಾಮುಲು
ಶ್ರೀರಾಮುಲು

ಬೆಳಗಾವಿ: ತಮ್ಮ ಬಹುಕಾಲದ ಗೆಳೆಯ ಮತ್ತು ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರು ಆರಂಭಿಸಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಭವಿಷ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಶುಕ್ರವಾರ ಹೇಳಿದ್ದಾರೆ.

ಪ್ರಭಾವಿ ವಾಲ್ಮೀಕಿ ನಾಯಕ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಶ್ರೀರಾಮುಲು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೇಸರಿ ಪಕ್ಷ 30ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಎಲ್ಲಾ 10 ವಿಧಾನಸಭಾ ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶವು 41 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಈ ಪ್ರದೇಶವು ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳನ್ನು ಒಳಗೊಂಡಿದೆ. 

ಬಳ್ಳಾರಿ ಜನಾರ್ದನ ರೆಡ್ಡಿ ಅವರ ರಾಜಕೀಯ ತವರೂರು. ಆದರೆ, ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಕರ್ನಾಟಕದ ಬಳ್ಳಾರಿ ಹಾಗೂ ಆಂಧ್ರಪ್ರದೇಶದ ಅನಂತಪುರ ಮತ್ತು ವೈಎಸ್‌ಆರ್ ಕಡಪ ಜಿಲ್ಲೆಗಳಿಗೆ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಜನಾರ್ದನ ರೆಡ್ಡಿ ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಂಡು ಹೊಸ ಪಕ್ಷ ಕೆಆರ್‌ಪಿಪಿಯನ್ನು ಘೋಷಿಸಿದ್ದಾರೆ. 

ಜನಾರ್ದನ ರೆಡ್ಡಿ ಅವರು ತಮ್ಮದೇ ಆದ ಪಕ್ಷವನ್ನು ಕಟ್ಟಿದ್ದಾರೆ. ಆದರೆ, ಬಿಜೆಪಿ ಯಾವಾಗಲೂ ಪ್ರಬಲವಾಗಿದೆ. ಕಲ್ಯಾಣ ಕರ್ನಾಟಕದಲ್ಲಿ 41 ವಿಧಾನಸಭಾ ಕ್ಷೇತ್ರಗಳ ಪೈಕಿ 30ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎನ್ನುತ್ತಾರೆ ಬಳ್ಳಾರಿ ಗ್ರಾಮಾಂತರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಶ್ರೀರಾಮುಲು.

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಎಲ್ಲಾ 10 ವಿಧಾನಸಭಾ ಸ್ಥಾನಗಳನ್ನು ಗೆಲ್ಲಲು ನಾವು ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಮತ್ತು ಎಲ್ಲಾ 10 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸುವ ವಿಶ್ವಾಸವಿದೆ. ಬಿಜೆಪಿ ಮೊದಲಿನಿಂದಲೂ ಪ್ರಬಲವಾಗಿರುವುದರಿಂದ ಕೆಆರ್‌ಪಿಪಿ ಯಾವುದೇ ಪರಿಣಾಮ ಬೀರುವುದಿಲ್ಲ. ಬಿಜೆಪಿ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು, ಜನರಿಗೆ ತಿಳಿದಿದೆ ಎಂದರು.

ಚುನಾವಣೆಯಲ್ಲಿ ಕೆಆರ್‌ಪಿಪಿ ಕನಿಷ್ಠ 25 ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಲಿದೆ ಎಂಬ ಜನಾರ್ದನ ರೆಡ್ಡಿ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶ್ರೀರಾಮುಲು, ಅವರು ಹಿರಿಯರು. ನಾನು ಕಾಮೆಂಟ್ ಮಾಡುವುದಿಲ್ಲ ಎಂದರು. 

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಿಜೆಪಿ ತೊರೆಯುವ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಶ್ರೀರಾಮುಲು, ರಾಜಕೀಯದಲ್ಲಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಅವರು ಕಾಯ್ದಿದ್ದರೆ ಅವರಿಗೆ ಕೆಲವು ದೊಡ್ಡ ಹುದ್ದೆಗಳು ಸಿಗುತ್ತಿತ್ತೇನೋ ನನಗೆ ಗೊತ್ತಿಲ್ಲ. ಸ್ವಲ್ಪ ತಾಳ್ಮೆ ಇದ್ದಿದ್ದರೆ ಚೆನ್ನಾಗಿತ್ತು ಅನ್ನಿಸುತ್ತೆ. ಕೆಲವೊಮ್ಮೆ ರಾಜಕೀಯಕ್ಕೆ ಹೊಸಬರಿಗೆ ಅವಕಾಶ ಕಲ್ಪಿಸಬೇಕಾಗುತ್ತದೆ. ಹೀಗಾಗಿಯೇ ಇಂತಹ ನಿರ್ಧಾರಗಳನ್ನು ಕೈಗೊಂಡಿರಬಹುದೇನೋ ನನಗೆ ತಿಳಿದಿಲ್ಲ ಎಂದು ಅವರು ಹೇಳಿದರು.

ಮೊಳಕಾಲ್ಮೂರು ಕ್ಷೇತ್ರದಿಂದ ಸ್ಥಳಾಂತರಗೊಂಡಿದ್ದು ಏಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಬಾರಿ ಅಲ್ಲಿಂದ (ಮೊಳಕಾಲ್ಮೂರು) ಸ್ಪರ್ಧಿಸುವುದಿಲ್ಲ ಎಂದು ಅವರಿಗೆ (ಬಿಜೆಪಿ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ) ಮಾತು ನೀಡಿದ್ದೆ. ಇಲ್ಲಿಂದ (ಬಳ್ಳಾರಿ) ಆರು ಬಾರಿ ಗೆದ್ದಿದ್ದೇನೆ. ಅಲ್ಲಿಂದ ಹೊರಟು ಇಲ್ಲಿಂದ ಸ್ಪರ್ಧಿಸುತ್ತಿದ್ದೇನೆ. ನಾನು ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com