ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ

ರಾಜಧಾನಿ ಬೆಂಗಳೂರಿನಲ್ಲಿಂದು ಬಿಜೆಪಿ ಹಿರಿಯ ನಾಯಕ ಹಾಗೂ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ರೋಡ್ ಶೋ ನಡೆಸುವ ಮೂಲಕ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದರು.
ಪ್ರಧಾನಿ ಮೋದಿ ರೋಡ್ ಶೋ
ಪ್ರಧಾನಿ ಮೋದಿ ರೋಡ್ ಶೋ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಚಾರದ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ವಿವಿಧ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿಂದು ಬಿಜೆಪಿ ಹಿರಿಯ ನಾಯಕ ಹಾಗೂ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ರೋಡ್ ಶೋ ನಡೆಸುವ ಮೂಲಕ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದರು. ನೈಸ್ ರಸ್ತೆ ಜಂಕ್ಷನ್ ನಿಂದ ಸುಮಾರು 5.30 ಕಿಲೋ ಮೀಟರ್ ದೂರ ಮಾಗಡಿ ರಸ್ತೆಯ ಸುಮ್ಮನಹಳ್ಳಿಯವರೆಗೂ ತೆರೆದ ವಾಹನದಲ್ಲಿ ಮೋದಿ ರೋಡ್ ಶೋ ನಡೆಸಿದರು. ಬಿಜೆಪಿ ಹಿರಿಯ ಮುಖಂಡರಾದ ಡಿ. ವಿ. ಸದಾನಂದಗೌಡ ಹಾಗೂ ಛಲವಾದಿ ನಾರಾಯಣ ಸ್ವಾಮಿ ಮೋದಿ ಅವರಿಗೆ ಸಾಥ್ ನೀಡಿದರು.

ಮೋದಿ ಕಣ್ತುಂಬಿಕೊಳ್ಳಲು ರಸ್ತೆಯ ಇಕ್ಕೆಲ್ಲಗಳಲ್ಲಿ ಭಾರೀ ಜನಸ್ತೋಮವೇ ನೆರೆದಿತ್ತು. ಮೋದಿ ಮೋದಿ ಎಂಬ ಘೋಷಣೆ ಮುಗಿಲು ಮಟ್ಟಿತ್ತು. ಬಿಜೆಪಿ ಕಾರ್ಯಕರ್ತರು ಮೋದಿ ಅವರತ್ತ ಹೂ ಮಳೆಗರೆದರು. ಮೋದಿ ಜನರತ್ತ ಕೈ ಬೀಸುತ್ತಾ ತೆರೆದ ವಾಹನದಲ್ಲಿ ತೆರಳಿದರು. ಸಾಗುವ ರಸ್ತೆಯುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಬೆಂಗಳೂರಿನಲ್ಲಿ ರಾತ್ರಿ ವಾಸ್ತವ್ಯ ಹೂಡಲಿರುವ ಪ್ರಧಾನಿ ಮೋದಿ, ನಾಳೆ ಕೋಲಾರ, ಚನ್ನಪಟ್ಟಣ ಮತ್ತು ಮೈಸೂರಿನಲ್ಲಿ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com