ಮೋದಿ ತಮ್ಮ ಕಷ್ಟವನ್ನು ಜನರ ಬಳಿ ಹೇಳುತ್ತಾರೆಯೇ ಹೊರತು ಅವರ ಸಂಕಟ ಕೇಳೋಲ್ಲ: ಪ್ರಿಯಾಂಕಾ ಗಾಂಧಿ

ಜನರ ಕಷ್ಟಗಳನ್ನು ಆಲಿಸುವ ಹಲವು ಪ್ರಧಾನಿಗಳನ್ನು ನೋಡಿದ್ದೇನೆ. ಆದರೆ, ಜನರೆದುರು ತನ್ನ ಕಷ್ಟಗಳನ್ನು ಹೇಳಿಕೊಳ್ಳುವ ಪ್ರಧಾನಿಯನ್ನು ಇದೇ ಮೊದಲ ಬಾರಿಗೆ ನೋಡುತ್ತಿದ್ದೇನೆಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರಿಯಾಂಕಾ ಗಾಂಧಿ ರೋಡ್ ಶೋ
ಪ್ರಿಯಾಂಕಾ ಗಾಂಧಿ ರೋಡ್ ಶೋ

ನವಲಗುಂದ: ಜನರ ಕಷ್ಟಗಳನ್ನು ಆಲಿಸುವ ಹಲವು ಪ್ರಧಾನಿಗಳನ್ನು ನೋಡಿದ್ದೇನೆ. ಆದರೆ, ಜನರೆದುರು ತನ್ನ ಕಷ್ಟಗಳನ್ನು ಹೇಳಿಕೊಳ್ಳುವ ಪ್ರಧಾನಿಯನ್ನು ಇದೇ ಮೊದಲ ಬಾರಿಗೆ ನೋಡುತ್ತಿದ್ದೇನೆಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ನವಲಗುಂದದಲ್ಲಿ ಶನಿವಾರ ಪಕ್ಷದ ಅಭ್ಯರ್ಥಿ ಎನ್.ಎಚ್. ಕೋನರಡ್ಡಿ ಪರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಇಂದಿರಾಗಾಂಧಿ, ರಾಜೀವ್ ಗಾಂಧಿ, ಪಿವಿ ನರಸಿಂಹರಾವ್, ಅಟಲ್ ಬಿಹಾರಿ ವಾಜಪೇಯಿ ಮತ್ತು ಮನಮೋಹನ್ ಸಿಂಗ್, ನಾನು ಅನೇಕ ಪ್ರಧಾನಿಗಳನ್ನು ನೋಡಿದ್ದೇನೆ ಅವರೆಲ್ಲಾ ಜನರ ಕಷ್ಚಗಳನ್ನು ಆಲಿಸುತ್ತಿದ್ದರು, ಆದರೆ ಜನರ ಬಳಿ ತಮ್ಮ ಸಂಕಟವನ್ನು ಹೇಳಿಕೊಳ್ಳುವ ಏಕೈಕ ಪ್ರಧಾನಿ ಎಂದರೆ ಅದು ನರೇಂದ್ರ ಮೋದಿ ಎಂದು ಪ್ರಿಯಾಂಕಾ ಲೇವಡಿ ಮಾಡಿದರು.

ನವಲಗುಂದದಲ್ಲಿ ಸುಮಾರು 45 ನಿಮಿಷಗಳ ಕಾಲ ಭಾಷಣ ಮಾಡಿದ ಪ್ರಿಯಾಂಕಾ, ಬಿಜೆಪಿ ಪಕ್ಷವು ಕರ್ನಾಟಕದಿಂದ 1.5 ಲಕ್ಷ ಕೋಟಿ ರೂ.ಗಳನ್ನು ಲೂಟಿ ಮಾಡಿದ್ದು, ರಾಜ್ಯದಲ್ಲಿನ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಬ್ರೇಕ್ ಹಾಕಿದೆ. ಸರ್ಕಾರವು ಸಮಸ್ಯೆಗಳನ್ನು ಪರಿಹರಿಸುವ ಬದಲು ಸಾರ್ವಜನಿಕ ಹಣವನ್ನು ಮಾತ್ರ ಲೂಟಿ ಮಾಡಿದೆ. ಮೋದಿ ಅವರು ಸಮಸ್ಯೆಗಳಿಗೆ ಪರಿಹಾರವನ್ನು ನೀಡುವ ಬದಲು ಸಮಸ್ಯೆಯಾಗಿ ಮಾರ್ಪಟ್ಟಿದ್ದಾರೆ ಎಂದು  ಕಿಚಾಯಿಸಿದ್ದಾರೆ.

ಬಿಜೆಪಿ ಸರ್ಕಾರದ ಅತಿರೇಕದ ಭ್ರಷ್ಟಾಚಾರದಿಂದ ಗುತ್ತಿಗೆದಾರರು, ರೈತರು ಮತ್ತು ಉದ್ಯೋಗಾಕಾಂಕ್ಷಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ, "ಪ್ರಧಾನಿ ಅವರಿಗೆ ಹಲವಾರು ಪತ್ರಗಳನ್ನು ಬರೆಯಲಾಗಿದೆ. ಆದರೆ ಅವರು ಯಾವುದಕ್ಕೂ ಉತ್ತರಿಸಿದೆ ಮೌನವಾಗಿದ್ದಾರೆ ಎಂದು ಅವರು ಹೇಳಿದರು.

ಮುಕ್ತವಾಗಿ ಭ್ರಷ್ಟಾಚಾರ ಮಾಡುವವರಿಗೆ ಗೌರವ ನೀಡಿದರು. ಭ್ರಷ್ಟರಿಗೆ ಟಿಕೆಟ್‌ ನೀಡಿದರು. ಇದಲ್ಲದೇ, ಪ್ರಧಾನಿಯವರು ಭ್ರಷ್ಟರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದರು’ ಎಂದು ಟೀಕಿಸಿದರು.. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೂಡ ಬಲಿಪಶು ಆಗಿದ್ದಾರೆ. ಅವರನ್ನು ಗೌರವಿಸಲಾಗಲಿಲ್ಲ ಮತ್ತು ಪಕ್ಷವನ್ನು ತೊರೆಯುವಂತೆ ಒತ್ತಾಯಿಸಲಾಯಿತುಎಂದು ಅವರು ಹೇಳಿದರು.  ಕುಂದಗೋಳದಲ್ಲಿ ಅದ್ಧೂರಿ ರೋಡ್ ಶೋ ನಡೆಸಿ, ಕ್ಷೇತ್ರದ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರ ಪ್ರಚಾರ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com