ನವದೆಹಲಿ: ಕೇಂದ್ರ ಸಚಿವ ಅಮಿತ್ ಶಾ- ಬಸವರಾಜ ಬೊಮ್ಮಾಯಿ ಭೇಟಿ, ಹಲವು ವಿಷಯ ಕುರಿತು ಚರ್ಚೆ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.
ಅಮಿತ್ ಶಾ ಅವರೊಂದಿಗೆ ಬಸವರಾಜ ಬೊಮ್ಮಾಯಿ
ಅಮಿತ್ ಶಾ ಅವರೊಂದಿಗೆ ಬಸವರಾಜ ಬೊಮ್ಮಾಯಿ

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಬೊಮ್ಮಾಯಿ, ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರನ್ನು ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದ್ದು,  ರಾಜ್ಯದ ಹಲವು  ವಿಷಯಗಳ ಕುರಿತು ಚರ್ಚಿಸಿರುವುದಾಗಿ ತಿಳಿಸಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ನಡೆದು ಮೂರು ತಿಂಗಳು ಕಳೆದಿದ್ದರೂ ಬಿಜೆಪಿ ಇನ್ನೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ. ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ನಾಯಕರು ಈ ವಿಚಾರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದ್ದಾರೆ.
ಈ ಮಧ್ಯೆ ಅಮಿತ್ ಶಾ ಅವರನ್ನು ಬಸವರಾಜ ಬೊಮ್ಮಾಯಿ ಭೇಟಿ ಮಾಡಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.

ಬಿಜೆಪಿ ಶಾಸಕರಾದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಸುರೇಶ್ ಕುಮಾರ್ , ವಿ.ಸುನೀಲ್ ಕುಮಾರ್ , ಡಾ.ಸಿ.ಎನ್. ಅಶ್ವತ್ಥ್ ನಾರಾಯಣ, ಆರ್.ಅಶೋಕ, ಅರವಿಂದ್ ಬೆಲ್ಲದ್ ಅವರನ್ನೂ ವಿಪಕ್ಷ ನಾಯಕನ ಸ್ಥಾನಕ್ಕೆ ಪರಿಗಣಿಸಲಾಗಿದ್ದು,  ಯತ್ನಾಳ್ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೇರುವುದಕ್ಕೆ ಬಿಎಸ್‌ವೈ ವಿರೋಧ ವ್ಯಕ್ತಪಡಿಸಿದ್ದು, ಬಸವರಾಜ ಬೊಮ್ಮಾಯಿ ಅವರೇ  ಸೂಕ್ತ ಎಂದು ಹೇಳಿದ್ದಾರೆ ಎನ್ನಲಾಗಿದೆ. ಈ ನಡುವೆ ಬಸವರಾಜ ಬೊಮ್ಮಾಯಿ, ಅಮಿತ್ ಶಾ ಭೇಟಿ ಸಾಕಷ್ಟು ಕೌತುಕ ಮೂಡಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com