ಸಿದ್ದರಾಮಯ್ಯ ರಾಜ್ಯದ 224 ಶಾಸಕರಿಗೂ ಮುಖ್ಯಮಂತ್ರಿಗಳೇ ಅಥವಾ ಗ್ಯಾರಂಟೀ ಶಾಸಕರಿಗೆ ಮಾತ್ರವೇ??: ಬಿಜೆಪಿ

ಕ್ಷೇತ್ರಗಳಿಗೆ ಅನುದಾನ ಬಿಡುಗಡೆ, ಜಿಲ್ಲೆಗಳ ಉಸ್ತುವಾರಿ ಕೆಲಸಗಳು, ಶಾಸಕರ ಬೇಡಿಕೆಗಳು ಇತ್ಯಾದಿಗಳ ಬಗ್ಗೆ ತಿಳಿದುಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಮಂಗಳವಾರ ಕೂಡ ಕಾಂಗ್ರೆಸ್ ಶಾಸಕರ ಜೊತೆ ಸಭೆ ನಡೆಸಿದ್ದರು.
ಸಿಎಂ ಜೊತೆ ಸಭೆಯಲ್ಲಿ ಸಚಿವ ಎಂ ಬಿ ಪಾಟೀಲ್
ಸಿಎಂ ಜೊತೆ ಸಭೆಯಲ್ಲಿ ಸಚಿವ ಎಂ ಬಿ ಪಾಟೀಲ್

ಬೆಂಗಳೂರು: ಕ್ಷೇತ್ರಗಳಿಗೆ ಅನುದಾನ ಬಿಡುಗಡೆ, ಜಿಲ್ಲೆಗಳ ಉಸ್ತುವಾರಿ ಕೆಲಸಗಳು, ಶಾಸಕರ ಬೇಡಿಕೆಗಳು ಇತ್ಯಾದಿಗಳ ಬಗ್ಗೆ ತಿಳಿದುಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಮಂಗಳವಾರ ಕೂಡ ಕಾಂಗ್ರೆಸ್ ಶಾಸಕರ ಜೊತೆ ಸಭೆ ನಡೆಸಿದ್ದರು.

ಇದಕ್ಕೆ ಟೀಕೆ ಮಾಡಿರುವ ವಿರೋಧ ಪಕ್ಷ ಬಿಜೆಪಿ, ಕೇವಲ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿದ್ದಕ್ಕೆ ಟೀಕೆ ವ್ಯಕ್ತಪಡಿಸಿದ್ದಾರೆ. ನಿನ್ನೆ ಸಿದ್ದರಾಮಯ್ಯನವರು ರಾಯಚೂರು, ವಿಜಯಪುರ, ಕೊಪ್ಪಳ, ಬೆಳಗಾವಿ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳ ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಸಿಎಂ ಅವರ ನಡೆಗೆ ಟೀಕಿಸಿರುವ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಸುರೇಶ್ ಕುಮಾರ್, ಸಿದ್ದರಾಮಯ್ಯನವರು ರಾಜ್ಯದ ಎಲ್ಲಾ 224 ಶಾಸಕರಿಗೆ ಮುಖ್ಯಮಂತ್ರಿಗಳೇ ಅಥವಾ ಕೇವಲ ಗ್ಯಾರಂಟಿ ಯೋಜನೆಗಳಿಗೆ ಮಾತ್ರ ಮುಖ್ಯಮಂತ್ರಿಗಳೇ, ಸಿದ್ದರಾಮಯ್ಯನವರ ಸಭೆ ಮತ್ತು ಭರವಸೆಗಳು ಸಾರ್ವಜನಿಕರಲ್ಲಿ ಗೊಂದಲ, ಸಂಶಯ ಹುಟ್ಟಿಸುತ್ತಿದೆ ಎಂದರು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಹ ಸಭೆಗಳನ್ನು ನಡೆಸಿದರು. ವಿಜಯಪುರದ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಟ್ವೀಟ್ ಮಾಡಿ,  ಸ್ಥಳೀಯ ಅಭಿವೃದ್ಧಿ ಕೆಲಸಗಳು, ಅನುದಾನ, ಲೋಕಸಭೆ ಚುನಾವಣೆಗೆ ಸಿದ್ಧತೆ ಕುರಿತು ಚರ್ಚಿಸಲಾಯಿತು ಎಂದು ಬರೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com