ಆಪರೇಷನ್ ಲೋಕಸಭೆ: ಯಾರೆಲ್ಲಾ ಕಾಂಗ್ರೆಸ್ ಗೆ ಬರ್ತಾರೋ ಅವರನ್ನೆಲ್ಲಾ ಸೇರಿಸಿಕೊಳ್ಳಿ- ಡಿ.ಕೆ ಶಿವಕುಮಾರ್
ರಾಜ್ಯ ರಾಜಕಾರಣದಲ್ಲಿ ಬಾಂಬೆ ಬಾಯ್ಸ್ ಘರ್‌ವಾಪ್ಸಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಆಪರೇಷನ್‌ಗೆ ಕಾಂಗ್ರೆಸ್ ಕೈ ಹಾಕಿದೆ ಎನ್ನುವ ಹೊತ್ತಲ್ಲೇ ಯಶವಂತಪುರದಲ್ಲಿ ಭಾರೀ ಬೆಳವಣಿಗೆ ನಡೆದಿದೆ.
Published: 18th August 2023 12:31 PM | Last Updated: 18th August 2023 01:47 PM | A+A A-

ಡಿ.ಕೆ ಶಿವಕುಮಾರ್ ಮತ್ತು ಚಲುವರಾಯಸ್ವಾಮಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಾಂಬೆ ಬಾಯ್ಸ್ ಘರ್‌ವಾಪ್ಸಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಆಪರೇಷನ್‌ಗೆ ಕಾಂಗ್ರೆಸ್ ಕೈ ಹಾಕಿದೆ ಎನ್ನುವ ಹೊತ್ತಲ್ಲೇ ಯಶವಂತಪುರದಲ್ಲಿ ಭಾರೀ ಬೆಳವಣಿಗೆ ನಡೆದಿದೆ.
ಪಕ್ಷದಲ್ಲಿ ಕೆಲವು ಕಾರ್ಯಕರ್ತರು ಬಹಳ ಉತ್ಸಾಹದಿಂದ ಕೆಲಸ ಮಾಡ್ತಿದ್ದಾರೆ. ನಿಮ್ಮ ಓಟ್ ಶೇರ್ ಜಾಸ್ತಿ ಮಾಡಿಕೊಳ್ಳಿ ಎಂದು ಕಾರ್ಯಕರ್ತರಿಗೆ ಹೇಳಿದ್ದೇವೆ. ಸ್ಥಳೀಯ ಮಟ್ಟದಲ್ಲಿ ಯಾರೆಲ್ಲ ಕಾಂಗ್ರೆಸ್ ಸೇರುವುದಕ್ಕೆ ಸಿದ್ಧರಿದ್ದಾರೋ ಅವರನ್ನೆಲ್ಲ ಸೇರಿಸಿಕೊಳ್ಳಿ ಅಂತ ಹೇಳಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಎಸ್.ಟಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ಸ್ಥಳೀಯ ಮಟ್ಟದಲ್ಲಿ ಯಾರೆಲ್ಲ ಕಾಂಗ್ರೆಸ್ ಸೇರುವುದಕ್ಕೆ ಸಿದ್ಧರಿದ್ದಾರೋ ಅವರನ್ನೆಲ್ಲ ಸೇರಿಸಿಕೊಳ್ಳಿ ಅಂತ ಹೇಳಿದ್ದೇನೆ. ಹಾಗಾಗಿ ಎಸ್.ಟಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ ವಿಚಾರ ಅವರು ವೈಯಕ್ತಿಕವಾಗಿ ಹೇಳಿರಬಹುದು. ಆ ವಿಚಾರ ಇನ್ನೂ ನನ್ನ ತನಕ ಬಂದಿಲ್ಲ. ರಾಜಕೀಯದಲ್ಲಿ ಯಾವಾಗ ಏನು ಬೇಕಾದ್ರೂ ಆಗಬಹುದು. ಯಾರು ಬರುತ್ತಾರೆ ಏನು ಎಂಬುದನ್ನ ನಾನು ಹೇಳೋದಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ನಲ್ಲಿ 'ಆಪರೇಷನ್ ಹಸ್ತ' ಗುಸುಗುಸು: ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದ ಡಿ ಕೆ ಶಿವಕುಮಾರ್
ಎಸ್.ಟಿ ಸೋಮಶೇಖರ್ ನಡೆಸಿದ್ದ ಸಭೆಯಲ್ಲಿ ಕೈ ಶಾಸಕ ಪ್ರತ್ಯಕ್ಷವಾಗಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಹೀಗಾಗಿ ಸೋಮಶೇಖರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಇನ್ನೂ ಮೈಸೂರಿನಲ್ಲಿ ಮಾತನಾಡಿದ, ಕೃಷಿ ಸಚಿವ ಚಲುವರಾಯಸ್ವಾಮಿ 10ರಿಂದ 15 ಜನ ಮಾಜಿ ಹಾಗೂ ಹಾಲಿ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ' ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, 'ಕೆಲವೇ ದಿನಗಳಲ್ಲಿ ಎಲ್ಲವೂ ಕೂಡ ಅಂತಿಮವಾಗಲಿದೆ. ಯಾರ್ಯಾರು ಬರಲಿದ್ದಾರೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದದವರು ನಮ್ಮ ಪಕ್ಷಕ್ಕೆ ಬರುವುದು ಖಚಿತ ಎಂದರು. ಬಿಜೆಪಿ, ಜೆಡಿಎಸ್ ನಿಂದ ನಮ್ಮ ಪಕ್ಷಕ್ಕೆ ಬರುವುದು ಖಚಿತ.ಕೆಲವೇ ದಿನಗಳಲ್ಲಿ ಇವೆಲ್ಲವೂ ಅಂತಿಮವಾಗಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಎಸ್.ಟಿ. ಸೋಮಶೇಖರ್ ಬಿಜೆಪಿ ತೊರೆದು ಪುನಃ ಕಾಂಗ್ರೆಸ್ ಸೇರ್ತಾರಾ? ಯಶವಂತಪುರ ಶಾಸಕ ಹೇಳಿದ್ದು ಹೀಗೆ...
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್, ಲೋಕಸಭೆ ಚುನಾವಣೆಯಲ್ಲೂ ಗೆಲುವಿಗಾಗಿ ಸಿದ್ಧತೆ ನಡೆಸಿದ್ದು, ಒಳಗೊಳಗೆ ಹಲವು ಬಿಜೆಪಿ ನಾಯಕರಿಗೆ ಗಾಳ ಹಾಕಿದೆ ಎಂದು ಹೇಳಲಾಗುತ್ತಿದೆ.
ಕರ್ನಾಟಕದಲ್ಲಿ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಇದೀಗ ಕುತೂಹಲ ಮೂಡಿಸಿದ್ದು ಇದೀಗ ಕೃಷಿ ಸಚಿವರ ಹೇಳಿಕೆ ಬಿಜೆಪಿ ಪಾಳಾಯದಲ್ಲಿ ಆತಂಕ ಸೃಷ್ಟಿಸಿದೆ.