ಅಸ್ಥಿರತೆಯ ಆತಂಕದಲ್ಲಿರುವ ಕಾಂಗ್ರೆಸ್ ಆಪರೇಷನ್ ಹಸ್ತ ಶುರು ಮಾಡಿದೆ: ಸಿ.ಟಿ. ರವಿ

ಅಸ್ಥಿರತೆಯ ಭಯದಲ್ಲಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತಕ್ಕೆ ಮುಂದಾಗಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ಸಿಟಿ ರವಿ ಅವರು ಶುಕ್ರವಾರ ಹೇಳಿದ್ದಾರೆ.
ಸಿ.ಟಿ.ರವಿ.
ಸಿ.ಟಿ.ರವಿ.

ಮೈಸೂರು: ಅಸ್ಥಿರತೆಯ ಭಯದಲ್ಲಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತಕ್ಕೆ ಮುಂದಾಗಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ಸಿಟಿ ರವಿ ಅವರು ಶುಕ್ರವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆದ್ದರೂ ಕಾಂಗ್ರೆಸ್ ಪಾಳಯದಲ್ಲಿ ಎಲ್ಲವೂ ಸರಿಯಿಲ್ಲ, ಎರಡು ತಿಂಗಳೊಳಗೆ ಭಿನ್ನಾಭಿಪ್ರಾಯಗಳು ಕೇಳಿಬಂದಿವೆ. ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಎಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರು ಮತ್ತು ಶಾಸಕರೊಂದಿಗೆ ಸಂವಾದ ನಡೆಸಲು ಜಿಲ್ಲಾವಾರು ಸಭೆ ನಡೆಸುವಂತಾಗಿದೆ. ಆದರೆ, ದೂರದೃಷ್ಟಿಯುಳ್ಳ ನಾಯಕರಾರು ಕಾಂಗ್ರೆಸ್‌ ಪಕ್ಷಕ್ಕೆ ಸೇರುವುದಿಲ್ಲ ಎಂದು ಹೇಳಿದರು.

ಇದೇ ವೇಳೆ ಎಸ್‌ಟಿ ಸೋಮಶೇಖರ್ ಸೇರಿದಂತೆ ಬಿಜೆಪಿ ಶಾಸಕರೊಂದಿಗೆ ಮಾತುಕತೆ ನಡೆಸಲು ನಿರ್ಧರಿಸಲಾಗಿದೆ. ಕಾಂಗ್ರೆಸ್‌ನಲ್ಲಿ ಹಿರಿಯ ನಾಯಕರಿಗೇ ಯಾವುದೇ ಸ್ಥಾನ ಸಿಗದಿರುವಾಗ ಇವರಿಗೆ ಏನು ಸಿಗುತ್ತದೆ ಎಂದು ಪ್ರಶ್ನಿಸಿದರು.

ರಾಜ್ಯವು ಬರಗಾಲದ ಪರಿಸ್ಥಿತಿಯಲ್ಲಿ ತತ್ತರಿಸಿದ್ದು, ಜಲಾಶಯಗಳ ಮಟ್ಟ ಇನ್ನೂ ಸುಧಾರಿಸಿಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ವಿದ್ಯುತ್ ಕಡಿತ ಮತ್ತು ಲೋಡ್ ಶೆಡ್ಡಿಂಗ್ ಸಮಸ್ಯೆ ಸಾಮಾನ್ಯವಾಗಿ ಹೋಗಿದೆ. ವಿದ್ಯುತ್ ಪೂರೈಕೆ ಇಲ್ಲದೆ, ಶೂನ್ಯ ವಿದ್ಯುತ್ ಬಿಲ್ ಕೊಟ್ಟರೆ ಏನು ಪ್ರಯೋಜನೆ ಎಂದು ಪ್ರಶ್ನಿಸಿದರು.

ಶೇ.40 ಕಮಿಷನ್ ಹಾಗೂ ಇತರೆ ವಿಷಯಗಳ ಕುರಿತು ಸುಳ್ಳು ಆರೋಪಗಳ ಮಾಡಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಆಡಳಿತ ಪಕ್ಷದ ದೋಷಗಳ ವಿರುದ್ಧ ಬಿಜೆಪಿ ತಿರುಗೇಟು ನೀಡಲಿದೆ ಎಂದು ಹೇಳಿದರು.

ಇದೇ ವೇಳೆ ನಾನು ಯಾವುದೇ ಹುದ್ದೆಯ ರೇಸ್‌ನಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಪಕ್ಷಕ್ಕೆ ಸೇವೆ ಸಲ್ಲಿಸಲು ರಾಜೀನಾಮೆ ನೀಡಿದ್ದೆ. ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ನಿಭಾಯಿಸಲು ನಾನು ಸಿದ್ಧನಿದ್ದೇನೆ, ಪ್ರಧಾನಿ ಮೋದಿ ಅವರು ಮರಳಿ ಅಧಿಕಾರಕ್ಕೆ ಬರಲಿದ್ದು, ಎನ್'ಡಿಎ ನೇತೃತ್ವದಲ್ಲಿ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com