ಮಧ್ಯ ಪ್ರದೇಶ, ಕರ್ನಾಟಕ, ಮಹಾರಾಷ್ಟ್ರದಲ್ಲಿ ಚುನಾಯಿತ ಸರ್ಕಾರಗಳನ್ನು ಬಿಜೆಪಿ ಉರುಳಿಸಿದ್ದು ಸರಿಯೇ?: ಡಿಸಿಎಂ ಶಿವಕುಮಾರ್

'ಆಪರೇಷನ್ ಹಸ್ತ' ವದಂತಿಗಳ ನಡುವೆ ಮತ್ತು ರಾಜ್ಯ ಬಿಜೆಪಿ ಘಟಕವು ತನ್ನ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಇದರ ನಡುವೆ ಡಿಸಿಎಂ ಮತ್ತು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಚುನಾಯಿತ ಸರ್ಕಾರಗಳನ್ನು ಬಿಜೆಪಿ ಉರುಳಿಸಿದ್ದು ಸರಿಯೇ ಎಂದು ಪ್ರಶ್ನಿಸಿದ್ದಾರೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: 'ಆಪರೇಷನ್ ಹಸ್ತ' ವದಂತಿಗಳ ನಡುವೆ ಮತ್ತು ರಾಜ್ಯ ಬಿಜೆಪಿ ಘಟಕವು ತನ್ನ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಇದರ ನಡುವೆ ಡಿಸಿಎಂ ಮತ್ತು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಚುನಾಯಿತ ಸರ್ಕಾರಗಳನ್ನು ಬಿಜೆಪಿ ಉರುಳಿಸಿದ್ದು ಸರಿಯೇ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕರು ಕಾಂಗ್ರೆಸ್‌ ಸೇರ್ಪಡೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಹಳೆಯ ಪಕ್ಷವು ಸಾಗರವಿದ್ದಂತೆ. ನಾಯಕರು ತಮ್ಮ ರಾಜಕೀಯ ಜೀವನವನ್ನು ನಿರ್ಮಿಸಲು ಬಯಸಿದರೆ, ಭಾರತವನ್ನು ಉಳಿಸುವ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಿದರೆ ಅವರು ಅಗತ್ಯವಿರುವಂತೆ ತಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಅದನ್ನು ಯಾರಾದರೂ ತಡೆಯಲು ಸಾಧ್ಯವೇ? ಎಂದು ಪ್ರಶ್ನಿಸಿದರು.

ಮಧ್ಯ ಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಚುನಾಯಿತ ಸರ್ಕಾರಗಳನ್ನು ಬಿಜೆಪಿ ಉರುಳಿಸಿದ್ದು ಸರಿಯೇ? ಅವರು ಹಾಗೆ ಮಾಡುವುದು ಸರಿ ಎಂದು ನೀವು ಭಾವಿಸುತ್ತೀರಾ? ಅವರು ಯಾವತ್ತೂ ಸರಿ ಇರಬಹುದು ಎಂದು ಶಿವಕುಮಾರ್ ವ್ಯಂಗ್ಯವಾಡಿದರು.

ನಾಯಕರು ತಮ್ಮ ಅಗತ್ಯಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ನನ್ನನ್ನು ಭೇಟಿಯಾಗಲು ಬಂದರು ಅವರ ಜೊತೆ ನಾನು ಮಾತನಾಡಿದ್ದನ್ನು ಬಹಿರಂಗಪಡಿಸಬೇಕೇ? ಶಿವಕುಮಾರ್ ಪ್ರಶ್ನಿಸಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಆಗಸ್ಟ್ 23ರಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ, 'ನಾವು ಪ್ರತಿಭಟನೆಯನ್ನು ಬೇಡ ಎಂದು ಹೇಳಲು ಸಾಧ್ಯವಿಲ್ಲ. ಆದರೆ, ಮೊದಲು ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿ ನಂತರ ಪ್ರತಿಭಟನೆ ನಡೆಸಲಿ ಎಂದು ಶಿವಕುಮಾರ್ ಹೇಳಿದ್ದಾರೆ.

ಬಿಜೆಪಿ ಶುಕ್ರವಾರ ರಾತ್ರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದಲ್ಲಿ ಒಗ್ಗಟ್ಟಿನ ಸಂದೇಶ ಸಾರಲು ಶಾಸಕರು ಮತ್ತು ಪಕ್ಷದ ಪ್ರಮುಖ ಮುಖಂಡರ ಸಭೆ ಕರೆದಿತ್ತು. ನಾಯಕತ್ವದ ಅನುಪಸ್ಥಿತಿಯಲ್ಲಿ, ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಲು ಒತ್ತಾಯಿಸಲ್ಪಟ್ಟ ಯಡಿಯೂರಪ್ಪ ಅವರನ್ನು ಮತ್ತೆ ಮುಂಚೂಣಿಗೆ ಕರೆಯಲಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇಬ್ಬರು ಪ್ರಮುಖ ಬಿಜೆಪಿ ನಾಯಕರು ಸಭೆಗೆ ಗೈರುಹಾಜರಾಗಿದ್ದು ವದಂತಿಗಳಿಗೆ ಶಕ್ತಿ ತುಂಬಿದ್ದಾರೆ.

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದೆ. ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನಿಂದ ಚೇತರಿಸಿಕೊಳ್ಳುವ ಮುನ್ನವೇ ಬಿಜೆಪಿಯಲ್ಲಿ ನಾಯಕತ್ವವನ್ನು ಕಣಕ್ಕಿಳಿಸಲು ನಾಯಕತ್ವ ಗ್ರೀನ್ ಸಿಗ್ನಲ್ ನೀಡಿದೆ. ವಿಧಾನಸಭಾ ಚುನಾವಣೆಯ ನಂತರ ಹೈಕಮಾಂಡ್ ಇನ್ನೂ ಅಸಮಾಧಾನಗೊಂಡಿರುವಂತೆ ಕಾಣುತ್ತಿರುವುದರಿಂದ ರಾಜ್ಯ ಬಿಜೆಪಿ ನಾಯಕತ್ವ ಒತ್ತಡಕ್ಕೆ ಸಿಲುಕಿದೆ.

ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒಟ್ಟುಗೂಡಿಸಿ ಚುನಾವಣಾ ಫಲಿತಾಂಶವನ್ನು ಸೆಣಸುವ ಬಿಜೆಪಿಯ ತಂತ್ರ ವಿಫಲವಾಗಿದೆ. ಪ್ರಧಾನಿ ಮೋದಿ ಎಲ್ಲೆಲ್ಲಿ ರ್ಯಾಲಿ ಮತ್ತು ರೋಡ್‌ಶೋ ನಡೆಸಿದರೂ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯನ್ನು ಲೇವಡಿ ಮಾಡಿದ್ದಾರೆ. ಪ್ರಧಾನಿ ಮೋದಿಯವರ ಆಡಳಿತದ ವಿರುದ್ಧ ದೇಶಕ್ಕೆ ಸಂದೇಶ ನೀಡಲು ಕಾಂಗ್ರೆಸ್ ಕರ್ನಾಟಕದ ದಿಗ್ವಿಜಯವನ್ನು ಬಳಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com