ಕಾಂಗ್ರೆಸ್‌ ಸೇರುವಂತೆ ನನಗೆ, ನಮ್ಮ ಪಕ್ಷದ ಶಾಸಕರಿಗೆ ಒತ್ತಡ ಹೇರಲಾಗುತ್ತಿದೆ: ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್

ಕೋಲಾರ ಜಿಲ್ಲೆಯ ಮುಳಬಾಗಲು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್, 'ಆಪರೇಷನ್ ಹಸ್ತ'ದ ವದಂತಿಯನ್ನು ದೃಢೀಕರಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ತನಗೆ ಮತ್ತು ತಮ್ಮ ಪಕ್ಷದ ಶಾಸಕರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಗುರುವಾರ ಹೇಳಿದ್ದಾರೆ. 
ಸಮೃದ್ಧಿ ಮಂಜುನಾಥ್
ಸಮೃದ್ಧಿ ಮಂಜುನಾಥ್
Updated on

ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಲು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್, 'ಆಪರೇಷನ್ ಹಸ್ತ'ದ ವದಂತಿಯನ್ನು ದೃಢೀಕರಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ತನಗೆ ಮತ್ತು ತಮ್ಮ ಪಕ್ಷದ ಶಾಸಕರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಗುರುವಾರ ಹೇಳಿದ್ದಾರೆ. 

'ನನಗೆ ದೆಹಲಿಗೆ ಬರುವಂತೆ ಒತ್ತಾಯಿಸಲಾಯಿತು. ಆದರೆ, ನಾನು ಆ ಪ್ರಸ್ತಾಪವನ್ನು ತಿರಸ್ಕರಿಸಿದೆ' ಎಂದು ಅವರು ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವಂತೆ ಹೈಕಮಾಂಡ್ ರಾಜ್ಯ ನಾಯಕತ್ವವನ್ನು ಕೇಳಿದೆ. ಹೀಗಾಗಿ, ಕಾಂಗ್ರೆಸ್ ನಾಯಕರು ಬೇರೆ ಬೇರೆ ಪಕ್ಷಗಳ ನಾಯಕರನ್ನು ತಮ್ಮತ್ತ ಸೆಳೆಯಲು ಯತ್ನಿಸುತ್ತಿದ್ದಾರೆ ಎಂದರು.

'ಮಾತುಕತೆಗಾಗಿ ನನ್ನನ್ನು ದೆಹಲಿಗೆ ಆಹ್ವಾನಿಸಿದಾಗ ನಾನು ವಿದೇಶದಲ್ಲಿದ್ದೆ. ನಾನು ಈ ಪ್ರಸ್ತಾಪವನ್ನು ನಿರಾಕರಿಸಿದೆ. ಜೆಡಿಎಸ್‌ನಿಂದ ಶಾಸಕರನ್ನು ಸೆಳೆಯಬಹುದು ಎಂದು ಕಾಂಗ್ರೆಸ್ ನಾಯಕರು ಭಾವಿಸಿದ್ದಾರೆ. ಮುಂದಿನ ದಿನಗಳಲ್ಲಿ ಜೆಡಿಎಸ್‌ನ ಎಲ್ಲಾ 19 ಶಾಸಕರು ಒಗ್ಗೂಡಿ ಜೆಡಿಎಸ್‌ಗೆ ಒಗ್ಗಟ್ಟು ಘೋಷಿಸಲು ಸಭೆ ನಡೆಸಲಿದ್ದಾರೆ ಎಂದು ನಾನು ಕಾಂಗ್ರೆಸ್ ನಾಯಕರಿಗೆ ಹೇಳಲು ಬಯಸುತ್ತೇನೆ. ಯಾರೊಬ್ಬರೂ ಕಾಂಗ್ರೆಸ್ ಸೇರುವುದಿಲ್ಲ' ಎಂದರು.

'ಮುಂಬರುವ ಲೋಕಸಭೆ ಚುನಾವಣೆಗೆ ರಣತಂತ್ರ ರೂಪಿಸಲು ಹಾಲಿ ಹಾಗೂ ಪರಾಜಿತ ಶಾಸಕರು, ಎಂಎಲ್‌ಸಿಗಳು, ಸಂಸದರು ಹಾಗೂ ಮುಖಂಡರು ಕೆಲಕಾಲ ಪ್ರವಾಸ ಕೈಗೊಳ್ಳಲಿದ್ದಾರೆ. ಜೆಡಿಎಸ್‌ನ ನಾಯಕರು ಪಕ್ಷ ತೊರೆದು ಕಾಂಗ್ರೆಸ್‌ ಸೇರುತ್ತಾರೆ ಎಂಬ ವದಂತಿಗಳಿಗೆ ತಕ್ಕ ಉತ್ತರ ನೀಡಲಾಗುವುದು. ಸಂಸತ್ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ರಾಜ್ಯ ಕಾಂಗ್ರೆಸ್ ನಾಯಕರು ಸರ್ಕಸ್ ಮಾಡುತ್ತಿದ್ದಾರೆ. ಅವರಿಗೆ ನಿರ್ದಿಷ್ಟ ಟಾರ್ಗೆಟ್ ನೀಡಲಾಗಿದೆಯೇ ಅಥವಾ ಹೈಕಮಾಂಡ್ ಅವರಿಗೆ ಎಚ್ಚರಿಕೆ ನೀಡಿದೆಯೇ ಎಂಬುದು ನನಗೆ ತಿಳಿದಿಲ್ಲ' ಎಂದು ಅವರು ಪುನರುಚ್ಚರಿಸಿದರು.

'ರಾಜಕೀಯ ಪಕ್ಷಗಳ ಭವಿಷ್ಯವನ್ನು ಜನರೇ ಬರೆಯುತ್ತಾರೆ. ಅವರು ಈಗಾಗಲೇ ವಿಧಾನಸಭೆ ಚುನಾವಣೆಯಲ್ಲಿ ಜನಾದೇಶ ನೀಡಿದ್ದು, ಕೇಂದ್ರ ಸರ್ಕಾರದ ಆಯ್ಕೆಯಲ್ಲೂ ತಮ್ಮ ತೀರ್ಪನ್ನೂ ನೀಡಲಿದ್ದಾರೆ' ಎಂದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ 'ಆಪರೇಷನ್ ಹಸ್ತ' ಕುರಿತ ಸುದ್ದಿಗೆ ಪ್ರತಿಕ್ರಿಯಿಸುತ್ತಾ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದರು. ಅಲ್ಲದೆ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಚುನಾಯಿತ ಸರ್ಕಾರಗಳನ್ನು ಬೀಳಿಸಿದ ಬಗ್ಗೆಯೂ ಅವರು ಬಿಜೆಪಿಯನ್ನು ಪ್ರಶ್ನಿಸಿದ್ದರು.

ಬಿಜೆಪಿ ಮತ್ತು ಜೆಡಿಎಸ್‌ನ ಪ್ರಮುಖ ನಾಯಕರನ್ನು ಸೆಳೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ವಲಸೆ ತಡೆಯಲು ಬಿಜೆಪಿ ರಾಜ್ಯ ನಾಯಕತ್ವ ಶಕ್ತಿ ಮೀರಿ ಪ್ರಯತ್ನಿಸುತ್ತಿದೆ. ಕೋರ್ ಕಮಿಟಿ ಸಭೆಯು ನಾಯಕರು ಪಕ್ಷ ತೊರೆಯುವ ಬಗ್ಗೆ ಹೆಚ್ಚು ಚಿಂತಿಸದಿರಲು ನಿರ್ಧರಿಸಿದೆಯಾದರೂ, ಈ ನಿಟ್ಟಿನಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಆಕ್ರಮಣಕಾರಿ ಒತ್ತಡಕ್ಕೆ ಕೇಸರಿ ಪಕ್ಷ ಚಿಂತಿಸುತ್ತಿದೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com