ಇಂದಿರಾಗಾಂಧಿ ಕಾಲದ ಗತವೈಭವ ಎಂದರೆ ತುರ್ತು ಪರಿಸ್ಥಿತಿಯೇ? ನಳಿನ್ ಕುಮಾರ್ ಕಟೀಲ್

ಇಂದಿರಾಗಾಂಧಿ ಕಾಲದ ಗತವೈಭವ ಮರುಕಳಿಸುತ್ತಿದೆ ಎಂದು ಕಾಂಗ್ರೆಸ್ ನವರು ಹೇಳುತ್ತಿದ್ದಾರೆ. ಆ ಗತವೈಭವದಲ್ಲಿ ತುರ್ತು ಪರಿಸ್ಥಿತಿ ಯನ್ನೂ ಹೇರಲಾಗಿತ್ತು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್

ಮಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದರಿಂದ ರಾಜ್ಯದ ರೈತರಿಗೆ ಸಮಸ್ಯೆ ಆಗಲಿದೆ. ರಾಜ್ಯದ ರೈತರ ಇಚ್ಛೆ ಪೂರೈಸದೆ, ಅವರಿಗೆ ನ್ಯಾಯ ಕೊಡದೆ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ನೀರಿನ ಸಮಸ್ಯೆ ಇದ್ದು, ಬರ ಪರಿಸ್ಥಿತಿ ಎದುರಾಗಿದೆ. ಇದರ ನಡುವೆ ಪಂಪ್ ಸಟ್ ಗಳಿಗೆ ಕರೆಂಟ್ ಇಲ್ಲ, ಜನ ತತ್ತರಿಸಿ ಹೋಗಿದಾರೆ. ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ‌ ಎಂದರು.

ಚುನಾವಣೆ ಪೂರ್ವ ಕಾಂಗ್ರೆಸ್ ಘೋಷಣೆ ಮಾಡಿದ್ದ ಗ್ಯಾರಂಟಿಗಳಿಗೆ ಮಾನದಂಡ ಇರಲಿಲ್ಲ. ಈವರೆಗೆ ಘೋಷಿಸಿದ ನಾಲ್ಕು ಗ್ಯಾರಂಟಿಗಳಿಗೆ ಮಾನದಂಡ ಹಾಕಲಾಗಿದೆ‌. ಗೃಹ ಜ್ಯೋತಿ ಹೆಸರಲ್ಲಿ ಇಡೀ ರಾಜ್ಯವನ್ನು ಕತ್ತಲಿನಲ್ಲಿ ಇಡಲಾಗಿದೆ.

ಝೀರೊ ಬಿಲ್ ಜೊತೆಗೆ ಈಗ ಝೀರೊ ಕರೆಂಟ್ ಆಗಿದೆ ಎಂದು ಟೀಕಿಸಿದರು. ಇಂದಿರಾಗಾಂಧಿ ಕಾಲದ ಗತವೈಭವ ಮರುಕಳಿಸುತ್ತಿದೆ ಎಂದು ಕಾಂಗ್ರೆಸ್ ನವರು ಹೇಳುತ್ತಿದ್ದಾರೆ. ಆ ಗತವೈಭವದಲ್ಲಿ ತುರ್ತು ಪರಿಸ್ಥಿತಿ ಯನ್ನೂ ಹೇರಲಾಗಿತ್ತು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com