ಪಂಚ ರಾಜ್ಯಗಳ ಶಾಸಕರನ್ನು ರೆಸಾರ್ಟ್ ಗೆ ಕಳಿಸಲು ಕಾಂಗ್ರೆಸ್ ಪ್ಲ್ಯಾನ್?: ಡಿಕೆ ಶಿವಕುಮಾರ್ ಹೇಳಿದ್ದೇನು?

ಪ್ರತಿಕ್ರಿಯಿಸಿದ ಡಿ ಕೆ ಶಿವಕುಮಾರ್ ಯಾವ ಶಾಸಕರೂ ಎಲ್ಲಿಗೂ ಹೋಗುವುದಿಲ್ಲ. ನನಗೆ ಯಾರೂ ಕರೆ ಮಾಡಿ ಜವಾಬ್ದಾರಿ ಕೊಟ್ಟಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ಎಕ್ಸಿಟ್ ಪೋಲ್ ಬಗ್ಗೆ ನನ್ನದೇ ಅಭಿಪ್ರಾಯ ಹೊಂದಿದ್ದೇನೆ. ನಾಲ್ಕೂ ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ವಿಶ್ವಾಸ ನನಗಿದೆ ಎಂದರು.
ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್

ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆ ಮುಗಿದು ನಾಲ್ಕು ರಾಜ್ಯಗಳ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಈ ಸಂದರ್ಭದಲ್ಲಿ ಕುದುರೆ ವ್ಯಾಪಾರ ನಡೆಯುವ ಸಾಧ್ಯತೆಯ ವದಂತಿ ಬರುತ್ತಿರುವ ಸಂದರ್ಭದಲ್ಲಿ  ಕಾಂಗ್ರೆಸ್ ನಲ್ಲಿ ಗೆಲ್ಲಬಹುದಾದ ಐದೂ ರಾಜ್ಯಗಳ ಅಭ್ಯರ್ಥಿಗಳನ್ನು ಕರ್ನಾಟಕಕ್ಕೆ ಕರೆಸಿ ರೆಸಾರ್ಟ್ ಅಥವಾ ಹೊಟೇಲ್ ಗಳಲ್ಲಿ ಉಳಿಸಿಕೊಳ್ಳುವ ಕೆಲಸವನ್ನು ಕಾಂಗ್ರೆಸ್ ನಲ್ಲಿ ಟ್ರಬಲ್ ಶೂಟರ್ ಎಂದೇ ಗುರುತಿಸಿಕೊಂಡಿರುವ ಡಿ ಕೆ ಶಿವಕುಮಾರ್ ಅವರಿಗೆ ಜವಾಬ್ದಾರಿಯನ್ನು ಹೈಕಮಾಂಡ್ ನೀಡಿದೆ ಎಂಬ ವದಂತಿ ಹರಡಿತ್ತು.

ಈ ಕುರಿತು ಇಂದು ಬೆಂಗಳೂರಿನಲ್ಲಿ ಸುದ್ದಿಗಾರರು ಅವರಲ್ಲಿ ಕೇಳಿದಾಗ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಯಾವ ಶಾಸಕರೂ ಎಲ್ಲಿಗೂ ಹೋಗುವುದಿಲ್ಲ. ನನಗೆ ಯಾರೂ ಕರೆ ಮಾಡಿ ಜವಾಬ್ದಾರಿ ಕೊಟ್ಟಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ಎಕ್ಸಿಟ್ ಪೋಲ್ ಬಗ್ಗೆ ನನ್ನದೇ ಅಭಿಪ್ರಾಯ ಹೊಂದಿದ್ದೇನೆ. ನಾಲ್ಕೂ ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ವಿಶ್ವಾಸ ನನಗಿದೆ ಎಂದರು.

ಶಾಸಕರಿಗೆ ಎಲ್ಲಿಗೂ ಹೋಗುವ ಅಗತ್ಯವಿಲ್ಲ. ತೆಲಂಗಾಣದಲ್ಲಿ ಗೆಲ್ಲುವ ಅಭ್ಯರ್ಥಿಗಳನ್ನು ಸಂಪರ್ಕಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಆದರೆ ಸ್ಥಳೀಯವಾಗಿಯೇ ಪಕ್ಷ ಆ ಪರಿಸ್ಥಿತಿಯನ್ನು ನಿಭಾಯಿಸುತ್ತದೆ ಎಂದರು.

ಗೆದ್ದ ಶಾಸಕರನ್ನು ರೆಸಾರ್ಟ್ ನಲ್ಲಿ ಉಳಿಸಿಕೊಳ್ಳಲು ಹೈಕಮಾಂಡ್ ಇನ್ನೂ ಸೂಚನೆ ನೀಡಿಲ್ಲ ಎಂದು ಡಿ ಕೆ ಶಿವಕುಮಾರ್ ಅವರ ಆಪ್ತ ಮೂಲಗಳೂ ತಿಳಿಸಿವೆ. 2017ರಲ್ಲಿ ಗುಜರಾತ್ ನಂತಹ ಪರಿಸ್ಥಿತಿ ಎದುರಾದರೆ ತಾವು ಪಕ್ಷಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ. 

2017ರಲ್ಲಿ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಕುದುರೆ ವ್ಯಾಪಾರ ತಡೆಯಲು 44 ಮಂದಿ ಶಾಸಕರನ್ನು ಬೆಂಗಳೂರಿನ ರೆಸಾರ್ಟ್ ನಲ್ಲಿ ಉಳಿಸಿಕೊಳ್ಳಲು ಹೈಕಮಾಂಡ್ ಅಂದು ಡಿ ಕೆ ಶಿವಕುಮಾರ್ ಅವರಿಗೆ ಜವಾಬ್ದಾರಿ ವಹಿಸಿತ್ತು. ಆ ಕಾರ್ಯದಲ್ಲಿ ಅವರು ಯಶಸ್ವಿ ಕೂಡ ಆಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com