ಪಕ್ಷದ ಎಲ್ಲಾ ಹುದ್ದೆಗಳು ತಮ್ಮ ಮಕ್ಕಳಿಗೆ ಬೇಕು, ಇನ್ನು ಏನಾದ್ರೂ ಇದ್ರೆ ತಮ್ಮ ಮನೆ ಬೆಕ್ಕುಗಳಿಗೂ ಕೊಡಿಸಿ: ಯತ್ನಾಳ್ ಕಿಡಿ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ಬಿವೈ ವಿಜಯೇಂದ್ರ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾದ ಬಳಿಕ ಬಸನಗೌಡ ಪಾಟೀಲ್​ ಯತ್ನಾಳ್​ ನಿಗಿ ನಿಗಿ ಕೆಂಡದಂತಾಗಿದ್ದು, ನಮ್ಮ ಮನೆಗೆ ಬರಬೇಡ ಎಂದು ಬಹಿರಂಗವಾಗಿಯೇ ಹೇಳಿದ್ದರು. ಇದೀಗ ಮಗ ಬಿವೈ​ ವಿಜಯೇಂದ್ರ ಅವರಿಗೆ ಅಧ್ಯಕ್ಷ ಪಟ್ಟ ಸಿಕ್ಕಿದ್ದಕ್ಕೆ ಬಿಎಸ್​ ಯಡಿಯೂರಪ್ಪ ವಿರುದ್ಧ ಯತ್ನಾಳ್​ ಕಿಡಿಕಾರಿದ್ದಾರೆ.

ವಿಜಯಪುರದ ಆನಂದ ನಗರದಲ್ಲಿ ರಾತ್ರಿ ನಡೆದ ದಾನಮ್ಮದೇವಿ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೊದಲು ಮಾಜಿ ಮುಖ್ಯಮಂತ್ರಿ ಅಂತಿದ್ದರು. ಮುಖಭಂಗ ಆಗುತ್ತೆ ಅಂತಾ ಈಗ ನಿಕಟಪೂರ್ವ ಎಂದು ಹೇಳುತ್ತಾರೆ. ಅಪ್ಪ, ಮಗ ನಾಟಕ ಮಾಡಬೇಡಿ ಅಂತಾ ಈ ಹಿಂದೆ ನಾನು ಹೇಳಿದ್ದೆ.

ಎಲ್ಲಾ ನಾಟಕ ಮಾಡೋದು, ಎಲ್ಲಾ ಹುದ್ದೆ ತಮ್ಮ ಮಕ್ಕಳಿಗೆ ಬೇಕು. ಯಾಕಂದ್ರೆ ಆ ಖುರ್ಚಿ ಬಿಡಬಾರದು‌ ಅಂತ. ಎಲ್ಲಾ ಹುದ್ದೆ ತಮ್ಮ ಮಕ್ಕಳಿಗೆ ಬೇಕು. ಇನ್ನು ಏನಾದರೂ ಉಳಿದಿದ್ದರೇ ಮನೆಯ ಬೆಕ್ಕುಗಳಿಗೆ ಕೊಟ್ಟು ಬಿಡಿ ಅಂತ ಹೇಳಿದ್ದೇನೆ. ಪ್ರಧಾನ ಕಾರ್ಯದರ್ಶಿ, ಉಪ ಕಾರ್ಯದರ್ಶಿ ಅಂತ ಮಾಡಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನನ್ನನ್ನು ಹೆದರಿಸಬೇಕು ಎಂದು ಬ್ಲ್ಯಾಕ್​ಮೇಲ್ ಮಾಡ್ತಾರೆ. ನನಗೆ ಬ್ಲ್ಯಾಕ್​ಮೇಲ್​ ಮಾಡಲು ಬಂದರೂ ನಿಮ್ಮದು ನನ್ನ ಬಳಿ ಇದೆ. ಈಗ ಡಿ.ಕೆ.ಶಿವಕುಮಾರ್​ ಅವರದ್ದು ತೆಗೆದಿದ್ದೇನೆ. 10 ರಿಂದ 20 ಸಾವಿರ ಕೋಟಿ ರೂ. ಲೂಟಿ ಮಾಡಿದ್ದರೂ ಇನ್ನೂ ಸಮಾಧಾನ ಇಲ್ಲ. ಡಿ.ಕೆ.ಶಿವಕುಮಾರ್​ ವಿರುದ್ಧ ಮತ್ತೊಂದು ಕೇಸ್​ ದಾಖಲಿಸುತ್ತಿದ್ದೇವೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com