ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ 28 ಸ್ಥಾನಗಳನ್ನು ಗೆಲ್ಲುತ್ತದೆ: ಬಿಎಸ್ ಯಡಿಯೂರಪ್ಪ

ಇಂದಿನ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಮೂರರಲ್ಲಿ ಪಕ್ಷವು ಗಮನಾರ್ಹ ಮುನ್ನಡೆ ಸಾಧಿಸಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾನುವಾರ ಹೇಳಿದ್ದಾರೆ. 
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬೆಂಗಳೂರು: ಇಂದಿನ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಮೂರರಲ್ಲಿ ಪಕ್ಷವು ಗಮನಾರ್ಹ ಮುನ್ನಡೆ ಸಾಧಿಸಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾನುವಾರ ಹೇಳಿದ್ದಾರೆ. 

ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿನ ಗೆಲುವಿಗಾಗಿ ಪ್ರಧಾನಿ ನಟೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಅಭಿನಂದಿಸಿದ ಯಡಿಯೂರಪ್ಪ ಅವರು, ಬಿಜೆಪಿಯ ಸಾಧನೆಯನ್ನು ಶ್ಲಾಘಿಸಿದರು.

ಭಾನುವಾರದ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಸ್ಪಷ್ಟ ಮುನ್ನಡೆ ಸಾಧಿಸಿದ್ದರೆ, ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶವನ್ನು ಆಳುವ ಬಿಜೆಪಿಗೆ ಕಾಂಗ್ರೆಸ್ ಅಥವಾ ಇನ್ನಾವುದೇ ವಿಪಕ್ಷವಿಲ್ಲ ಎಂಬುದು ಈಗ ಪದೇ ಪದೆ ಸ್ಪಷ್ಟವಾಗುತ್ತಿದೆ. 'ಈ (ವಿಧಾನಸಭಾ) ಚುನಾವಣಾ ಫಲಿತಾಂಶಗಳು ಕಾಂಗ್ರೆಸ್‌ ಧೂಳು ಕಚ್ಚಲು ಅಡಿಪಾಯವನ್ನು ಹಾಕಿದೆ'. ಈ ಫಲಿತಾಂಶದ ನಂತರ ಕರ್ನಾಟಕದ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆದ್ದು ಪ್ರಧಾನಿ ಮೋದಿಗೆ ಉಡುಗೊರೆಯಾಗಿ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಕರ್ನಾಟಕ ವಿಧಾನಸಭೆ ಅಧಿವೇಶನ ಮುಗಿದ ನಂತರ ಕರ್ನಾಟಕದಾದ್ಯಂತ ಪ್ರವಾಸ ಮಾಡಿ ಪ್ರಚಾರ ಮಾಡಲಾಗುತ್ತದೆ. ರಾಜ್ಯಾಧ್ಯಕ್ಷರಾದ ನಂತರ ಅವರ ಪುತ್ರ ಬಿವೈ ವಿಜಯೇಂದ್ರ ಅವರಿಗೆ ರಾಜ್ಯದ ಎಲ್ಲೆಡೆ ಅದ್ದೂರಿ ಸ್ವಾಗತ ಸಿಗುತ್ತಿರುವುದು ಜನರಲ್ಲಿ ಮೂಡಿರುವ ವಿಶ್ವಾಸಕ್ಕೆ ಸಾಕ್ಷಿಯಾಗಿದೆ ಎಂದರು.

ಮಧ್ಯ ಪ್ರದೇಶ, ಛತ್ತೀಸಗಢ ಮತ್ತು ರಾಜಸ್ಥಾನದಲ್ಲಿ ಪಕ್ಷವು ಅತ್ಯುತ್ತಮ ಪ್ರದರ್ಶನ ನೀಡಿದ್ದಲ್ಲದೆ, ತೆಲಂಗಾಣದಲ್ಲಿ ಬಿಜೆಪಿ 10 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ನೆಲೆ ಕಂಡುಕೊಂಡಿದೆ ಎಂದು ಯಡಿಯೂರಪ್ಪ ಹೇಳಿದರು.

ಸದ್ಯ ಮತ ಎಣಿಕೆ ನಡೆಯುತ್ತಿದ್ದು, ತೆಲಂಗಾಣದಲ್ಲಿ ಬಿಜೆಪಿ ಎಂಟು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com