ಐಸಿಸ್ ಜತೆ ನಂಟು ಹೊಂದಿರುವ ವ್ಯಕ್ತಿಯೊಂದಿಗೆ ಸಿಎಂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ: ಯತ್ನಾಳ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಸಿಸ್ ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್, ಸಿಎಂ ಸಿದ್ದರಾಮಯ್ಯ
ಬಸನಗೌಡ ಪಾಟೀಲ್ ಯತ್ನಾಳ್, ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಸಿಸ್ ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಡಿಸೆಂಬರ್ 4 ರಂದು ಹುಬ್ಬಳ್ಳಿ ನಗರದ ಬಾಷಾ ಪೀರ್ ದರ್ಗಾ ಬಳಿ ನಡೆದ ದಕ್ಷಿಣ ಭಾರತ ಮುಸ್ಲಿಂ ಧಾರ್ಮಿಕ ಮುಖಂಡರ ಸಮಾವೇಶದಲ್ಲಿ ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ಭಾಗವಹಿಸಿದ್ದರು ಎಂದು ಆರೋಪಿಸಿದರು.

"ಆ ವ್ಯಕ್ತಿ ಸಿಎಂ ಸಿದ್ದರಾಮಯ್ಯ ಅವರ ಪಕ್ಕದಲ್ಲೇ ಕುಳಿತಿದ್ದರು. ವೇದಿಕೆ ಮೇಲಿರುವ ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿಯ ಬಗ್ಗೆ ಇವರಿಗೆ ಮಾಹಿತಿ ಇಲ್ಲವೇ?' ಎಂದು ಯತ್ನಾಳ್ ಪ್ರಶ್ನಿಸಿದರು.

"ಇದಕ್ಕೆ ಸಂಬಂಧಿಸಿದಂತೆ ನನಗೆ ಅಗತ್ಯವಿರುವ ಎಲ್ಲಾ ಮಾಹಿತಿಗಳು ಸಿಕ್ಕಿವೆ. ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿ ಸಿಎಂ ಜೊತೆ ವೇದಿಕೆ ಹಂಚಿಕೊಂಡಿರುವುದು ಅತ್ಯಂತ ಖಂಡನೀಯ" ಎಂದು ಯತ್ನಾಳ್ ಹೇಳಿದ್ದಾರೆ.

"ನಾನು ಹುಡುಗಾಟಿಕೆಗೆ ಈ ಹೇಳಿಕೆ ನೀಡುತ್ತಿಲ್ಲ.‌ ಬೇಕಾದ್ರೆ ಮಾಹಿತಿ ತರಿಸಿಕೊಳ್ಳಲಿ ಎಂದು ಸವಾಲು ಹಾಕಿದ ಯತ್ನಾಳ್, ಪ್ರಧಾನಿ ಕಾರ್ಯಕ್ರಮ ಇದ್ದರೆ, ಯಾರ್ಯಾರು ವೇದಿಕೆ ಮೇಲೆ ಇರಬೇಕು ಎಂಬ ಮಾಹಿತಿ ಇರುತ್ತದೆ. ಈ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಯಾರ್ಯಾರು ಇರ್ತಾರೆ ಎಂದು ಮಾಹಿತಿ ಇರಲಿಲ್ವಾ..? ನಾನೇ ಇನ್ನೊಂದು ವಾರದಲ್ಲೇ ಎಲ್ಲ ಮಾಹಿತಿ ನೀಡುತ್ತೇನೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com