ಡಿ. 11 ರಂದು ಪಕ್ಷದ ಸಮಾವೇಶ ಆಯೋಜಿಸಿದ ಜೆಡಿಎಸ್‌ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ!

ಜೆಡಿಎಸ್ ಪಕ್ಷದ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರು ಡಿ.11 ರಂದು ಬೆಂಗಳೂರಿನಲ್ಲಿ ಪಕ್ಷದ ಸಮಾವೇಶ ಆಯೋಜಿಸುವ ಮೂಲಕ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಅವರ ಕುಟುಂಬದ ವಿರುದ್ಧ ಭಾರಿ ಹಣಾಹಣಿಗೆ...
ಸಿಎಂ ಇಬ್ರಾಹಿಂ
ಸಿಎಂ ಇಬ್ರಾಹಿಂ

ಬೆಂಗಳೂರು: ಜೆಡಿಎಸ್ ಪಕ್ಷದ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರು ಡಿ.11 ರಂದು ಬೆಂಗಳೂರಿನಲ್ಲಿ ಪಕ್ಷದ ಸಮಾವೇಶ ಆಯೋಜಿಸುವ ಮೂಲಕ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಅವರ ಕುಟುಂಬದ ವಿರುದ್ಧ ಭಾರಿ ಹಣಾಹಣಿಗೆ ಸಜ್ಜಾಗಿದ್ದಾರೆ.

75 ವರ್ಷ ನಾಯಕ, ರಾಜ್ಯ ಅಧ್ಯಕ್ಷರಾಗಿ ತಮ್ಮ ಸಾಮರ್ಥ್ಯದಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಮಟ್ಟದ ಸಭೆಯನ್ನು ಕರೆದಿದ್ದಾರೆ. ದೇಶಾದ್ಯಂತ ಪಕ್ಷದ ಸದಸ್ಯರು ಮತ್ತು ಮುಖಂಡರು ಭಾಗವಹಿಸಲಿದ್ದಾರೆ ಎಂದು ಸಿಎಂ ಇಬ್ರಾಹಿಂ ಅವರು ಹೇಳಿದ್ದಾರೆ.

ನಾವು ರಾಷ್ಟ್ರೀಯ ಮಟ್ಟದ ಸಭೆಯನ್ನು ಆಯೋಜಿಸುತ್ತಿದ್ದೇವೆ. ಗುಜರಾತ್, ಉತ್ತರ ಪ್ರದೇಶ, ಬಿಹಾರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ರಾಜಸ್ಥಾನ ಸೇರಿದಂತೆ ದೇಶದೆಲ್ಲೆಡೆಯಿಂದ ಜೆಡಿಎಸ್ ರಾಜ್ಯಾಧ್ಯಕ್ಷರು ಆಗಮಿಸುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ ಪಕ್ಷದ ನಾಯಕತ್ವದ ವಿರುದ್ಧ ಬಂಡಾಯವೆದ್ದಿದ್ದ ಸಿಎಂ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟಿಸಲಾಗಿದೆ. 

ಆದರೆ ನಾನು ಚುನಾಯಿತ ವ್ಯಕ್ತಿ. ಅವರು ನನ್ನನ್ನು ತೆಗೆದುಹಾಕಲು ಸಾಧ್ಯವಿಲ್ಲ. ನನ್ನ ತಂದೆ ನನ್ನನ್ನು ಅಧ್ಯಕ್ಷರನ್ನಾಗಿ ನೇಮಿಸಿಲ್ಲ. ಜನತಾದಳ(ಜಾತ್ಯತೀತ) ನಾಯಕರ ಮತದಿಂದ ನಾನು ಆಯ್ಕೆಯಾಗಿದ್ದೇನೆ. ಈ ಸಮಾವೇಶವು ಬಿಜೆಪಿ ನೇತೃತ್ವದ ಎನ್‌ಡಿಎ ಬದಲಿಗೆ ಇಂಡಿಯಾ ಮೈತ್ರಿಕೂಟದೊಂದಿಗೆ ಕೈಜೋಡಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com