ವಿರೋಧ ಪಕ್ಷದ ನಾಯಕನ ಸ್ಥಾನ ಪಡೆಯಲು ಯಾರಿಗೆ ಬಕೆಟ್ ಹಿಡಿದಿರಿ? ಯಾವ ಬ್ರಾಂಡ್ ಬಕೆಟ್ ಹಿಡಿದಿರಿ?
ಬೆಂಗಳೂರು: ಆರ್. ಅಶೋಕ ಅವರೇ, ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಯಾರಿಗೆ ಬಕೆಟ್ ಹಿಡಿದಿರಿ? ಯಾವ ಬ್ರಾಂಡ್ ಬಕೆಟ್ ಹಿಡಿದಿರಿ? ಯಾರಿಗೆ ಬಕೆಟ್ ಹಿಡಿದು ನಿಮ್ಮ ಅಕ್ರಮಗಳನ್ನು ಮುಚ್ಚಿಕೊಂಡಿರಿ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹೇಳಿಕೆ ಪ್ರಸ್ತಾಪಿಸಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಆರ್.ಅಶೋಕ ಅವರೇ, ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಯಾರಿಗೆ ಬಕೆಟ್ ಹಿಡಿದಿದ್ದೀರಿ? ಯಾವ ಬ್ರ್ಯಾಂಡ್ ಬಕೆಟ್ ಹಿಡಿದಿದ್ದೀರಿ? ಯಾರಿಗೆ ಬಕೆಟ್ ಹಿಡಿದು ನಿಮ್ಮ ಅಕ್ರಮಗಳನ್ನು ಮುಚ್ಚಿಕೊಂಡಿದ್ದೀರಿ’ ಎಂದು ಟೀಕಿಸಿದೆ.
ಬಿಜೆಪಿಗೆ ಬಿಜೆಪಿಗರಿಂದಲೇ ಸಿಕ್ಕಿದ್ದು ಅದೆಷ್ಟು ಹೆಸರುಗಳು... ಭ್ರಷ್ಟ ಜನತಾ ಪಾರ್ಟಿ, ಬ್ಲಾಕ್ಮೇಲ್ ಜನತಾ ಪಾರ್ಟಿ, ಬ್ಲೂ ಬಾಯ್ಸ್ ಜನತಾ ಪಾರ್ಟಿ, ಈಗ ಹೊಸದಾಗಿ ‘ಬಕೆಟ್ ಜನತಾ ಪಾರ್ಟಿ’ ಸೇರ್ಪಡೆಯಾಗಿದೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ. ನಾಯಕತ್ವ ಹಾಗೂ ಪ್ರತಿಷ್ಠೆಗಾಗಿ ಬಿಜೆಪಿ ನಾಯಕರ ಮಧ್ಯೆ ನಡೆಯುತ್ತಿರುವ ಆಂತರಿಕ ತಿಕ್ಕಾಟವು ಆಡಳಿತಾರೂಢ ಕಾಂಗ್ರೆಸ್‌ಗೆ ವರವಾಗಿ ಪರಿಣಮಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ