ಪೊಲೀಸರಿಂದ ಪೃಥ್ವಿಸಿಂಗ್ ದೂರು ತಿರುಚುವ ಪ್ರಯತ್ನ: ಆರ್‌.ಅಶೋಕ್‌

ಪೊಲೀಸರು ಪೃಥ್ವಿ ಸಿಂಗ್ ದೂರನ್ನು ತಿರುಚಲು ಪ್ರಯತ್ನಿಸುತ್ತಿದ್ದಾರೆ. ನಾವು ಕೊಟ್ಟ ದೂರನ್ನು ತಮಗೆಷ್ಟು ಬೇಕು ಅಷ್ಟು ತಗೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಅವರು ಶುಕ್ರವಾರ ಆರೋಪಿಸಿದರು.
ಆರ್‌.ಅಶೋಕ್‌
ಆರ್‌.ಅಶೋಕ್‌

ಬೆಳಗಾವಿ: ಪೊಲೀಸರು ಪೃಥ್ವಿ ಸಿಂಗ್ ದೂರನ್ನು ತಿರುಚಲು ಪ್ರಯತ್ನಿಸುತ್ತಿದ್ದಾರೆ. ನಾವು ಕೊಟ್ಟ ದೂರನ್ನು ತಮಗೆಷ್ಟು ಬೇಕು ಅಷ್ಟು ತಗೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಅವರು ಶುಕ್ರವಾರ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಏನ್ ಬೇಕಿದೆ ಅಷ್ಟು ಮಾತ್ರ ಗೃಹ ಸಚಿವರು ಓದಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸರಕಾರದಿಂದ ಸ್ಪಷ್ಟ ಭರವಸೆ ಸಿಕ್ಕಿಲ್ಲ. ಆದರೆ, ಪೃಥ್ವಿ ಸಿಂಗ್‌ಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಸುತ್ತೇವೆ ಎಂದು ಹೇಳಿದರು.

ಇದೇ ವೇಳೆ ವಿರೋಧ ಪಕ್ಷದ ನಾಯಕರ ನೇಮಕ ವಿಚಾರದಲ್ಲಿ ಮೂಡಿರುವ ಭಿನ್ನಾಭಿಪ್ರಾಯಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜಕೀಯದಲ್ಲಿ ಯಾವಾಗಲೂ ಪರ ಮತ್ತು ವಿರೋಧಗಳು ಇದ್ದೇ ಇರುತ್ತವೆ. ವಿರೋಧ ಪಕ್ಷದ ನಾಯಕನನ್ನು ನೇಮಿಸಿದಾಗ ಇಂತಹ ಭಿನ್ನಾಭಿಪ್ರಾಯಗಳು ಸಾಮಾನ್ಯವಾಗಿರುತ್ತದೆ ಎಂದು ತಿಳಿಸಿದರು.

ಸಭಾತ್ಯಾಗ ವಿಚಾರದಲ್ಲಿ ಹೊಂದಾಣಿಕೆ ಇಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಿನ್ನೆ ಯತ್ನಾಳ ಅವರು ನನ್ನ ಹತ್ತಿರ ಬಂದು ಹೇಳಿದರು. ಪ್ರತಿದಿನ ಧರಣಿ ಮಾಡಿದರೆ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಆಗಲ್ಲ. ನೀವು ಸದನದ ಬಾವಿಗೆ ಇಳಿದರೆ ಚರ್ಚೆ ಆಗಲ್ಲ. ಇಲ್ಲಿಗೆ ಬಂದು ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಆಗಬೇಕು.

ಉತ್ತರ ಕರ್ನಾಟಕದ ಬಗ್ಗೆ ನಾನು ಮಾತಾಡಬೇಕು. ಹೀಗಾಗಿ ಧರಣಿ ಬೇಡ ಎಂದು ಯತ್ನಾಳ್ ಹೇಳಿದರು. ನಾನು ಅದಕ್ಕೆ ಮುಂದಿರುವವರನ್ನು ಕರೆದು ಚರ್ಚೆ ಮಾಡಿದೆ. ಇದರಿಂದ ಹಿಂದಿರೋರು ಮುಂದಿರೋರರ ಮಧ್ಯೆ ಕಮ್ಯೂನಿಕೇಷನ್ಸ್ ಗ್ಯಾಪ್ ಆಗಿದೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com