ಜೆಡಿಎಸ್ ನಿಂದ ಸಿ.ಎಂ. ಇಬ್ರಾಹಿಂ, ಸಿ.ಕೆ ನಾನು ಉಚ್ಛಾಟನೆ: ದೇವೇಗೌಡರು ಹೇಳಿದ್ದೇನು?

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಮತ್ತು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸಿ ಕೆ ನಾಣು ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ತಿಳಿಸಿದ್ದಾರೆ. 
ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕಾರಿಣಿ ಸಭೆ
ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕಾರಿಣಿ ಸಭೆ

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಮತ್ತು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸಿ ಕೆ ನಾಣು ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ತಿಳಿಸಿದ್ದಾರೆ. 

ನಿನ್ನೆ ಬೆಂಗಳೂರಿನಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯ ನಂತರ ಇಬ್ಬರು ನಾಯಕರನ್ನು ವಜಾಗೊಳಿಸುವ ನಿರ್ಧಾರವನ್ನು ಪ್ರಕಟಿಸಿದರು. ಪಕ್ಷದ ವರ್ಚಸ್ಸಿಗೆ ಧಕ್ಕೆ ಮತ್ತು ಹಿತಾಸಕ್ತಿಗೆ ಈ ಇಬ್ಬರು ನಾಯಕರುಗಳಿಂದ ಹೊಡೆತ ಬೀಳುತ್ತಿದ್ದು, ಈ ಹಿನ್ನೆಲೆಯಲ್ಲಿ ನಿರ್ಧಾರಕ್ಕೆ ಬರಲಾಗಿದೆ ಎಂದರು. 

ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ನಡೆಸಿ ಈ ಇಬ್ಬರು ನಾಯಕರ ಪದಚ್ಯುತಿಗಾಗಿ ಸರ್ವಾನುಮತದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. 

ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ ರಮೇಶ್ ಮತ್ತು ಪಶ್ಚಿಮ ಬಂಗಾಳ ಜೆಡಿಎಸ್ ಘಟಕದ ಅಧ್ಯಕ್ಷ ಪುನೀತ್ ಕುಮಾರ್ ಸಿಂಗ್ ಕಾರ್ಯಕಾರಿಣಿ ಸಭೆಯಲ್ಲಿ ಇಬ್ರಾಹಿಂ ಮತ್ತು ನಾಣು ಅವರನ್ನು ಪಕ್ಷದಿಂದ ಉಚ್ಚಾಟಿಸುವ ನಿರ್ಣಯವನ್ನು ಮಂಡಿಸಿದರು. ಇವರಿಬ್ಬರು ಮಂಡಿಸಿದ ನಿರ್ಣಯಗಳನ್ನು ಕಾರ್ಯಕಾರಿಣಿ ಸರ್ವಾನುಮತದಿಂದ ಅಂಗೀಕರಿಸಿತು.

ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ, ಎಲ್ಲಾ ರಾಜ್ಯ ಘಟಕದ ಅಧ್ಯಕ್ಷರು ಹಾಗೂ ಕಾರ್ಯಕಾರಿಣಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕೇಂದ್ರದ ಮಾಜಿ ಸಚಿವ, ಉಚ್ಛಾಟಿತ ನಾಯಕ ಇಬ್ರಾಹಿಂ ಅವರು ನಾಳೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಮಟ್ಟದ ಸಭೆಯನ್ನು ಕರೆಯುವುದಾಗಿ ಘೋಷಿಸಿದ ಒಂದು ದಿನ ಮೊದಲು ಜೆಡಿಎಸ್ ಈ ಕ್ರಮ ಕೈಗೊಂಡಿದೆ. ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರಕ್ಕೆ ಸಿ ಎಂ ಇಬ್ರಾಹಿಂ ಅವರು ಪಕ್ಷದ ನಾಯಕತ್ವದ ವಿರುದ್ಧ ಬಂಡಾಯವೆದ್ದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com