ಕಾಂಗ್ರೆಸ್‌ ಸರ್ಕಾರದ ವೈಫಲ್ಯ ಖಂಡಿಸಿ ಬುಧವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ: ಆರ್ ಅಶೋಕ್

ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಡಿಸೆಂಬರ್ 13 ರಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದರು. 
ಆರ್.ಅಶೋಕ್, ವಿಜಯೇಂದ್ರ
ಆರ್.ಅಶೋಕ್, ವಿಜಯೇಂದ್ರ

ಬೆಳಗಾವಿ: ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಡಿಸೆಂಬರ್ 13 ರಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮರ್ಪಕವಾಗಿ ಬರ ನಿರ್ವಹಣೆ ಮಾಡದಿರುವುದು, ಡಿ.ಕೆ. ಶಿವಕುಮಾರ್‌ ಅವರ ವಿಷಯದಲ್ಲಿ ತೆಗೆದುಕೊಂಡ ನಿಲುವು ಮತ್ತು ಜಮೀರ್‌ ಅಹ್ಮದ್‌ ಅವರ ನಡೆ ಸೇರಿದಂತೆ ಸರ್ಕಾರದ ವೈಫಲ್ಯ ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ಜಮೀರ್ ಅಹ್ಮದ್ ಖಾನ್ ಸಚಿವರಾಗಿ ಸ್ಪೀಕರ್ ಸ್ಥಾನದ ಕುರಿತು ದುರಹಂಕಾರದ ಹೇಳಿಕೆ ನೀಡಿದ್ದು ಖಂಡನೀಯ. ಜಮೀರ್ ಅವರ ಹೇಳಿಕೆ ವಿರುದ್ಧ ಮುಖ್ಯಮಂತ್ರಿಯಾಗಲಿ, ಸ್ಪೀಕರ್ ಅವರಾಗಲಿ ಕ್ರಮ ತೆಗೆದುಕೊಳ್ಳಲಿಲ್ಲ. ಸಂವಿಧಾನ ಉಳಿಸಲು ಬಿಜೆಪಿ ಮತ್ತು ಜೆಡಿಎಸ್ ಜೊತೆಯಾಗಿ ಜಮೀರ್ ಅಹ್ಮದ್ ಅವರ ಹೇಳಿಕೆ ಖಂಡಿಸಿ ಸತ್ಯಾಗ್ರಹ ಮಾಡುತ್ತಿದ್ದೇವೆ ಎಂದು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com