ಡಿವಿ ಸದಾನಂದಗೌಡ ನೇತೃತ್ವದಲ್ಲಿ ಪ್ರತಿಭಟನೆ
ಡಿವಿ ಸದಾನಂದಗೌಡ ನೇತೃತ್ವದಲ್ಲಿ ಪ್ರತಿಭಟನೆ

ಬೆಳಗಾವಿ ಮಹಿಳೆ ಮೇಲೆ ಹಲ್ಲೆ, ವಿವಸ್ತ್ರ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ, ತೀವ್ರ ಖಂಡನೆ

ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ ಬುಡುಕಟ್ಟು ಮಹಿಳೆಗೆ ಪರಿಹಾರ ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ನಿರಾಸಕ್ತಿ ತೋರಿದೆ ಎಂದು ಆರೋಪಿ ರಾಜ್ಯ ಬಿಜೆಪಿಯಿಂದ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಯಿತು.
Published on

ಬೆಂಗಳೂರು: ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ ಬುಡುಕಟ್ಟು ಮಹಿಳೆಗೆ ಪರಿಹಾರ ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ನಿರಾಸಕ್ತಿ ತೋರಿದೆ ಎಂದು ಆರೋಪಿ ರಾಜ್ಯ ಬಿಜೆಪಿಯಿಂದ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಯಿತು.

ಡಿಸೆಂಬರ್ 11 ರಂದು ಬೆಳಗಾವಿಯ ವಂಟಮುರಿ ಗ್ರಾಮದಲ್ಲಿ ಯುವಕನೊಬ್ಬ ತನ್ನ ಪ್ರೇಯಸಿಯೊಂದಿಗೆ ಓಡಿಹೋದ ನಂತರ ಆತನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿತ್ತು. ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಲಾಗಿತ್ತು. ಈ ಸಂಬಂಧ ಪೊಲೀಸರು 8 ಜನರನ್ನು ಬಂಧಿಸಿದ್ದು, ಇನ್ನೂ ಎಂಟು ಮಂದಿ ತಲೆಮರೆಸಿಕೊಂಡಿದ್ದಾರೆ.

ಬೆಂಗಳೂರಿನ ಮೇಖ್ರಿ ಸರ್ಕಲ್ ನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಪಾಲ್ಗೊಂಡರು. ಈ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಸ್ ಗಳಲ್ಲಿ ಕರೆದೊಯ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಇಷ್ಟು ಕೆಟ್ಟು ಆಡಳಿತವನ್ನು ನನ್ನ ಜೀವನದಲ್ಲೇ ನೋಡಿಲ್ಲ. ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಹೆಚ್ಚಾಗಿದೆ ಎಂದು ಆರೋಪಿಸಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಬೆಳಗಾವಿಯಲ್ಲಿ ಮಹಿಳೆ‌ ಮೇಲೆ ನಡೆದ ದೌರ್ಜನ್ಯ ಕುರಿತು ದೇಶವ್ಯಾಪಿ ಚರ್ಚೆ ನಡೆದಿದೆ. ರಾಜ್ಯ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ರಾಜ್ಯದ ಮುಖ್ಯಮಂತ್ರಿಗಳು ಸಂತ್ರಸ್ತ ಮಹಿಳೆಯನ್ನು ಈವರೆಗೂ ಭೇಟಿ ಮಾಡಿಲ್ಲ, ಪರಿಹಾರ ಕೊಡುವ ಕೆಲಸವನ್ನೂ ಮಾಡಿಲ್ಲ ಎಂದು ಆರೋಪಿಸಿದರು. 

ಬೆಳಗಾವಿಯಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯ ಮೇಲೆ ಅಮಾನವೀಯ ಕೃತ್ಯ ನಡೆದ ಗ್ರಾಮಕ್ಕೆ ನಾಲ್ವರು ಸಂಸದರು ಸೇರಿದಂತೆ ಐವರು ಸದಸ್ಯರನ್ನೊಳಗೊಂಡ ಬಿಜೆಪಿ ಸತ್ಯಶೋಧನಾ ತಂಡ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ವೇಳೆ ಮಾತನಾಡಿದ ತಂಡದ ಸದಸ್ಯರಲ್ಲೊಬ್ಬರಾದ ಲಾಕೆಟ್ ಚಟರ್ಜಿ, ಆಡಳಿತವು ಆರಂಭದಲ್ಲಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ಮುಂದಾಗಲಿಲ್ಲ. ಕರ್ನಾಟಕ ಹೈಕೋರ್ಟ್ ಚಾಟಿ ಬೀಸಿದ ನಂತರವೇ ಸರ್ಕಾರ ಕ್ರಮಕ್ಕೆ ಮುಂದಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com