ಅಸಮಾಧಾನದ ನಡುವೆಯೇ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪದಾಧಿಕಾರಿಗಳ ಸಭೆ

ಪದಾಧಿಕಾರಿಗಳ ಆಯ್ಕೆ ಬಂಡಾಯದ ಬೇಗುದಿ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಾಳೆ ನೂತನ ಪದಾಧಿಕಾರಿಗಳ ಮಹತ್ವದ ಸಭೆ ಕರೆದಿದ್ದಾರೆ.
ಬಿವೈ ವಿಜಯೇಂದ್ರ
ಬಿವೈ ವಿಜಯೇಂದ್ರ

ಬೆಂಗಳೂರು: ಪದಾಧಿಕಾರಿಗಳ ಆಯ್ಕೆ ಬಂಡಾಯದ ಬೇಗುದಿ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಾಳೆ ನೂತನ ಪದಾಧಿಕಾರಿಗಳ ಮಹತ್ವದ ಸಭೆ ಕರೆದಿದ್ದಾರೆ.

ಬಿವೈ ವಿಜಯೇಂದ್ರ ಮಂಗಳವಾರ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ನೂತನ ಪದಾಧಿಕಾರಿಗಳ ಸಭೆ ಕರೆದಿದ್ದಾರೆ. ಈ ಸಭೆಗೆ ನೂತನವಾಗಿ ಆಯ್ಕೆಯಾದ ಎಲ್ಲ ಪದಾಧಿಕಾರಿಗಳೂ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇಗೇ ವೇಳೆ ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲಿ ಪಕ್ಷದ ನಡೆಯನ್ನು ಸಮರ್ಥಿಸಿಕೊಂಡ ಬಿವೈ ವಿಜಯೇಂದ್ರ ಅವರು, 'ಪದಾಧಿಕಾರಿಗಳನ್ನು ನೇಮಿಸುವಾಗ ವಿವಿಧ ಸಮುದಾಯಗಳು ಮತ್ತು ಪಂಗಡಗಳು ಹಾಗೂ ಮುಂಬೈ-ಕರ್ನಾಟಕ, ಕಿತ್ತೂರು-ಕರ್ನಾಟಕ ಮತ್ತು ಕಲ್ಯಾಣ-ಕರ್ನಾಟಕ ಪ್ರದೇಶಗಳಿಗೆ ಪ್ರಾತಿನಿಧ್ಯ ನೀಡುವುದರ ಜೊತೆಗೆ ಯುವಕರಿಗೆ ಆದ್ಯತೆ ನೀಡಲಾಗಿದೆ ಎಂದು ಪ್ರತಿಪಾದಿಸಿದರು. 

ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಡಲು ನಮ್ಮ ಮುಂದಿರುವ ದೊಡ್ಡ ಸವಾಲು ನಮ್ಮ ಮುಂದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಎಲ್ಲಾ 28 ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಅವರು ಹೇಳಿದರು.

ಸಿದ್ದರಾಮಯ್ಯರಿಂದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಜಾತಿಯ ವಿಷಬೀಜ ಬಿತ್ತನೆ
ಇದೇ ವೇಳೆ ಹಿಜಾಬ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ ವಿಜಯೇಂದ್ರ, 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಜಾಬ್ ವಿಚಾರದಲ್ಲಿ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಜಾತಿಯ ಬಿತ್ತರಿಸುವ ಮೂಲಕ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ತಮ್ಮ ಸರ್ಕಾರ ಹಿಜಾಬ್ ಮೇಲಿನ ನಿಷೇಧವನ್ನು ಹಿಂಪಡೆಯುತ್ತದೆ ಎಂದು ಹೇಳಿಲ್ಲ ಎಂದು ಮುಖ್ಯಮಂತ್ರಿ ಯು-ಟರ್ನ್ ಮಾಡಿದ್ದಾರೆ. ಆದರೆ ರಾಜ್ಯದ ಜನತೆ ಎಲ್ಲವನ್ನೂ ಗಮನಿಸಿದ್ದಾರೆ. ಅಂತಹ ಪರಿಸ್ಥಿತಿ ಬಂದರೆ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸಲಿದೆ' ಎಂದರು.

ಅಂತೆಯೇ ಹಿಜಾಬ್ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದ್ದು, ಆತುರ ಏಕೆ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು. “ಕಾಂಗ್ರೆಸ್ ಒಂದೇ ಒಂದು ಸ್ಥಾನವನ್ನೂ ಗೆಲ್ಲುವುದಿಲ್ಲ ಎಂದು ಅರಿತ ಸಿದ್ದರಾಮಯ್ಯ ಹತಾಶೆಯಿಂದ ಹಿಜಾಬ್ ಮೇಲಿನ ನಿಷೇಧವನ್ನು ಹಿಂಪಡೆಯುವ ತಂತ್ರಕ್ಕೆ ಮೊರೆ ಹೋಗಿದ್ದಾರೆ,” ಎಂದು ಟೀಕಿಸಿದರು. 

ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಮಾತನಾಡಿದ ಅವರು ದೆಹಲಿಯಲ್ಲಿ ಜೆಡಿಎಸ್ ಮುಖ್ಯಸ್ಥ ಎಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ್ದು, ಆದಷ್ಟು ಬೇಗ ಇಬ್ಬರೂ ಕೆಲವು ಸಮಸ್ಯೆಗಳನ್ನು ಮುಖಾಮುಖಿಯಾಗಿ ಪರಿಹರಿಸಿಕೊಳ್ಳಲಿದ್ದಾರೆ ಎಂದು ಅವರು ಹೇಳಿದರು.

ಅಸಮಾಧಾನ ಸಹಜ, ಸರಿ ಹೋಗುತ್ತೆ: ಬಿಎಸ್‌ವೈ
ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳ ನೇಮಕಾತಿ ಸಂದರ್ಭದಲ್ಲಿ ಎಲ್ಲವನ್ನೂ ಅಳೆದು ತೂಗಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ಒಳ್ಳೆಯ ಪದಾಧಿಕಾರಿಗಳ ಆಯ್ಕೆಯಾಗಿದೆ. ಅಸಮಾಧಾನ ಅಪಸ್ವರ ಸಹಜ, ಮುಂದೆ ಎಲ್ಲವೂ ಸರಿ ಹೋಗುತ್ತೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ಏನು ಮಾತಡಲ್ಲ ಯತ್ಲಾಳ್ ಅವರ ವಿರುದ್ಧ ಹೈಕಮಾಂಡ್‌ಗೆ ದೂರು ನೀಡುವ ಪ್ರಯತ್ನ ಸಹ ಮಾಡಲ್ಲ, ಎಲ್ಲವೂ ಸರಿ ಹೋಗುತ್ತದೆ. ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣ ಇದೆ. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಮೇಲೆ ಯುವಕರು ಉತ್ಸಾಹದಲ್ಲಿದ್ದಾರೆ. ನಮ್ಮದ್ದೇನಿದ್ದರೂ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನ ಗೆಲ್ಲುವ ಗುರಿ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com