ಕಾಂಗ್ರೆಸ್ ಕಾರ್ಯರೂಪಕ್ಕೆ ಬರುತ್ತಿದೆ; ಪಕ್ಷವು 'ಆರಾಮಾಗಿ' ಚುನಾವಣೆಗಳನ್ನು ಗೆಲ್ಲುತ್ತದೆ: ಡಿಕೆ ಶಿವಕುಮಾರ್
ರಾಜ್ಯದಲ್ಲಿ ನಡೆಯಲಿರುವ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಿರಾಯಾಸವಾಗಿ 136 ಸ್ಥಾನಗಳನ್ನು ಗೆಲ್ಲುವುದಾಗಿ ಕಾಂಗ್ರೆಸ್ ಶುಕ್ರವಾರ ಘೋಷಿಸಿದೆ. ಇದೇ ವೇಳೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯದ ದಕ್ಷಿಣ ಹಾಗೂ ಉತ್ತರ ಭಾಗಗಳಲ್ಲಿ ಪ್ರತ್ಯೇಕವಾಗಿ ಬಸ್ ಯಾತ್ರೆ ಆರಂಭಿಸಿದ್ದಾರೆ.
Published: 03rd February 2023 03:47 PM | Last Updated: 03rd February 2023 04:51 PM | A+A A-

ಡಿಕೆ.ಶಿವಕುಮಾರ್
ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಿರಾಯಾಸವಾಗಿ 136 ಸ್ಥಾನಗಳನ್ನು ಗೆಲ್ಲುವುದಾಗಿ ಕಾಂಗ್ರೆಸ್ ಶುಕ್ರವಾರ ಘೋಷಿಸಿದೆ. ಇದೇ ವೇಳೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯದ ದಕ್ಷಿಣ ಹಾಗೂ ಉತ್ತರ ಭಾಗಗಳಲ್ಲಿ ಪ್ರತ್ಯೇಕವಾಗಿ ಬಸ್ ಯಾತ್ರೆ ಆರಂಭಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, '50 ದಿನ ಕಳೆದರೆ ಬಿಜೆಪಿ ಸರ್ಕಾರ ಇರುವುದಿಲ್ಲ, 50 ದಿನಗಳ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಎಲ್ಲಾ ಕ್ಷೇತ್ರಗಳಲ್ಲಿ ಎರಡ್ಮೂರು ಭಾರಿ ಸಮೀಕ್ಷೆ ನಡೆಸಿದ್ದೇವೆ. ಜನರ ಪ್ರತಿಕ್ರಿಯೆ ಆರೋಗ್ಯಕರವಾಗಿದೆ. ನಾವು 136 ಸ್ಥಾನಗಳನ್ನು ಆರಾಮಾಗಿ ಗೆಲ್ಲುತ್ತೇವೆ ಎಂದು ಅವರು ಹೇಳಿದರು.
ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಭೆಯು ಯಾವುದೇ ಆಕ್ಷೇಪಣೆ ಅಥವಾ ಮುಖಂಡರ ಅಸಮಾಧಾನವಿಲ್ಲದೆ ಸುಗಮವಾಗಿ ನಡೆಯಿತು ಎಂದು ಅವರು ಹೇಳಿದರು.
ಇದನ್ನೂ ಓದಿ: ಕಾಂಗ್ರೆಸ್ ನಲ್ಲಿ ಅಸಮಾಧಾನದ ಬೆಂಕಿ; ಜೆಡಿಎಸ್ ಗೆ ಕುಟಂಬದವರ ಕಿತ್ತಾಟದ್ದೆ ಸಮಸ್ಯೆ (ಸುದ್ದಿ ವಿಶ್ಲೇಷಣೆ)
ಸಿದ್ದರಾಮಯ್ಯ ರಾಜ್ಯಕ್ಕೆ ಇದುವರೆಗೆ 13 ಬಜೆಟ್ ಮಂಡಿಸಿದ್ದಾರೆ. 'ನಾನು 16 ವರ್ಷಗಳಿಂದ ಸರ್ಕಾರದ ಭಾಗವಾಗಿದ್ದೇನೆ. ರಾಜ್ಯದ ಕುಟುಂಬದ ಪ್ರತಿ ಮಹಿಳಾ ಮುಖ್ಯಸ್ಥರಿಗೆ ಮತ್ತು ಇತರರಿಗೆ ರೂ 2,000 ಒದಗಿಸುವ ನಮ್ಮ ಭರವಸೆಗಾಗಿ ನಾವು ಆದಾಯವನ್ನು ಗಳಿಸುವ ಕಲ್ಪನೆಯನ್ನು ಹೊಂದಿದ್ದೇವೆ' ಎಂದು ಅವರು ಹೇಳಿದರು.
ಕಾಂಗ್ರೆಸ್ ಪಕ್ಷವು ತನ್ನ ಎರಡನೇ ಹಂತದ ಬಸ್ ಯಾತ್ರೆಯನ್ನು ರಾಜ್ಯದಲ್ಲಿ ಶುಕ್ರವಾರ ಆರಂಭಿಸಿದೆ. ಶಿವಕುಮಾರ್ ಕೋಲಾರದ ಮುಳಬಾಗಲು ಸಮೀಪದ ಕುರುಡುಮಲೆಯಿಂದ ಯಾತ್ರೆ ಆರಂಭಿಸಿದ್ದಾರೆ. ಸಿದ್ದರಾಮಯ್ಯ ಉತ್ತರ ಕರ್ನಾಟಕದ ಬಸವಕಲ್ಯಾಣದಿಂದ ಯಾತ್ರೆ ಆರಂಭಿಸಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.