ರಾಜ್ಯ ವಿಧಾನಸಭೆ ಚುನಾವಣೆ ಸನ್ನಿಹಿತ: ಯಾತ್ರೆಗಳ ಹಾದಿ ಹಿಡಿದ ಕಾಂಗ್ರೆಸ್ ನಾಯಕರು!

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಕೋಲಾರ ಜಿಲ್ಲೆಯ ಕುರುಡುಮಲೆ ಮತ್ತು ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಪ್ರತ್ಯೇಕ ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಿದರು.
ಕೋಲಾರದಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ
ಕೋಲಾರದಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಕೋಲಾರ ಜಿಲ್ಲೆಯ ಕುರುಡುಮಲೆ ಮತ್ತು ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಪ್ರತ್ಯೇಕ ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಿದರು.

ಬಹುತೇಕ ಎಲ್ಲಾ ಜಿಲ್ಲಾ ಕೇಂದ್ರಗಳನ್ನು ಒಳಗೊಂಡ ತಮ್ಮ ಜಂಟಿ ಬಸ್ ಯಾತ್ರೆಯ ಮೊದಲ ಹಂತವನ್ನು ಮುಗಿಸಿದ ನಂತರ, ಕಾಂಗ್ರೆಸ್ ನಾಯಕರು 31 ಜಿಲ್ಲೆಗಳಾದ್ಯಂತ 237 ತಾಲೂಕುಗಳಲ್ಲಿ ಎರಡನೇ ಹಂತದ ಯಾತ್ರೆಯನ್ನು ಪುನರಾರಂಭಿಸಿದ್ದಾರೆ.

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ. ಕೆ ಹರಿಪ್ರಸಾದ್ ಅವರು ಬಿಜೆಪಿ ಮೇಲುಗೈ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಿಂದ ಭಾನುವಾರ ಆರಂಭವಾಗಲಿರುವ 'ಕರಾವಳಿ ಧ್ವನಿ ಯಾತ್ರೆ'ಗೆ ಕರಾವಳಿ ಭಾಗದಲ್ಲಿ ಮೈದಾನವನ್ನು ಸಿದ್ಧಪಡಿಸಲು ಪ್ರಾರಂಭಿಸಿದ್ದಾರೆ. ಅವರು ಶುಕ್ರವಾರ ಉಡುಪಿಯಲ್ಲಿ ಹಿರಿಯ ಮುಖಂಡ ಆರ್.ವಿ.ದೇಶಪಾಂಡೆ ಹಾಗೂ ಮಂಜುನಾಥ ಭಂಡಾರಿ ಅವರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಫೆಬ್ರವರಿ 9 ರಂದು ಶೃಂಗೇರಿಯಲ್ಲಿ ಯಾತ್ರೆ  ಸಮಾಪ್ತವಾಗಲಿದೆ.

ಕರಾವಳಿಯಲ್ಲಿ ಇಂದಿಗೂ ಮೀನುಗಾರರ ಪ್ರಮುಖ ಬೇಡಿಕೆಗಳಿಗೆ ಬಿಜೆಪಿ ಸರ್ಕಾರ ಸ್ಪಂದಿಸಿಲ್ಲ. ಈ ಭಾಗದಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ. ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಎಲ್ಲ ಕ್ಷೇತ್ರಗಳಲ್ಲೂ ಸರ್ಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಪ್ರಜಾಧ್ವನಿ ಯಾತ್ರೆಯಿಂದ ಒಂದು ದಿನ ವಿರಾಮ ತೆಗೆದುಕೊಂಡಿದ್ದಾರೆ.  ಫೆಬ್ರವರಿ 17 ರಂದು ಬಜೆಟ್ ಮಂಡನೆಯಲ್ಲಿ ಪಾಲ್ಗೋಳ್ಳಲಿದ್ದಾರೆ.  ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ, ಡಾ.ಜಿ.ಪರಮೇಶ್ವರ ಸೇರಿದಂತೆ ದಲಿತ ಮುಖಂಡರು ಶಿವಕುಮಾರ್ ಅವರೊಂದಿಗೆ ದಲಿತ-ಒಕ್ಕಲಿಗ ಸಂಯೋಜನೆಗೆ ಕೆಲಸ ಮಾಡಲಿದ್ದಾರೆ.

ವೀರಶೈವ-ಲಿಂಗಾಯತ, ಹಿಂದುಳಿದ ಕುರುಬ ಮತ್ತು ಅಲ್ಪಸಂಖ್ಯಾತರ ಸಂಯೋಜನೆಗಾಗಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ವೀರಶೈವ-ಲಿಂಗಾಯತ ಮುಖಂಡರು ಸಿದ್ದರಾಮಯ್ಯ ಅವರ ಜತೆಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com