ರಾಜ್ಯ ಗೆಲ್ಲಲು ಗುಜರಾತ್ ಮಾದರಿ ಪ್ರಯೋಗ; ಕಾಂಗ್ರೆಸ್‌ಗೆ 160 ಸ್ಥಾನ ಪಾಕಿಸ್ತಾನದ ವರದಿಯಿರಬೇಕು: ಸಿ.ಟಿ.ರವಿ ವ್ಯಂಗ್ಯ
ಕಾಂಗ್ರೆಸ್ ಪಕ್ಷದ ಸಮೀಕ್ಷೆಯ ಪ್ರಕಾರ ಚುನಾವಣೆಯಲ್ಲಿ 160 ಸ್ಥಾನ ಸಿಗುತ್ತದೆ ಎಂದು ಡಿ.ಕೆ.ಶಿವಕುಮಾರ್ ಹೇಳಿಕೊಂಡಿದ್ದಾರೆ. ಬಹುಶಃ ಅವರು ಪಾಕಿಸ್ತಾನದಿಂದ ವರದಿ ಪಡೆದಿರಬೇಕು’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
Published: 04th February 2023 08:42 AM | Last Updated: 04th February 2023 04:30 PM | A+A A-

ಸಿ.ಟಿ ರವಿ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಮೀಕ್ಷೆಯ ಪ್ರಕಾರ ಚುನಾವಣೆಯಲ್ಲಿ 160 ಸ್ಥಾನ ಸಿಗುತ್ತದೆ ಎಂದು ಡಿ.ಕೆ.ಶಿವಕುಮಾರ್ ಹೇಳಿಕೊಂಡಿದ್ದಾರೆ. ಬಹುಶಃ ಅವರು ಪಾಕಿಸ್ತಾನದಿಂದ ವರದಿ ಪಡೆದಿರಬೇಕು’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಪ್ರಮುಖ ನಾಯಕರ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಾಕಿಸ್ತಾನದ ಈಗಿನ ಸರ್ಕಾರ ಪತನ ಆಗುತ್ತದೆ ಎಂಬ ಮಾಹಿತಿ ಇದೆ. ಬಹುಶಃ ಅಲ್ಲಿಂದ ವರದಿ ತರಿಸಿಕೊಂಡಿರಬೇಕು ಎಂದರು. ಕರ್ನಾಟಕದಲ್ಲೂ ಉತ್ತರ ಪ್ರದೇಶ, ಗೋವಾ ಮತ್ತು ಗುಜರಾತ್ ಮಾದರಿಯ ಫಲಿತಾಂಶವೇ ಬರುತ್ತದೆ. ಕಾಂಗ್ರೆಸ್‌ನವರು 160 ರ ಹಗಲುಗನಸು ಕಾಣುತ್ತಿರಲಿ ಎಂದರು.
ಚುನಾವಣೆಯಲ್ಲಿ ಗೆಲ್ಲಲೇಬೇಕಾದರೆ ಮೊದಲಿಗೆ ಫಲಾನುಭವಿಗಳ ಮನಸ್ಸು ಗೆಲ್ಲಬೇಕಾಗಿದೆ. ಆದ್ದರಿಂದ ಫಲಾನುಭವಿಗಳ ಜತೆ ನಿಕಟ ಸಂಪರ್ಕ ಹೊಂದಲು ಎಲ್ಲ ಜಿಲ್ಲೆಗಳಲ್ಲೂ ಫಲಾನುಭವಿಗಳ ಸಮಾವೇಶ ನಡೆಸಬೇಕು ಎಂದು ಶುಕ್ರವಾರ ರಾತ್ರಿ ನಡೆದ ಪ್ರಮುಖ ನಾಯಕರ ಸಭೆಯಲ್ಲಿ ನಿರ್ಧರಿಸಲಾಯಿತು ರವಿ ತಿಳಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚುನಾವಣಾ ಸಿದ್ಧತೆ ಪ್ಲಾನ್: ನಿಚ್ಚಳ ಬಹುಮತದೊಂದಿಗೆ ಪಕ್ಷ ಅಧಿಕಾರಕ್ಕೆ ಬರುವ ಸಂಕಲ್ಪ!
ಗುಜರಾತ್ ಮತ್ತು ಉತ್ತರ ಪ್ರದೇಶ ರಾಜ್ಯಗಳ ಚುನಾವಣೆಗಳ ಸಂದರ್ಭದಲ್ಲೂ ಫಲಾನುಭವಿಗಳ ಸಮಾವೇಶಗಳನ್ನು ವ್ಯಾಪಕವಾಗಿ ನಡೆಸಲಾಗಿತ್ತು. ಅದರಿಂದಾಗಿ ಆ ರಾಜ್ಯಗಳ ಚುನಾವಣೆಗಳಲ್ಲಿ ಭರ್ಜರಿ ಗೆಲುವು ಪಡೆಯಲು ಸಾಧ್ಯವಾಯಿತು. ಅದೇ ಪ್ರಯೋಗವನ್ನು ಇಲ್ಲೂ ನಡೆಸಲಾಗುವುದು ಎಂದು ಹೇಳಿದರು.
ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಕೇಂದ್ರ ಅಥವಾ ರಾಜ್ಯ ಸರ್ಕಾರಗಳ ಒಂದಲ್ಲ ಒಂದು ಕಾರ್ಯಕ್ರಮಗಳ ಫಲಾನುಭವಿಗಳು ಶೇ 70 ರಷ್ಟು ಇದ್ದಾರೆ. ಅವರನ್ನು ಬಿಜೆಪಿ ಮತದಾರರನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತೇವೆ ಎಂದು ರವಿ ತಿಳಿಸಿದ್ದಾರೆ.