ತನ್ನ ಪ್ರಣಾಳಿಕೆಯ ಶೇ 25ರಷ್ಟು ಭರವಸೆಯನ್ನೂ ಬಿಜೆಪಿ ಈಡೇರಿಸಿಲ್ಲ: ಡಿಕೆ.ಶಿವಕುಮಾರ್

ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಶೇ.25ರಷ್ಟು ಭರವಸೆಯನ್ನೂ ಬಿಜೆಪಿ ಈಡೇರಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶನಿವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಮಾಲೂರು: ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಶೇ.25ರಷ್ಟು ಭರವಸೆಯನ್ನೂ ಬಿಜೆಪಿ ಈಡೇರಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶನಿವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಮಾಲೂರಿನಲ್ಲಿ ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಬಿಜೆಪಿಗೆ ಕರ್ನಾಟಕದ ಜನರ ಬಗ್ಗೆ ಕಾಳಜಿ ಇಲ್ಲ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಜನರು ಅಸಮಾಧಾನಗೊಂಡಿದ್ದಾರೆಂದು ಹೇಳಿದರು.

ಕಾಂಗ್ರೆಸ್ ನಾಯಕರ ಬಸ್ ಯಾತ್ರೆ ಪಂಕ್ಚರ್ ಆಗಲಿಗೆ ಎಂಬ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ‘ಯಾರ ಬಸ್ ಪಂಕ್ಚರ್ ಆಗಲಿದೆ ಎಂಬುದು ಇನ್ನು 60 ದಿನಗಳಲ್ಲಿ ಗೊತ್ತಾಗಲಿದೆ’ ಎಂದು ತಿಳಿಸಿದರು.

ಇದೇ ವೇಳೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಪಕ್ಷವೆಂಬ ಗಡಿ ಬಿಟ್ಟು, ಯಾವುದೇ ರಾಜಕೀಯ ನಾಯಕರು ನಮ್ಮ ಪಕ್ಷಕ್ಕೆ ಬರುವುದಾದರೆ ನಾವು ಅವರನ್ನು ಗೌರವಿಸುತ್ತೇವೆಂದು ಹೇಳಿದರು.

ಬಳಿಕ ಮಾತನಾಡಿದ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ನಳಿನ್ ಕುಮಾರ್ ಕಟೀಲ್ ಅವರು, ತಮ್ಮ ಪಕ್ಷದ ಕಾರ್ಯಕರ್ತರಿಗೆ “ರಸ್ತೆ ಮತ್ತು ಚರಂಡಿಗಳಂತಹ ಅಭಿವೃದ್ಧಿ ಸಮಸ್ಯೆಗಳ ಬದಲಿಗೆ ಲವ್ ಜಿಹಾದ್‌ಗೆ ಗಮನ ಕೊಡಿ” ಎಂದು ಹೇಳಿದ್ದಾರೆ. ಇದು ಬಿಜೆಪಿಯ ಪ್ರಣಾಳಿಕೆಯಾಗಿದ್ದು, ಹೀಗಾಗಿಯೇ ಬಿಜೆಪಿ ನಾಯಕರು ಅಭಿವೃದ್ಧಿ ವಿಷಯಗಳ ಬಗ್ಗೆ ಮಾತನಾಡದೇ ಲವ್ ಜಿಹಾದ್‌ನಂತಹ ಕೋಮು ವಿಚಾರಗಳತ್ತ ಗಮನ ಹರಿಸುತ್ತಿದ್ದಾರೆಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com