ಅಲ್ಪಸಂಖ್ಯಾತರ ಓಲೈಸಲು ಸಿದ್ದರಾಮಯ್ಯ ದೂರದೃಷ್ಟಿಯಿಲ್ಲದೆ ಭರವಸೆ ನೀಡುತ್ತಿದ್ದಾರೆ: ಅರುಣ್ ಸಿಂಗ್

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರು ಶನಿವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಲವಾರು ರಾಜ್ಯಗಳ ಚುನಾವಣೆಯಲ್ಲಿ ಸೋತರೂ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವನ್ನು ಆ ಪಕ್ಷ ಮುಂದುವರೆಸಿದೆ ಎಂದು ವ್ಯಂಗ್ಯವಾಡಿದ್ದಾರೆ.
ಅರುಣ್ ಸಿಂಗ್
ಅರುಣ್ ಸಿಂಗ್

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರು ಶನಿವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಲವಾರು ರಾಜ್ಯಗಳ ಚುನಾವಣೆಯಲ್ಲಿ ಸೋತರೂ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವನ್ನು ಆ ಪಕ್ಷ ಮುಂದುವರೆಸಿದೆ ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಹಿಂದೂಗಳನ್ನು ಅವಮಾನಿಸುವ ಮೂಲಕ ಸಿದ್ದರಾಮಯ್ಯ ಅವರು ರಾಜಕೀಯ ಮಾಡುತ್ತಿದ್ದಾರೆಂದು ಹೇಳಿದರು.

‘ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಗೆ ಉತ್ತೇಜನ ನೀಡಲಾಗಿತ್ತು. ಅವರ ಅಧಿಕಾರಾವಧಿಯಲ್ಲಿ ಹಿಂದೂಗಳ ಹತ್ಯೆ ಕೂಡ ಹೆಚ್ಚಾಗಿತ್ತು ಎಂದು ಆರೋಪಿಸಿದರು.

ಪ್ರತಿ ಮನೆಗೂ ಪ್ರತಿ ತಿಂಗಳು 200 ಯೂನಿಟ್‌ ಉಚಿತ ವಿದ್ಯುತ್ ಹಾಗೂ ಕುಟುಂಬದ ಓರ್ವ ಮಹಿಳೆ ಪ್ರತೀ ತಿಂಗಳು ರೂ.2000 ನೀಡುವುದಾಗಿ ಕಾಂಗ್ರೆಸ್ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ದೂರದೃಷ್ಟಿಯಿಲ್ಲದೆ ಘೋಷಣೆಗಳನ್ನು ಮಾಡುತ್ತಿದೆ. ಈ ಭರವಸೆಗಳನ್ನು ಈಡೇರಿಸಲು ಅನುದಾನ ಸಾಕಾಗುವುದಿಲ್ಲ. ಮತದಾರರಿಗೆ ಚಂದ್ರ, ನಕ್ಷತ್ರಗಳನ್ನು ತೋರಿಸಿ ತಂದುಕೊಡುವ ಭರವಸೆ ನೀಡುತ್ತಿರುವ ಕಾಂಗ್ರೆಸ್, ಅಂತಿಮವಾಗಿ ರಾಜಸ್ಥಾನ- ಛತ್ತೀಸ್ಗಢದಂತೆ ನೀಡುವಲ್ಲಿ ವಿಫಲವಾಗುತ್ತದೆ. ರಾಜ್ಯದಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವುದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾತನಾಡಿ, ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ 130-140 ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷವು ಎಸ್‌ಸಿ/ಎಸ್‌ಟಿ ಮತ್ತು ಒಬಿಸಿಗಳ ಮನೆಗಳಿಗೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸುವ ಮೂಲಕ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿದೆ ಎಂದು ಒತ್ತಿ ಹೇಳಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ನಡುವಿನ ಭಿನ್ನಾಭಿಪ್ರಾಯಗಳು ಕಾಂಗ್ರೆಸ್ ಪಕ್ಷದ ಬಸ್ ಯಾತ್ರೆ ಪಂಕ್ಚರ್ ಆಗುವಂತೆ ಮಾಡಲಿದೆ. ಕಾಂಗ್ರೆಸ್ ನಲ್ಲಿ ಇಬ್ಬರು ನಾಯಕರು ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಸುರಕ್ಷಿತ ಕ್ಷೇತ್ರಕ್ಕಾಗಿನ ಸಿದ್ದರಾಮಯ್ಯ ಅವರ ಹುಡುಕಾಟ ಇನ್ನೂ ಮುಗಿದಿಲ್ಲ ಎಂದು ವ್ಯಂಗ್ಯವಾಡಿದರು.

ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ ದಲಿತ ವಿರೋಧಿ ಪಕ್ಷವಾಗಿದ್ದು, ಇದನ್ನು ಬಯಲಿಗೆಳೆಯಬೇಕಿದೆ ಎಂದು ಹೇಳಿದರು.  

ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ್ದು, ಡಾ.ಜಿ.ಪರಮೇಶ್ವರ ಅವರನ್ನು ರಾಜಕೀಯವಾಗಿ ಮುಗಿಸಿದರು. ಈಗ ಕೆ.ಎಚ್.ಮುನಿಯಪ್ಪ ಅವರನ್ನು ಮುಳುಗಿಸಿದ್ದಾರೆ. ಆದರೆ, ನಾವು ಎಸ್‌ಸಿ/ಎಸ್‌ಟಿ ಕೋಟಾ ಹೆಚ್ಚಿಸಿ ಸಾಮಾಜಿಕ ನ್ಯಾಯ ಕೊಟ್ಟಿದ್ದೇವೆ ಎಂದು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಮಾತನಾಡಿ, ಕರ್ನಾಟಕದಲ್ಲಿ ಬಿಜೆಪಿಗೆ ಜನತೆ ಸಂಪೂರ್ಣ ಬಹುಮತ ನೀಡಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com